ತೃತೀಯ ವಿಶ್ವ ಹವ್ಯಕ ಸಮ್ಮೇಳನ ಬೆಂಗಳೂರಿನಲ್ಲಿ ಉದ್ಘಾಟನೆ |

December 27, 2024
9:14 PM

ಅಖಿಲ ಹವ್ಯಕ ಮಹಾಸಭೆಗೆ 81 ವರ್ಷಗಳು ತುಂಬಿದ ಸಂಭ್ರಮದಲ್ಲಿ ವಿಶ್ವಹವ್ಯಕ ಸಮ್ಮೇಳನವು ಬೆಂಗಳೂರಿನ ಅರಮನೆ ಮೈದಾನದಲ್ಲಿ ಶುಕ್ರವಾರ ಉದ್ಘಾಟನೆಗೊಂಡಿತು. ಮೂರು ದಿನಗಳ ಕಾಲ ನಡೆಯುವ ತೃತೀಯ ವಿಶ್ವ ಹವ್ಯಕ ಸಮ್ಮೇಳನಕ್ಕೆ  ಶ್ರೀ ರಾಘವೇಶ್ವರ ಭಾರತೀ ಶ್ರೀಗಳು  ಚಾಲನೆ ನೀಡಿದರು.…..ಮುಂದೆ ಓದಿ….

Advertisement

ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಹವ್ಯಕ ಬ್ರಾಹ್ಮಣ ಸಮಾಜವು ಕೃಷಿಯನ್ನೇ ಆಧಾರವಾಗಿಸಿಕೊಂಡು ಬದುಕು ಸಾಗಿಸುತ್ತಿದೆ. ಅದರಲ್ಲೂ ಉತ್ತರ ಕನ್ನಡ-ದಕ್ಷಿಣ ಕನ್ನಡದ ಭಾಗದಲ್ಲಿ ಹೆಚ್ಚಾಗಿ ಈ ಸಮುದಾಯ ಇದೆ.  ನನ್ನ ಬಳಿ ಪ್ರಮುಖವಾಗಿ ಅಡಿಕೆ ಸಂಬಂಧಿತ ಸಮಸ್ಯೆಗಳನ್ನು ಹೇಳಿಕೊಂಡು ಬರುತ್ತಾರೆ.  ಅಡಿಕೆ ಬೆಳೆಗಾರರ ಯಾವುದೇ ಸಮಸ್ಯೆಗಳಿಗೆ ನಾವು ಜೊತೆಯಾಗಿ ಇರುತ್ತೇವೆ ಎಂದು ಹೇಳಿದರು.

ವಿಶ್ವ ಹವ್ಯಕ ಸಮ್ಮೇಳನಕ್ಕೆ ಚಾಲನೆ ನೀಡಿದ  ಶ್ರೀ ರಾಘವೇಶ್ವರ ಭಾರತೀ ಶ್ರೀಗಳು , ಕಡಿಮೆ ಜನಸಂಖ್ಯೆ ಹೊಂದಿದ ಹವ್ಯಕ ಸಮುದಾಯದ ವಿಶಿಷ್ಟ ಸಾಧನೆ ಮತ್ತು ಸಮಾಜಕ್ಕೆ ಅಪಾರ ಕೊಡುಗೆಗಳನ್ನು ನೀಡುತ್ತಿದೆ ಎಂದರು.

 

 

ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ದೇಶದ ಚಿಂತನೆಗೆ ಪೂರಕವಾಗಿ ಬದುಕುತ್ತಿರುವ ಮಾದರಿ ಸಮಾಜವೇ ಹವ್ಯಕ ಸಮುದಾಯ. ಸ್ವಾಭಿಮಾನಿ ಹಾಗೂ ಸೌಹಾರ್ದಯುತ ಮಾದರಿ ಬದುಕಿಗೆ ಹೆಸರಾಗಿರುವ ಹವ್ಯಕ ಸಮುದಾಯ ವಿಶ್ವಮಟ್ಟದ ಸಮ್ಮೇಳನದ ಮೂಲಕ ಸಮುದಾಯದ ವಿಶಿಷ್ಟತೆಯನ್ನು ಜಗತ್ತು ನೋಡುವಂತಾಗಿದ್ದು ಸಮುದಾಯವನ್ನು ಸಂಘಟಿತ ಮಾರ್ಗದಲ್ಲಿ ಕೊಂಡೊಯ್ಯುವ ನಿಟ್ಟಿನಲ್ಲಿ ಸಮ್ಮೇಳನ ಯಶಸ್ವಿಯಾಗಲೆಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಮಂತ್ರಾಲಯದ ಶ್ರೀರಾಘವೇಂದ್ರ ಮಠದ ಶ್ರೀ ಸುಬುಧೇಂದ್ರ ತೀರ್ಥ ಮಹಾಸ್ವಾಮಿಗಳು ಹಾಗೂ ಆದಿಚುಂಚನಗಿರಿ ಮಠದ ಸೌಮ್ಯನಾಥ ಮಹಾಸ್ವಾಮಿಗಳು , ಯತಿರಾಜ ಜೀ ಶ್ರೀ ದಿವ್ಯ ಸಾನಿಧ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ,  ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಉಪಮುಖ್ಯಮಂತ್ರಿ ಡಾ.ಸಿಎನ್.ಅಶ್ವತ್ಥನಾರಾಯಣ್, ವಿಶ್ವವಾಣಿ ದಿನಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್, ಖ್ಯಾತ ವಕೀಲ ಅಶೋಕ್ ಹಾರನಹಳ್ಳಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಹೇಶ್ ಜೋಷಿ, ಅಖಿಲ ಹವ್ಯಕ ಮಹಾಸಭಾದ ಅಧ್ಯಕ್ಷ ಡಾ. ಗಿರಿಧರ್ ಕಜೆ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು  ಹಾಗೂ ವಿವಿಧ ಸಮುದಾಯದ ಬಂಧುಗಳು ಉಪಸ್ಥಿತರಿದ್ದರು.  ಹವ್ಯಕ ಮಹಾಸಭೆಯ ಅಧ್ಯಕ್ಷ ಗಿರಿಧರ ಕಜೆ ಸ್ವಾಗತಿಸಿ ಪ್ರಸ್ತಾವನೆಗೈದರು.

