Advertisement
MIRROR FOCUS

ಹಲಸಿನ ಹಣ್ಣಿನಲ್ಲಿರುವ ವಿಟಮಿನ್ಸ್‌ಗಳು | ರಕ್ತದೊತ್ತಡ, ರಕ್ತಹೀನತೆ, ಹೃದಯ ಕಾಯಿಲೆಗೆ ಹಲಸಿನ ಹಣ್ಣು ರಾಮ ಬಾಣ

Share

ಹಲಸಿನ ಹಣ್ಣಿನಲ್ಲಿ(Jack fruit) ವಿಟಮಿನ್(Vitamins) ಅಂಶಗಳಾದ, ಖನಿಜಾಂಶಗಳು, ಕಾರ್ಬೋಹೈಡ್ರೇಟ್ ಅಂಶಗಳು, ಎಲೆಕ್ಟ್ರೋಲೈಟ್ ಅಂಶಗಳು, ಪೊಟಾಷ್ಯಿಯಂ ಹಾಗೂ ನಾರಿನಾಂಶಗಳು(Minerals, carbohydrates, electrolytes, potassium and fiber) ಯಥೇಚ್ಛವಾಗಿ ಸಿಗುವುದರಿಂದ, ಇದೊಂದು ಆರೋಗ್ಯಕಾರಿ ಹಣ್ಣು(Healthy fruit) ಎನ್ನುವು ದರಲ್ಲಿ ಎರಡು ಮಾತಿಲ್ಲ. ಅಧಿಕ ರಕ್ತದೊತ್ತಡ(BP) ಸಮಸ್ಯೆಯಿಂದ ಬಳಲುತ್ತಿರು ವವರು, ಹಲಸಿನ ಹಣ್ಣುನ್ನು ಮಿತವಾಗಿ ಸೇವನೆ ಮಾಡುತ್ತಾ ಬಂದರೆ, ಈ ಕಾಯಿಲೆಯನ್ನು ನಿಯಂತ್ರ ಣದಲ್ಲಿ ಇಟ್ಟುಕೊಳ್ಳಬಹುದು. ಪ್ರಮುಖವಾಗಿ ಈ ಹಣ್ಣಿನಲ್ಲಿ ಪೊಟಾಷ್ಯಿಯಂ ಅಂಶ ಅಧಿಕವಾಗಿ ಕಂಡುಬರುವುದರಿಂದ, ಈ ಕಾಯಿಲೆಯನ್ನು ನಿಯಂತ್ರಣದಲ್ಲಿಡಲು ನೆರವಾಗುತ್ತದೆ.

ಇಲ್ಲಿ ಪ್ರಮುಖವಾಗಿ ನೆನಪಿನಲ್ಲಿ ಇಟ್ಟುಕೊಳ್ಳಬೇಕಾದ ಸಂಗತಿ ಏನೆಂದರೆ, ಪೊಟ್ಯಾಶಿಯಂ ಅಂಶ ದೇಹದಲ್ಲಿ ಸೋಡಿಯಂ ಅಂಶವನ್ನು ನಿಯಂತ್ರಣ ಮಾಡಲು ನೆರವಾಗುತ್ತದೆ. ಇದರಿಂದ ಅಧಿಕ ರಕ್ತದೊತ್ತಡದ ಸಮಸ್ಯೆ ನಿಯಂತ್ರಣಕ್ಕೆ ಬರುವುದು ಮಾತ್ರವಲ್ಲದೆ, ಹೃದಯಕ್ಕೆ ಸಂಬಂಧಪಟ್ಟ ಇನ್ನಿತರ ಆರೋಗ್ಯ ಸಮಸ್ಯೆಗಳು ಕೂಡ ದೂರ ವಾಗುತ್ತದೆ.

ಮೊದಲೇ ಹೇಳಿದ ಹಾಗೆ ಈ ಹಣ್ಣಿನಲ್ಲಿ ನಾರಿನಾಂಶ, ಯಥೇಚ್ಛವಾಗಿ ಕಂಡು ಬರುವುದರಿಂದ, ಜೀರ್ಣಾಂಗ ವ್ಯವಸ್ಥೆಗೆ ಸಂಬಂಧಪಟ್ಟ ಸಮಸ್ಯೆಗಳನ್ನು ನಿವಾರಿಸು ವಲ್ಲಿ, ಪ್ರಮುಖ ಪಾತ್ರ ವಹಿಸುತ್ತದೆ. ಹೀಗಾಗಿ ನಿಯಮಿತವಾಗಿ ಈ ಹಣ್ಣನ್ನು ಸೇವನೆ ಮಾಡುವು ದರಿಂದ, ಜೀರ್ಣ ಪ್ರಕ್ರಿಯೆಗಳು ಸರಿಯಾಗಿ ನಡೆದು, ಅಜೀರ್ಣತೆ, ಮಲಬದ್ಧತೆ ಸಮಸ್ಯೆ ಕ್ರಮೇಣವಾಗಿ ದೂರ ವಾಗುತ್ತಾ ಹೋಗುತ್ತದೆ. ಹಲಸಿನ ಹಣ್ಣಿನಲ್ಲಿ ಆಂಟಿಆಕ್ಸಿಡೆಂಟ್ ಹಾಗು ಫ್ಲೇವ ನಾಯ್ಡ್ ಅಂಶಗಳು ಕೂಡ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುತ್ತದೆ. ಅದರಲ್ಲೂ ಆಂಟಿಆಕ್ಸಿಡೆಂಟ್ ಅಂಶಗಳು ದೇಹದ ಲ್ಲಿರುವ ಕಂಡು ಬರುವ ಫ್ರೀ ರಾಡಿಕಲ್ ಗಳ ವಿರುದ್ಧ ರಕ್ಷಣಾತ್ಮ ಕವಾಗಿ ಕೆಲಸ ಮಾಡುತ್ತವೆ. ಇದರಿಂದ ಕ್ಯಾನ್ಸರ್ ಕಣಗಳು ನಮ್ಮ ದೇಹದಲ್ಲಿ ಉತ್ಪತ್ತಿ ಆಗುವುದನ್ನು ತಡೆಯಲು ನೆರವಾಗುತ್ತದೆ. ಕ್ಯಾನ್ಸರ್ ಮಾರಕ, ಆದರೆ ಶ್ವಾಸಕೋಶದ ಕ್ಯಾನ್ಸರ್ ಅದಕ್ಕಿಂತ ಡೇಂಜರ್!

