ಶುದ್ಧವಾದ ಗಾಳಿ,ಒಳ್ಳೆಯ ವಾತಾವರಣ ನಮಗೆ ದೊರಕಬೇಕೆಂದರೆ ಅಲ್ಲಿ ಸಸ್ಯಗಳ ಸಂಖ್ಯೆ ಹೆಚ್ಚಾಗಿರಬೇಕು. ಕಾಲೇಜುಆವರಣ ಹಸಿರು ಸಸ್ಯಗಳಿಂದ ಕೂಡಿರಬೇಕು ಹಾಗೂ ಜ್ಞಾನದಜೊತೆಗೆ ಸಸ್ಯ ಸಂಪತ್ತನ್ನು ಬೆಳೆಸುವ ಜವಾಬ್ದಾರಿ ನಮ್ಮದಾಗಬೇಕು. ಹಸಿರಾದ ಪರಿಸರಕಣ್ಣಿಗೆ ಹೇಗೆ ಹಿತವೋ ಹಾಗೆಯೇಆರೋಗ್ಯಕ್ಕೂ ಒಳ್ಳೆಯದು , ಇದರಿಂದ ವಾಯುಮಾಲಿನ್ಯವನ್ನು ತಡೆಯಬಹುದು ಎಂದು ವಿವೇಕಾನಂದಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ.ದೇವಿಪ್ರಸಾದ್‍ಕೆ.ಎನ್ ಹೇಳಿದರು.
ಪುತ್ತೂರಿನ ವಿವೇಕಾನಂದ ಸಮೂಹ ಸಂಸ್ಥೆಗಳ ಸಹಯೋಗದೊಂದಿಗೆ ನಡೆದ ವಿವೇಕ ಸಂಜೀವಿನಿ ಹಸಿರು ಆವರಣ ಅಭಿಯಾನ ಉದ್ಘಾಟನಾ ಕಾರ್ಯಕ್ರಮದ ಮುಖ್ಯಅತಿಥಿಯಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ವಿವೇಕಾನಂದ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎ.ವಿ. ನಾರಾಯಣ್ ಮಾತನಾಡಿ,ಗಿಡಗಳನ್ನು ನೆಡುವುದರ ಮೂಲಕ ಪರಿಸರವನ್ನು ಸಂರಕ್ಷಿಸಬೇಕೇ ಹೊರತುಅದನ್ನುತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡು ಪರಿಸರವನ್ನು ಹಾಳುಮಾಡಬಾರದು. ಮಾನವಜೀವ ಸಂಕುಲಗಳನ್ನು ನಾಶ ಮಾಡುವುದರಜೊತೆಗೆ ಭೂಮಿಯ ವಿಕೋಪಕ್ಕೂ ಬಲಿಯಾಗುತ್ತಿದ್ದಾನೆಆದುದರಿಂದ ಗಿಡಗಳನ್ನು ಬೆಳೆಸಿ ನಾಡನ್ನು ಉಳಿಸಿ ಎಂದು ವಿದ್ಯಾರ್ಥಿಗಳಿಗೆ ಸಲಹೆಯನ್ನು ನೀಡಿದರು.
ಕಾರ್ಯಕ್ರಮವನ್ನು ಗಿಡನೆಡುವುದರ ಮೂಲಕ ಉದ್ಘಾಟಿಸಲಾಯಿತು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ ಎಂ.ಕೃಷ್ಣ ಭಟ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಕಾರ್ಯಕ್ರಮವನ್ನು ವಿವೇಕಾನಂದ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ.ಗುರುರಾಜ್ ಸ್ವಾಗತಿಸಿ, ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಎನ್ಎಸ್ಎಸ್ ಘಟಕದ ಸಂಯೋಜಕಿ ಪ್ರೊ.ನಿಶಾ ಜಿ.ಆರ್ ವಂದಿಸಿ, ಇಂಜಿನಿಯರಿಂಗ್‍ಕಾಲೇಜಿನ ಪ್ರಯೋಗಾಲಯ ಬೋಧಕ ಹರಿಪ್ರಸಾದ್ . ಡಿ ನಿರ್ವಹಿಸಿದರು.
ಅಕ್ರಮವಾಗಿ ಸುಮಾರು 68 ಟನ್ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಪೊಲೀಸರು…
ಬದುಕಿನ ಒಂದೊಂದು ಅಂಗವೂ ‘ಕಲಾತ್ಮಕ’. ಒದಗುವ ಸುಭಗತನವು ಅನುಭವವೇದ್ಯ. ಅಡುಗೆ ಮನೆಯು ಬರೇ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪ್ರಾಣಿಗಳು ಸುಡುಬಿಸಿಲಿಗೆ ಕಂಗಾಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲಿ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ…
ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕೀಕೃತ ಪಾವತಿ ಇಂಟರ್ ಫೇಸ್ - ಯುಪಿಐ ಸೇವೆಯ…