“ಸಾಮಾಜಿಕ ಜಾಲ, ವೆಬ್‍ಸೈಟ್ ಮತ್ತು ಮಾಧ್ಯಮಗಳ ಅವಶ್ಯಕತೆ ಮತ್ತು ಅನುಷ್ಟಾನ” ಎಂಬ ವಿಷಯದ ಕುರಿತಾಗಿ, ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಉಪನ್ಯಾಸಕರಿಗಾಗಿ ಒಂದು ದಿನದ ಕಾರ್ಯಾಗಾರವು ಪುತ್ತೂರು ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶನಿವಾರ ನಡೆಯಿತು.
ಕಾರ್ಯಾಗಾರಕ್ಕೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ. ಯಂ. ಕೃಷ್ಣ ಭಟ್ ಚಾಲನೆ ನೀಡಿ,”ನವ ಮಾಧ್ಯಮಗಳ ಬಳಕೆ ಸರಿಯಾದ ರೀತಿಯಲ್ಲಿ ಆಗಬೇಕಿದೆ. ಶಿಕ್ಷಣ ಸಂಸ್ಥೆಯ ಉತ್ತಮ ಕಾರ್ಯಗಳು ಸಮಾಜಕ್ಕೆ ತಲುಪಬೇಕಿದೆ” ಎಂದರು.
ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ) ಇದರ ವತಿಯಿಂದ ವಿವೇಕಾನಂದ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ವಿವೇಕಾನಂದ ಶಿಕ್ಷಣ ಸಂಸ್ಥೆಗಳಿಗೆ ಈ ಕಾರ್ಯಾಗಾರ ಆಯೋಜಿಸಲಾಗಿತ್ತು.
ಈ ಸಂದರ್ಭ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ಮುರಳಿಧರ ಕೆ. ಪ್ರಸ್ತಾವನೆಗೈದು ಸ್ವಾಗತಿಸಿದರು. ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ಅಕ್ಷರೋದ್ಯಮದ ಮುಖ್ಯಸ್ಥ ಸುನಿಲ್ ಕುಲಕರ್ಣಿ, ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ, ವಿವೇಕಾನಂದ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವತಿಯಿಂದ ಆರಂಭವಾಗಲಿರುವ ವೆಬ್ ಮೀಡಿಯಾ ‘ವಿಕಸನ ನ್ಯೂಸ್.ಇನ್‘ ಗೆ ಚಾಲನೆ ನೀಡಿದರು. ಉಪ್ಪಿನಂಗಡಿಯ ಶ್ರೀರಾಮ ಪ್ರೌಡಶಾಲೆಯ ಮುಖ್ಯೋಪಾಧ್ಯಾಯ ರಘುರಾಮ್ ಭಟ್ ಕಾರ್ಯಕ್ರಮ ನಿರ್ವಹಿಸಿದರು.
ಉದ್ಘಾಟನಾ ಕಾರ್ಯಕ್ರಮದ ನಂತರದಲ್ಲಿ ವಿವಿಧ ಗೋಷ್ಠಿಗಳು ನಡೆದವು. ಮಂಗಳೂರಿನ ಅಕ್ಷರೋದ್ಯಮದ ಸುನಿಲ್ ಕುಲಕರ್ಣಿ “ಶೈಕ್ಷಣಿಕವಾಗಿ ವೆಬ್‍ಸೈಟ್‍ಗಳ ಪರಿಣಾಮಕಾರಿಯಾಗಿ ಹೇಗೆ ಉಪಯೋಗಿಸಬಹುದು” ಎನ್ನುವ ಕುರಿತಾಗಿ ಮಾಹಿತಿ ನೀಡಿದರು.
ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಮುದ್ರಣ ಮಾಧ್ಯಮದ ವರದಿಗಾರಿಕೆ ಕುರಿತಾಗಿ, ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಉಪನ್ಯಾಸಕ ಅಜಯ್‍ಶಾಸ್ತ್ರೀ ಸಾಮಾಜಿಕ ಜಾಲಗಳ ಕುರಿತಾಗಿ ಹಾಗೂ ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ವೆಬ್ ಮೀಡಿಯಾಗಳ ಬಳಕೆಯ ಕುರಿತಾಗಿ ಮಾಹಿತಿ ನೀಡಿದರು.
ಕಾರ್ಯಾಗಾರದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ನಿಕಟಪೂರ್ವ ಕಾರ್ಯದರ್ಶಿ ಶಿವಪ್ರಸಾದ್ ವಹಿಸಿದ್ದರು. ಈ ಸಂದರ್ಭ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ಮುರಳೀಧರ್ ಉಪಸ್ಥಿತರಿದ್ದರು.
ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಅಧ್ಯಯನ ಮಾಡಲು ಶ್ರೀಲಂಕಾದಿಂದ 38 ಮಂದಿ “ಲಂಕಾ…
ಬದಲಾದ ಕಾಲದಲ್ಲಿ ನಾವು ಇಂತಹ ಪರಿಕರಕೊಳ್ಳುವ ಮೊದಲು ನಮಗೆಷ್ಟು ಇದು ಪ್ರಯೋಜನಕಾರಿ ಎಂದು…
ಐತಿಹಾಸಿಕ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ …
ರಾಸಾಯನಿಕಗಳನ್ನು ಹೊಂದಿರುವ ಗೊಬ್ಬರದ ಅತಿಯಾದ ಬಳಕೆಯಿಂದಾಗಿ ಭೂಮಿಯಲ್ಲಿ ಎರೆಹುಳು ಸೇರಿದಂತೆ ಎಲ್ಲ ಜೀವಿಗಳು…
ಕರ್ನಾಟಕದ ಹಲವೆಡೆ ಕಾಫಿ ನವೋದ್ಯಮಕ್ಕೆ ಅವಕಾಶಗಳನ್ನು ಸೃಷ್ಟಿಸಿ, ಸ್ವ ಸಹಾಯ ಗುಂಪುಗಳ ಸುಮಾರು…
ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ. …