ರಕ್ತಹೀನತೆಯ ಸಮಸ್ಯೆಯು ಕಂಡುಬಂದರೆ, ಆಗ ನಾಲ್ಕು ಹಜ್ಜೆ ನಡೆದರೂ ಸಾಕು ತುಂಬಾನೇ ಸುಸ್ತು, ಬಳಲಿಕೆ ಆಗುವ ಅನು ಭವ ಉಂಟಾಗುತ್ತದೆ.ಇದಕ್ಕೆ ಪ್ರಮುಖ ಕಾರಣ, ಆರೋಗ್ಯದಲ್ಲಿ ಕಂಡು ಬರುವ ಕಬ್ಬಿಣಾಂಶದ ಕೊರತೆ. ಹಾಗಾಗಿ ಕಬ್ಬಿಣದ ಅಂಶವನ್ನು ಹೆಚ್ಚು ಒಳಗೊಂಡ ಆಹಾರ ಪದಾರ್ಥಗಳ ಮೇಲೆ ಗಮನ ಹರಿಸಬೇಕು. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ಹಲಸಿನ ಹಣ್ಣು. ಹೌದು ಈ ಹಣ್ಣಿನಲ್ಲಿ, ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಠಿಕ ಸತ್ವಗಳು ಯತೇಚ್ಛವಾಗಿ ಕಂಡು ಬರುತ್ತದೆ. ಉದಾಹರಣೆಗೆ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಇ, ವಿಟಮಿನ್ ಕೆ ಮತ್ತು ನಯಾಸಿನ್ ಅಂಶದ ಜೊತೆಗೆ ತಾಮ್ರ ಮತ್ತು ಫೋಲೆಟ್ ಅಂಶಗಳು ಕೂಡ ಹೆಚ್ಚಾಗಿ ಇರುತ್ತವೆ. ಇದು ದೇಹದಲ್ಲಿ ಕಬ್ಬಿಣದ ಅಂಶದ ಕೊರತೆ ಯನ್ನು ನೀಗಿಸಿ, ಕೆಂಪು ರಕ್ತ ಕಣಗಳನ್ನು ಹೆಚ್ಚಿಸುತ್ತದೆ.ರಕ್ತಹೀನತೆ ಸಮಸ್ಯೆಗೆ ಈ ಆಹಾರಗಳನ್ನು ಹೆಚ್ಚಾಗಿ ಸೇವಿಸಿ.

ಹೃದಯದ ಆರೋಗ್ಯವನ್ನು ಚೆನ್ನಾಗಿಟ್ಟು ಕೊಂಡಿರಬೇಕು, ಎಂದರೆ ಸರಿಯಾದ ಆಹಾರ ಪದ್ಧತಿ ಹಾಗೂ ಜೀವನ ಶೈಲಿಯನ್ನು ಬೆಳೆಸಿಕೊಳ್ಳಬೇಕು.ಇಲ್ಲಾಂದ್ರೆ ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗಳು ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ತಮ್ಮ ಹೃದಯಕ್ಕೆ ಅನುಕೂಲಕರ ವಾದ ಆಹಾರ ಪದಾರ್ಥ ಗಳನ್ನು ಮಾತ್ರ ಸೇವನೆ ಮಾಡಬೇಕು. ಈ ನಿಟ್ಟಿನಲ್ಲಿ ನೋಡುವುದಾದರೆ, ಹಲಸಿನ ಹಣ್ಣಿನಲ್ಲಿ ವಿಟಮಿನ್ ಬಿ6 ಅಂಶ ಹೆಚ್ಚಾಗಿ, ಕಂಡು ಬರುತ್ತದೆ. ಇವು ರಕ್ತ ಸಂಚಾರದಲ್ಲಿ ಕಂಡುಬರುವ ಹೋಮೊಸಿಸ್ಟೀನೆ ಅಂಶಗಳನ್ನು ಕಡಿಮೆ ಮಾಡಿ, ಹೃದಯದ ರಕ್ತನಾಳಗಳಿಗೆ ಸರಿಯಾಗಿ ರಕ್ತ ಪೂರೈಕೆ ಆಗುವಂತೆ ಮಾಡುತ್ತದೆ. ಇದರಿಂದ ಹೃದಯ ಆರೋಗ್ಯ ಕೂಡ ಚೆನ್ನಾಗಿರುತ್ತದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

5 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

13 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

20 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

21 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

22 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

1 day ago