ವಿದ್ಯಾರ್ಥಿಗಳು ಉನ್ನತ ಶಿಕ್ಷಣದ ಕಡೆಗೆ ಮುಖ ಮಾಡಿದಷ್ಟು ದೇಶ ಅಭಿವೃದ್ಧಿ – ಮುರಳಿ ಕೃಷ್ಣ ಕೆ.ಎನ್

June 11, 2022
10:48 AM

ಶಿಕ್ಷಣ ಮುಗಿದ ಕೂಡಲೇ ವೃತ್ತಿ ಜೀವನಕ್ಕೆ ಕಾಲಿಡಲು ಹಾತೊರೆಯುವ ಯುವಜನತೆ ಉನ್ನತ ಶಿಕ್ಷಣದ ಕುರಿತು ಯೋಚಿಸುವಲ್ಲಿ ವಿಫಲರಾಗುತ್ತಿದ್ದಾರೆ. ವಿದ್ಯಾರ್ಥಿಗಳು ಉನ್ನತ ಶಿಕ್ಷಣದ ಕಡೆಗೆ ಮುಖ ಮಾಡಿದಷ್ಟು ನಮ್ಮ ದೇಶ ಅಭಿವೃದ್ಧಿ ಹೊಂದುತ್ತದೆ. ಹಾಗಾಗಿ ಪ್ರತಿಯೊಬ್ಬರು ಈ ನಿಟ್ಟಿನಲ್ಲಿ ಯೋಚಿಸಬೇಕು ಎಂದು ವಿವೇಕಾನಂದ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಮುರಳಿ ಕೃಷ್ಣ ಕೆ.ಎನ್ ಹೇಳಿದರು.

Advertisement
Advertisement
Advertisement

ಇವರು ಪುತ್ತೂರು ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ಶಾಸ್ತ್ರ ವಿಭಾಗ, ಐಕ್ಯೂಎಸಿ ಮತ್ತು ಸಂಶೋಧನಾ ಕೇಂದ್ರದ ಜಂಟಿ ಆಶ್ರಯದಲ್ಲಿ ಆಯೋಜಿಸಿದ್ದ ಎನ್‍ಇಟಿ/ಕೆ- ಎಸ್‍ಇಟಿ  ಪ್ರಿಪರೇಷನ್‍ ಟೆಕ್ನಿಕ್ಸ್ ಎಂಬ ವಿಷಯದ ಕುರಿತು ನಡೆದ ಕಾರ್ಯಾಗಾರವನ್ನು ಉದ್ಘಾಟಿಸಿ ಶುಕ್ರವಾರ ಮಾತನಾಡಿದರು.

Advertisement

ಕಾರ್ಯಕ್ರಮದ ಮುಖ್ಯಅತಿಥಿಯಾಗಿ ಆಗಮಿಸಿದ್ದ ಪ್ರೊ.ವಿಷ್ಣುಗಣಪತಿ ಭಟ್ ಮಾತನಾಡಿ ಜೀವನದಲ್ಲಿ ಸಾಧಿಸಲು ಇಚ್ಚಿಸುವವರಿಗೆ ಅನೇಕ ಅವಕಾಶಗಳಿವೆ. ಅವಕಾಶಗಳನ್ನು ನಮ್ಮಕಠಿಣ ಪರಿಶ್ರಮದ ಮೂಲಕ ಪಡೆದುಕೊಳ್ಳಬೇಕು.ಉನ್ನತ ಶಿಕ್ಷಣ ಮಾಡಲು ಪ್ರಸ್ತುತ ಅನೇಕ ಸೌಲಭ್ಯಗಳು ಲಭ್ಯವಿದ್ದು ಶಿಕ್ಷಣದ ಜೊತೆಗೆ ಗಳಿಕೆಯನ್ನು ಮಾಡಬಹುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕನ್ನಡ ವಿಭಾಗದ ಉಪನ್ಯಾಸಕಿ ಡಾ.ಮೈತ್ರಿ ಭಟ್ ಮಾತನಾಡಿದರು.ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ವಿಭಾಗದ ಉಪನ್ಯಾಸಕರು ಉಪಸ್ಥಿತರಿದ್ದರು.

Advertisement

ಸಂಶೋಧನಾ ಕೇಂದ್ರದ ಸಂಯೋಜಕ ಡಾ. ಹೆಚ್. ಜಿ ಶ್ರೀಧರ್ ಸ್ವಾಗತಿಸಿ ,ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ವಿಜಯ ಸರಸ್ವತಿ ವಂದಿಸಿ, ಪ್ರಥಮ ಎಂ.ಕಾಂ ವಿದ್ಯಾರ್ಥಿನಿ ಅಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

24 ಗಂಟೆಗಳಲ್ಲಿ 80 ಭೂಕಂಪ | ಭೂಕಂಪದ ತೀವ್ರತೆಯಲ್ಲಿ ತೈವಾನ್‌ |
April 23, 2024
2:39 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಉಪ ಉತ್ಪನ್ನಗಳ ತಯಾರಿಕೆ ಬೆಂಬಲ ಘೊಷಿಸಿದ ಅಭ್ಯರ್ಥಿ |
April 23, 2024
1:54 PM
by: ದ ರೂರಲ್ ಮಿರರ್.ಕಾಂ
ಹಿಪ್ಪಲಿ ಗಿಡಕ್ಕೆ ಕರಿಮೆಣಸು ಕಸಿ ಎಷ್ಟು ಸೂಕ್ತ..? ಲಾಭ ಏನು..? | ಇದು ಕರಿಮೆಣಸು ಬಳ್ಳಿಗೆ ಬರುವ ರೋಗ ತಡೆಗಟ್ಟುತ್ತದೆಯೇ..?
April 23, 2024
1:41 PM
by: The Rural Mirror ಸುದ್ದಿಜಾಲ
ಲೋಕಸಭೆ ಚುನಾವಣೆಗೆ ದಿನಗಣನೆ | ‘ಚುನಾವಣಾ ಪರ್ವ – ದೇಶದ ಗರ್ವ’ ಘೋಷ ವಾಕ್ಯದೊಂದಿಗೆ ಚುನಾವಣೆ | ಚುನಾವಣಾ ಆಯೋಗದಿಂದ ಭರದ ಸಿದ್ಧತೆ
April 23, 2024
1:25 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror