ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ರಾಜ್ಯಮಟ್ಟದ ವಿಜ್ಞಾನ ಶಿಬಿರ ಯುರೇಕಾ-2022

April 24, 2022
9:26 AM

ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ 12 ದಿನಗಳ ರಾಜ್ಯಮಟ್ಟದ ವಿಜ್ಞಾನ ಶಿಬಿರ ಯುರೇಕಾ-2022 ರ ನಾಲ್ಕನೇ ದಿನದ ಕಾರ್ಯಕ್ರಮ ನೆರವೇರಿತು. ನಾಲ್ಕನೇ ದಿನದ ಮೊದಲ ಅವಧಿಯನ್ನು ಇಂದ್ರಪ್ರಸ್ಥ ಕಾಲೇಜಿನ ಪ್ರಾಂಶುಪಾಲರಾದ ಎಚ್. ಕೆ. ಪ್ರಕಾಶ್ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಪ್ರಕೃತಿಯಲ್ಲಿರುವ ಹಲವು ಜೀವರಾಶಿಗಳು, ಅವುಗಳ ಬದುಕು, ಪ್ರಕೃತಿಗೆ ಆ ಜೀವಿಗಳ ಕೊಡುಗೆ, ಮಾನವ ಹಾಗೂ ಜೀವ ಸಂಕುಲದ ಕೊಂಡಿ ಹೇಗೆ ಇರಬೇಕು, ಪರಿಸರದಲ್ಲಿ ಈ ಜೀವಿಗಳ ಅವಶ್ಯಕತೆ ಎಷ್ಟಿವೆ, ಅವುಗಳ ಬಗ್ಗೆ ನಾವೆಷ್ಟು ಅರಿತುಕೊಂಡಿದ್ದೇವೆ ಇತ್ಯಾದಿ ವಿಷಯಗಳ ಕುರಿತು ಮಾತನಾಡುತ್ತಾ ಈ ಜೀವಸಂಕುಲದ ಕುರಿತು ಸಂಪೂರ್ಣವಾಗಿ ಅರಿಯಬೇಕಾದರೆ ಜೀವಶಾಸ್ತ್ರದ ಅಧ್ಯಯನ ಅವಶ್ಯಕ ಎಂದರು. ಜೀವಶಾಸ್ತ್ರದ ವಿಸ್ಮಯಗಳು, ವಿಷಯದ ಕುರಿತಾಗಿ ವಿದ್ಯಾರ್ಥಿಗಳೊಂದಿಗೆ ಅವರು ಸಂವಾದ ನಡೆಸಿದರು.

ಎರಡನೇ ಅವಧಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಗಣಿತಶಾಸ್ತ್ರದ ಜಟಿಲ ಸಮಸ್ಯೆಗಳನ್ನು ಅಲ್ಪಸಮಯದಲ್ಲಿ ಹೇಗೆ ಪರಿಹರಿಸಬಹುದು ಎನ್ನುವುದನ್ನು ಪ್ರಾತ್ಯಕ್ಷಿಕೆಗಳ ಮೂಲಕ ಗಣಿತಶಾಸ್ತ್ರದ ಪರಿಣಿತ ಉಪನ್ಯಾಸಕಿ  ಕವಿತಾ ಇವರು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕೊನೆಯ ಅವಧಿಯಲ್ಲಿ ಜೀವಶಾಸ್ತ್ರದ ಉಪನ್ಯಾಸಕಿ ಡಾ. ಶ್ರುತಿ ಇವರು ಪ್ರಾಣಿ ಜಗತ್ತಿನ ವೈವಿಧ್ಯತೆ ವಿಷಯದ ಬಗ್ಗೆ ಸಂವಾದ ನಡೆಸಿದರು. ಈ ಶಿಬಿರ 12 ದಿನಗಳ ಕಾಲ ನಡೆಯಲಿದ್ದು ರಾಜ್ಯದ ವಿವಿಧ ಭಾಗಗಳಿಂದ ಸುಮಾರು ನೂರು ಶಿಬಿರಾರ್ಥಿಗಳು ಪಾಲ್ಗೊಳ್ಳುತ್ತಿದ್ದಾರೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 18-03-2025 | ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ | ಮಾ.25 ರ ನಂತರ ವಿವಿದೆಡೆ ಮಳೆ ಸಾಧ್ಯತೆ |
March 18, 2025
2:03 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 17-03-2025 | ಕೆಲವೆಡೆ ತುಂತುರು ಮಳೆ ನಿರೀಕ್ಷೆ | ಮಾರ್ಚ್ ಕೊನೆಯ ವಾರದಲ್ಲಿ ಮಳೆ ಆರಂಭವಾಗುವ ಲಕ್ಷಣ |
March 17, 2025
3:33 PM
by: ಸಾಯಿಶೇಖರ್ ಕರಿಕಳ
ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |
March 17, 2025
8:07 AM
by: The Rural Mirror ಸುದ್ದಿಜಾಲ
ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!
March 17, 2025
7:02 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror