ಶಿಕ್ಷಣ ಮುಗಿದ ಕೂಡಲೇ ವೃತ್ತಿ ಜೀವನಕ್ಕೆ ಕಾಲಿಡಲು ಹಾತೊರೆಯುವ ಯುವಜನತೆ ಉನ್ನತ ಶಿಕ್ಷಣದ ಕುರಿತು ಯೋಚಿಸುವಲ್ಲಿ ವಿಫಲರಾಗುತ್ತಿದ್ದಾರೆ. ವಿದ್ಯಾರ್ಥಿಗಳು ಉನ್ನತ ಶಿಕ್ಷಣದ ಕಡೆಗೆ ಮುಖ ಮಾಡಿದಷ್ಟು ನಮ್ಮ ದೇಶ ಅಭಿವೃದ್ಧಿ ಹೊಂದುತ್ತದೆ. ಹಾಗಾಗಿ ಪ್ರತಿಯೊಬ್ಬರು ಈ ನಿಟ್ಟಿನಲ್ಲಿ ಯೋಚಿಸಬೇಕು ಎಂದು ವಿವೇಕಾನಂದ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಮುರಳಿ ಕೃಷ್ಣ ಕೆ.ಎನ್ ಹೇಳಿದರು.
ಇವರು ಪುತ್ತೂರು ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ಶಾಸ್ತ್ರ ವಿಭಾಗ, ಐಕ್ಯೂಎಸಿ ಮತ್ತು ಸಂಶೋಧನಾ ಕೇಂದ್ರದ ಜಂಟಿ ಆಶ್ರಯದಲ್ಲಿ ಆಯೋಜಿಸಿದ್ದ ಎನ್‍ಇಟಿ/ಕೆ- ಎಸ್‍ಇಟಿ ಪ್ರಿಪರೇಷನ್ ಟೆಕ್ನಿಕ್ಸ್ ಎಂಬ ವಿಷಯದ ಕುರಿತು ನಡೆದ ಕಾರ್ಯಾಗಾರವನ್ನು ಉದ್ಘಾಟಿಸಿ ಶುಕ್ರವಾರ ಮಾತನಾಡಿದರು.
ಕಾರ್ಯಕ್ರಮದ ಮುಖ್ಯಅತಿಥಿಯಾಗಿ ಆಗಮಿಸಿದ್ದ ಪ್ರೊ.ವಿಷ್ಣುಗಣಪತಿ ಭಟ್ ಮಾತನಾಡಿ ಜೀವನದಲ್ಲಿ ಸಾಧಿಸಲು ಇಚ್ಚಿಸುವವರಿಗೆ ಅನೇಕ ಅವಕಾಶಗಳಿವೆ. ಅವಕಾಶಗಳನ್ನು ನಮ್ಮಕಠಿಣ ಪರಿಶ್ರಮದ ಮೂಲಕ ಪಡೆದುಕೊಳ್ಳಬೇಕು.ಉನ್ನತ ಶಿಕ್ಷಣ ಮಾಡಲು ಪ್ರಸ್ತುತ ಅನೇಕ ಸೌಲಭ್ಯಗಳು ಲಭ್ಯವಿದ್ದು ಶಿಕ್ಷಣದ ಜೊತೆಗೆ ಗಳಿಕೆಯನ್ನು ಮಾಡಬಹುದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕನ್ನಡ ವಿಭಾಗದ ಉಪನ್ಯಾಸಕಿ ಡಾ.ಮೈತ್ರಿ ಭಟ್ ಮಾತನಾಡಿದರು.ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ವಿಭಾಗದ ಉಪನ್ಯಾಸಕರು ಉಪಸ್ಥಿತರಿದ್ದರು.
ಸಂಶೋಧನಾ ಕೇಂದ್ರದ ಸಂಯೋಜಕ ಡಾ. ಹೆಚ್. ಜಿ ಶ್ರೀಧರ್ ಸ್ವಾಗತಿಸಿ ,ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ವಿಜಯ ಸರಸ್ವತಿ ವಂದಿಸಿ, ಪ್ರಥಮ ಎಂ.ಕಾಂ ವಿದ್ಯಾರ್ಥಿನಿ ಅಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…