ವಿವೇಕಾನಂದ ಸಮೂಹ ಸಂಸ್ಥೆಗಳ ವಿನೂತನ ಹೆಜ್ಜೆ | ವಿವೇಕ ಸಂಜೀವಿನಿ ಹಸಿರು ಆವರಣ ಅಭಿಯಾನ |

July 16, 2024
7:56 PM
ಪುತ್ತೂರಿನ ವಿವೇಕಾನಂದ ಸಮೂಹ ಸಂಸ್ಥೆಗಳ ಸಹಯೋಗದೊಂದಿಗೆ ನಡೆದ ವಿವೇಕ ಸಂಜೀವಿನಿ ಹಸಿರು ಆವರಣ ಅಭಿಯಾನ ಆರಂಭಗೊಂಡಿತು.

ಶುದ್ಧವಾದ ಗಾಳಿ,ಒಳ್ಳೆಯ ವಾತಾವರಣ ನಮಗೆ ದೊರಕಬೇಕೆಂದರೆ ಅಲ್ಲಿ ಸಸ್ಯಗಳ ಸಂಖ್ಯೆ ಹೆಚ್ಚಾಗಿರಬೇಕು. ಕಾಲೇಜುಆವರಣ ಹಸಿರು ಸಸ್ಯಗಳಿಂದ ಕೂಡಿರಬೇಕು ಹಾಗೂ ಜ್ಞಾನದಜೊತೆಗೆ ಸಸ್ಯ ಸಂಪತ್ತನ್ನು ಬೆಳೆಸುವ ಜವಾಬ್ದಾರಿ ನಮ್ಮದಾಗಬೇಕು. ಹಸಿರಾದ ಪರಿಸರಕಣ್ಣಿಗೆ ಹೇಗೆ ಹಿತವೋ ಹಾಗೆಯೇಆರೋಗ್ಯಕ್ಕೂ ಒಳ್ಳೆಯದು , ಇದರಿಂದ ವಾಯುಮಾಲಿನ್ಯವನ್ನು ತಡೆಯಬಹುದು ಎಂದು ವಿವೇಕಾನಂದಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ.ದೇವಿಪ್ರಸಾದ್‍ಕೆ.ಎನ್ ಹೇಳಿದರು.

ಪುತ್ತೂರಿನ ವಿವೇಕಾನಂದ ಸಮೂಹ ಸಂಸ್ಥೆಗಳ ಸಹಯೋಗದೊಂದಿಗೆ ನಡೆದ ವಿವೇಕ ಸಂಜೀವಿನಿ ಹಸಿರು ಆವರಣ ಅಭಿಯಾನ ಉದ್ಘಾಟನಾ ಕಾರ್ಯಕ್ರಮದ ಮುಖ್ಯಅತಿಥಿಯಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ವಿವೇಕಾನಂದ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎ.ವಿ. ನಾರಾಯಣ್ ಮಾತನಾಡಿ,ಗಿಡಗಳನ್ನು ನೆಡುವುದರ ಮೂಲಕ ಪರಿಸರವನ್ನು ಸಂರಕ್ಷಿಸಬೇಕೇ ಹೊರತುಅದನ್ನುತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡು ಪರಿಸರವನ್ನು ಹಾಳುಮಾಡಬಾರದು. ಮಾನವಜೀವ ಸಂಕುಲಗಳನ್ನು ನಾಶ ಮಾಡುವುದರಜೊತೆಗೆ ಭೂಮಿಯ ವಿಕೋಪಕ್ಕೂ ಬಲಿಯಾಗುತ್ತಿದ್ದಾನೆಆದುದರಿಂದ ಗಿಡಗಳನ್ನು ಬೆಳೆಸಿ ನಾಡನ್ನು ಉಳಿಸಿ ಎಂದು ವಿದ್ಯಾರ್ಥಿಗಳಿಗೆ ಸಲಹೆಯನ್ನು ನೀಡಿದರು.
ಕಾರ್ಯಕ್ರಮವನ್ನು ಗಿಡನೆಡುವುದರ ಮೂಲಕ ಉದ್ಘಾಟಿಸಲಾಯಿತು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ ಎಂ.ಕೃಷ್ಣ ಭಟ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಕಾರ್ಯಕ್ರಮವನ್ನು ವಿವೇಕಾನಂದ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ.ಗುರುರಾಜ್ ಸ್ವಾಗತಿಸಿ, ವಿವೇಕಾನಂದ ಇಂಜಿನಿಯರಿಂಗ್‍ ಕಾಲೇಜಿನ ಎನ್ಎಸ್ಎಸ್ ಘಟಕದ ಸಂಯೋಜಕಿ ಪ್ರೊ.ನಿಶಾ ಜಿ.ಆರ್ ವಂದಿಸಿ, ಇಂಜಿನಿಯರಿಂಗ್‍ಕಾಲೇಜಿನ ಪ್ರಯೋಗಾಲಯ ಬೋಧಕ ಹರಿಪ್ರಸಾದ್ . ಡಿ ನಿರ್ವಹಿಸಿದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಿಸಾನ್ ಪಾಠಶಾಲೆ ಮೂಲಕ 20 ಲಕ್ಷ ರೈತರಿಗೆ ಆಧುನಿಕ ಕೃಷಿ ತರಬೇತಿ
January 8, 2026
10:40 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕ ಕಾಯ್ದೆಯಲ್ಲಿ ಮಹತ್ವದ ಬದಲಾವಣೆ | ಕೇಂದ್ರ ಸರ್ಕಾರದಿಂದ ಹೊಸ ಕರಡು ಮಸೂದೆ
January 8, 2026
10:34 PM
by: ದ ರೂರಲ್ ಮಿರರ್.ಕಾಂ
ಕುರಿ ಸಾಕಾಣಿಕ ಘಟಕ ಸ್ಥಾಪನೆಗೆ ಸಹಾಯಧನ
January 8, 2026
9:25 PM
by: ರೂರಲ್‌ ಮಿರರ್ ಸುದ್ದಿಜಾಲ
ವೃತ್ತಿಯಲ್ಲಿ ಇಂಗ್ಲಿಷ್ ಪ್ರೊಫೆಸರ್- ಕೃಷಿಕನಾಗಿಯೂ ಯಶಸ್ಸು…!
January 8, 2026
9:23 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror