ಪಠ್ಯಗಳು ಭಾರತೀಯ ಪರಂಪರೆಯ ಮೌಲ್ಯಗಳನ್ನು ಹೇಳಬೇಕಿವೆ : ಡಾ. ಪ್ರಭಾಕರ ಭಟ್ ಕಲ್ಲಡ್ಕ

November 21, 2021
10:24 AM

ಭಾರತೀಯ ಗುರುಕುಲ ಪದ್ಧತಿಯ ಮೂಲಕ ಶಿಕ್ಷಣವು ಎಲ್ಲಾ ವರ್ಗದ ಜನರಿಗೂ ಸಮಾನವಾಗಿ ಲಭ್ಯವಿತ್ತು.  ಮೆಕಾಲೆ ಶಿಕ್ಷಣ ಎಲ್ಲವನ್ನೂ ಬದಲಾಯಿಸಿತು. ಒಂದು ರೀತಿಯಲ್ಲಿ ಮಾನಸಿಕ ಗುಲಾಮತೆಯನ್ನು ಬೆಳೆಸತೊಡಗಿತು. ಆದರೆ ಈಗ ಪರಿಚಯಸಲಾಗುತ್ತಿರುವ ನೂತನ ಶಿಕ್ಷಣ ನೀತಿಯು ಕೌಶಲ್ಯಾಧಾರಿತ, ರಾಷ್ಟ್ರೀಯತೆ ಮೌಲ್ಯಗಳನ್ನೊಳಗೊಂಡ ಸಮಾಜಮುಖಿ ಭಾರತೀಯ ಶಿಕ್ಷಣವನ್ನು ನೀಡಲಿದೆ ಎಂದು ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.

Advertisement

ಅವರು ಪುತ್ತೂರು ವಿವೇಕಾನಂದ ಮಹಾವಿದ್ಯಾಲಯದಲ್ಲಿ ಆಯೋಜಿಸಲಾದ ನೂತನ ಶಿಕ್ಷಣ ನೀತಿಯೊಂದಿಗೆ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ, ಪ್ರತಿಭಾ ಪುರಸ್ಕಾರ ಮತ್ತು ರ್ಯಾಂಕ್ ವಿಜೇತರಿಗೆ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶನಿವಾರ ಮಾತನಾಡಿದರು. ವಿದ್ಯಾರ್ಥಿಗಳಿಗೆ ಯಾವುದೋ ದೂರದ ದೇಶದ ಇತಿಹಾಸದ ಬದಲಾಗಿ, ನಮ್ಮ ದೇಶದ ಇತಿಹಾಸವನ್ನು, ಇತಿಹಾಸ ಪುರುಷರನ್ನು, ಸಾಧಕರನ್ನು ಪರಿಚಯಿಸಬೇಕಾದ ಅಗತ್ಯವಿದೆ. ತನ್ಮೂಲಕ ಭಾರತೀಯ ಪರಂಪರೆಯ ಸಿರಿತನವನ್ನು ಮುಂದಿನ ಪೀಳಿಗೆಗೆ ತಿಳಿಸಿಕೊಡಬೇಕು. ಈ ನಿಟ್ಟಿನಲ್ಲಿ ಶಿಕ್ಷಣ ಬದಲಾಗುವ, ಬೆಳೆಯುವ ಅವಶ್ಯಕತೆಯಿದೆ ಎಂದು ಅಭಿಪ್ರಾಯಪಟ್ಟರು.