ಈ ಸಂದರ್ಭ 67 ಶ್ರೇಷ್ಠ ಸಾಧಕರಿಗೆ ಸನ್ಮಾನ, 300ಕ್ಕೂ ಅಧಿಕ ಸುಪ್ರಸಿದ್ಧ ಕಲಾವಿದರಿಂದ ಸಾಂಸ್ಕೃತಿಕ ವೈಭವ, ಹಳ್ಳಿಸೊಗಡಿನ ಆಲೇಮನೆ, 100ಕ್ಕೂ ಅಧಿಕ ಪಾರಂಪರಿಕ ವಸ್ತುಗಳ ಪ್ರದರ್ಶನ, ದೇಶೀ ಗೋಪ್ರದರ್ಶನಿ, 6,000 ಹವ್ಯಕ ಕನ್ನಡ ಪುಸ್ತಕಗಳ ಪ್ರದರ್ಶನ, 108 ವರ್ಷಗಳ ಪಂಚಾಗ ದರ್ಶನ, ವೈಭವದ ಗಾಯತ್ರೀ ಥೀಮ್ ಪಾರ್ಕ್, ವೈವಿಧ್ಯಮಯ ಧಾರ್ಮಿಕ ಕಾರ್ಯಕ್ರಮಗಳು, ಸಮಗ್ರ ಅಡಿಕೆ ಪ್ರದರ್ಶನ, 100ಕ್ಕೂ ಅಧಿಕ ಹವಿಸವಿಯ ಪಾಕೋತ್ಸವ, 18 ವಿಷಯಗಳ ಚಿಂತನ ಮಂಥನ, 81 ಹವಿ ತಿನಿಸುಗಳ ಮಾರಾಟ, 1081 ಜನರ ಪ್ರಧಾನ ಸಮಿತಿ – ಸಂಚಾಲನಾ ಸಮಿತಿ, ಸಹಸ್ರಾಧಿಕ ಕಾರ್ಯಕರ್ತರ ಸಮ್ಮಿಲನ ಮುಂತಾದವು ಈ ಐತಿಹಾಸಿಕ ಮೂರು ದಿನಗಳ ಕಾರ್ಯಕ್ರಮದಲ್ಲಿ ಇರಲಿವೆ. 60 ಜಾತಿ – ಉಪಜಾತಿಗಳ ಸಂಘಟನೆಗಳಿಗೆ ಸೌಹಾರ್ದ ಸನ್ಮಾನ ವಿಶೇಷವಾಗಿ ನಡೆಯಲಿದೆ.

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಒಂದೆಡೆ ಮಳೆ-ಇನ್ನೊಂದೆಡೆ ಹೀಟ್‌ವೇವ್‌ | ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
April 6, 2025
11:00 AM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್‌ನ ಭೂಕಂಪ | ಭಾರತೀಯ ಸೇನಾ ಆಸ್ಪತ್ರೆಯಲ್ಲಿ 700 ಕ್ಕೂ ಅಧಿಕ ರೋಗಿಗಳಿಗೆ ಚಿಕಿತ್ಸೆ
April 6, 2025
10:00 AM
by: ದ ರೂರಲ್ ಮಿರರ್.ಕಾಂ
ಮಾನವ-ಆನೆ ಸಂಘರ್ಷ ತಡೆಗೆ ಕ್ರಮ | 200 ಕೋ. ರೂ. ವೆಚ್ಚದ ರೈಲ್ವೆ ಬ್ಯಾರಿಕೇಡ್ ಕಾಮಗಾರಿ
April 6, 2025
9:00 AM
by: The Rural Mirror ಸುದ್ದಿಜಾಲ
ಪಶು ಸಖಿಯರ ಮಾಸಿಕ ಗೌರವಧನ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ
April 6, 2025
7:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group