ಇಂದಿನ ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಶಿಕ್ಷಣ ಬಹಳ ಮುಖ್ಯವಾದುದು, ಶಿಕ್ಷಣ ವ್ಯವಸ್ಥೆಯು ಅಂಕಗಳನ್ನು ಗಳಿಸುವುದಕ್ಕೆ ಮಾತ್ರ ಮಹತ್ವ ನೀಡುತ್ತಿರುವ ಈ ಕಾಲಘಟ್ಟದಲ್ಲಿ ಮೌಲ್ಯಾಧಾರಿತ ಹಾಗೂ ಸಂಸ್ಕಾರಭರಿತ ಶಿಕ್ಷಣ ನೀಡುವ ವಿವೇಕಾನಂದ ವಿದ್ಯಾಸಂಸ್ಥೆಗಳ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಪುರೋಹಿತ ಕಾರ್ತಿಕ್ ಶಾಸ್ತ್ರಿ ಹೇಳಿದರು.
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2022-23 ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವದ ಅಂಗವಾಗಿ ಗಣ ಹೋಮ ಹಾಗೂ ಸರಸ್ವತಿ ಪೂಜೆ ನೆರವೇರಿತು. ಪುರೋಹಿತರಾದ ಕಾರ್ತಿಕ್ ಶಾಸ್ತ್ರಿ ಅವರ ನೇತೃತ್ವದಲ್ಲಿ ಆದಿತ್ಯ ಕೃಷ್ಣ ಹಾಗೂ ರಾಘವೇಂದ್ರ ಅವರ ಸಹಕಾರದೊಂದಿಗೆ ಈ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷರಾದ ರವೀಂದ್ರ ಪಿ., ಸಂಚಾಲಕರಾದ ಕೃಷ್ಣ ಪ್ರಸಾದ್ ನಡ್ಸಾರ್, ಸದಸ್ಯರಾದ ಡಾ. ಮುರಳಿಕೃಷ್ಣ ರೈ, ಡಾ. ಕೃಷ್ಣಪ್ರಸನ್ನ ಕೆ., ಕಾಲೇಜು ಪ್ರಾಂಶುಪಾಲರಾದ ಮಹೇಶ್ ನಿಟಿಲಾಪುರ, ಪ್ರಾಧ್ಯಾಪಕರು, ಅಧ್ಯಾಪಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.