ವಿವೇಕಾನಂದ ಮಹಾವಿದ್ಯಾಲಯದ ಆಡಳಿತ ಮಂಡಳಿಯ ನೂತನ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಮಾತನಾಡಿ, ಕಲಿಯುವಿಕೆ ಅನ್ನುವುದು ಕೇವಲ ಶೈಕ್ಷಣಿಕ ವಿಚಾರಕ್ಕೆ ಸೀಮಿತವಾಗಬಾರದು. ನಮ್ಮ ಪ್ರತಿಭೆಯನ್ನುನಾವೇ ಗುರುತಿಸಿ, ನಿರಂತರ ಅಭ್ಯಾಸದ ಮೂಲಕ ಬೆಳೆಸಬೇಕು ಎಂದು ನುಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ. ಎನ್. ಮಾತನಾಡಿ, ಶಿಕ್ಷಣದ ಜೊತೆಗೆ ಸಾಂಸ್ಕೃತಿಕತೆ ಹಾಗೂ ರಾಷ್ಟ್ರೀಯತೆಯನ್ನೂ ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆಗೆ ಗುಣ ನಿರ್ಮಾಣ ಮಾಡುವ ವ್ಯವಸ್ಥೆಯನ್ನು ಈ ಕಾಲೇಜು ಧ್ಯೇಯವನ್ನಾಗಿಟ್ಟುಕೊಂಡಿದೆ. ಜೀವನದಲ್ಲಿ ಆತ್ಮಸ್ಥೈರ್ಯವನ್ನು ತುಂಬುವ ಶಿಕ್ಷಣ ಹಾಗೂ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ನೀಡುವಲ್ಲಿ ಉಪನ್ಯಾಸಕರು ಹಾಗೂ ಸಂಸ್ಥೆ ಶ್ರಮ ವಹಿಸುತ್ತಿದೆ ಎಂದರು.

ನೂತನ ವಿದ್ಯಾರ್ಥಿಗಳಿಗೆ ದೀಪ ಬೆಳಗಿ, ತಿಲಕವಿತ್ತು, ವಿವೇಕಾನಂದರ ಸಂದೇಶವನ್ನು ಹೊತ್ತ ಪುಸ್ತಕವನ್ನು ನೀಡುವ ಮೂಲಕ ಸ್ವಾಗತಿಸಲಾಯಿತು.

Advertisement

ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿ ಶ್ರೀನಿವಾಸ್ ಸಾಮಂತ, ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಎಂ. ಅನಂತಕೃಷ್ಣ ನಾಯಕ್, ಶಂಕರ್ ಜೋಯಿಸ, ಶುಭ ಅಡಿಗ, ಸುಕುಮಾರ್ ಹಾಗೂ ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಶಿವರಾಮ್ ಭಟ್ ಉಪಸ್ಥಿತರಿದ್ದರು.

ವಿದ್ಯಾರ್ಥಿನಿಯರಾದ ಜಾನ್ವಿ ಮತ್ತು ಶ್ರೀರಾಗ ಪ್ರಾರ್ಥಿಸಿದರು. ಕಾಲೇಜಿನ ಪ್ರಾಚಾರ್ಯ ಪ್ರೊ. ವಿಷ್ಣುಗಣಪತಿ ಭಟ್ ಸ್ವಾಗತಿಸಿ, ಪ್ರಸ್ತಾವನೆಗೈದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಅರುಣ್ ಪ್ರಕಾಶ್ ವಂದಿಸಿದರು. ಕನ್ನಡ ವಿಭಾಗದ ಉಪನ್ಯಾಸಕಿ ಡಾ. ಗೀತಾ ಕುಮಾರಿ ಟಿ. ಹಾಗೂ ಆಂಗ್ಲ ವಿಭಾಗದ ಉಪನ್ಯಾಸಕಿ ಅಂಬಿಕಾ ಎಂ. ಕಾರ್ಯಕ್ರಮ ನಿರೂಪಿಸಿದರು.

 

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶರಧಿ.ಡಿ.ಎಸ್
July 13, 2025
8:14 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕೃತಿಕಾ
July 13, 2025
8:01 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮ | ಹೆಬ್ರಿಯ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ಚಾಲನೆ
July 13, 2025
7:50 AM
by: The Rural Mirror ಸುದ್ದಿಜಾಲ
ಶತ್ರುಗಳಿಂದ ಈ ರಾಶಿಯವರಿಗೆ ಜೀವಕ್ಕೆ ಅಪಾಯವಿದೆ..?
July 13, 2025
7:40 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group