ಸಾಮಾಜಿಕ ಜಾಲ, ವೆಬ್‍ಸೈಟ್ ಮತ್ತು ಮಾಧ್ಯಮಗಳ ಅವಶ್ಯಕತೆ ಮತ್ತು ಅನುಷ್ಠಾನ ಹೇಗೆ? | ವಿವೇಕಾನಂದ ಕಾಲೇಜಿನಲ್ಲಿ ಕಾರ್ಯಾಗಾರ |

October 23, 2021
9:59 PM

ಸಾಮಾಜಿಕ ಜಾಲ, ವೆಬ್‍ಸೈಟ್ ಮತ್ತು ಮಾಧ್ಯಮಗಳ ಅವಶ್ಯಕತೆ ಮತ್ತು ಅನುಷ್ಟಾನ” ಎಂಬ ವಿಷಯದ ಕುರಿತಾಗಿ, ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಉಪನ್ಯಾಸಕರಿಗಾಗಿ ಒಂದು ದಿನದ ಕಾರ್ಯಾಗಾರವು ಪುತ್ತೂರು ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶನಿವಾರ ನಡೆಯಿತು.

Advertisement
Advertisement

ಕಾರ್ಯಾಗಾರಕ್ಕೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ. ಯಂ. ಕೃಷ್ಣ ಭಟ್ ಚಾಲನೆ ನೀಡಿ,”ನವ ಮಾಧ್ಯಮಗಳ ಬಳಕೆ ಸರಿಯಾದ ರೀತಿಯಲ್ಲಿ  ಆಗಬೇಕಿದೆ. ಶಿಕ್ಷಣ ಸಂಸ್ಥೆಯ ಉತ್ತಮ ಕಾರ್ಯಗಳು ಸಮಾಜಕ್ಕೆ ತಲುಪಬೇಕಿದೆ” ಎಂದರು.

Advertisement

ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ) ಇದರ ವತಿಯಿಂದ ವಿವೇಕಾನಂದ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ವಿವೇಕಾನಂದ ಶಿಕ್ಷಣ ಸಂಸ್ಥೆಗಳಿಗೆ ಈ ಕಾರ್ಯಾಗಾರ ಆಯೋಜಿಸಲಾಗಿತ್ತು.

Advertisement

ಈ ಸಂದರ್ಭ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ಮುರಳಿಧರ ಕೆ. ಪ್ರಸ್ತಾವನೆಗೈದು ಸ್ವಾಗತಿಸಿದರು. ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ಅಕ್ಷರೋದ್ಯಮದ ಮುಖ್ಯಸ್ಥ ಸುನಿಲ್ ಕುಲಕರ್ಣಿ,  ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ, ವಿವೇಕಾನಂದ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವತಿಯಿಂದ ಆರಂಭವಾಗಲಿರುವ ವೆಬ್ ಮೀಡಿಯಾ ‘ವಿಕಸನ ನ್ಯೂಸ್.ಇನ್‘ ಗೆ ಚಾಲನೆ ನೀಡಿದರು. ಉಪ್ಪಿನಂಗಡಿಯ ಶ್ರೀರಾಮ ಪ್ರೌಡಶಾಲೆಯ ಮುಖ್ಯೋಪಾಧ್ಯಾಯ ರಘುರಾಮ್ ಭಟ್ ಕಾರ್ಯಕ್ರಮ ನಿರ್ವಹಿಸಿದರು.

ಸುನಿಲ್‌ ಕುಲಕರ್ಣಿ ಮಾತನಾಡಿದರು.

ಉದ್ಘಾಟನಾ ಕಾರ್ಯಕ್ರಮದ ನಂತರದಲ್ಲಿ ವಿವಿಧ ಗೋಷ್ಠಿಗಳು ನಡೆದವು. ಮಂಗಳೂರಿನ ಅಕ್ಷರೋದ್ಯಮದ ಸುನಿಲ್ ಕುಲಕರ್ಣಿ “ಶೈಕ್ಷಣಿಕವಾಗಿ ವೆಬ್‍ಸೈಟ್‍ಗಳ ಪರಿಣಾಮಕಾರಿಯಾಗಿ ಹೇಗೆ ಉಪಯೋಗಿಸಬಹುದು” ಎನ್ನುವ ಕುರಿತಾಗಿ ಮಾಹಿತಿ ನೀಡಿದರು.

Advertisement
ಹಿರಿಯ ಪತ್ರಕರ್ತ ಬಿ ಟಿ ರಂಜನ್‌ ಮಾತನಾಡಿದರು

 

ಉಪನ್ಯಾಸಕ ಅಜಯ್‍ಶಾಸ್ತ್ರೀ ಮಾತನಾಡಿದರು

ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಮುದ್ರಣ ಮಾಧ್ಯಮದ ವರದಿಗಾರಿಕೆ ಕುರಿತಾಗಿ, ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಉಪನ್ಯಾಸಕ ಅಜಯ್‍ಶಾಸ್ತ್ರೀ ಸಾಮಾಜಿಕ ಜಾಲಗಳ ಕುರಿತಾಗಿ ಹಾಗೂ ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ವೆಬ್ ಮೀಡಿಯಾಗಳ ಬಳಕೆಯ ಕುರಿತಾಗಿ ಮಾಹಿತಿ ನೀಡಿದರು.

Advertisement

 

ಪತ್ರಕರ್ತ ಮಹೇಶ್‌ ಪುಚ್ಚಪ್ಪಾಡಿ ಮಾತನಾಡಿದರು.

ಕಾರ್ಯಾಗಾರದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ನಿಕಟಪೂರ್ವ ಕಾರ್ಯದರ್ಶಿ ಶಿವಪ್ರಸಾದ್ ವಹಿಸಿದ್ದರು. ಈ ಸಂದರ್ಭ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ಮುರಳೀಧರ್ ಉಪಸ್ಥಿತರಿದ್ದರು.

Advertisement

 

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ
May 4, 2024
12:30 PM
by: ಸಾಯಿಶೇಖರ್ ಕರಿಕಳ
ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |
May 4, 2024
10:32 AM
by: ದ ರೂರಲ್ ಮಿರರ್.ಕಾಂ
ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |
May 3, 2024
9:58 PM
by: ದ ರೂರಲ್ ಮಿರರ್.ಕಾಂ
ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ
May 3, 2024
12:48 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror