ಪುತ್ತೂರು | ಡಾ. ನಾ. ಸೋಮೇಶ್ವರ ಜೊತೆ ವಿವೇಕಾನಂದದಲ್ಲಿ ವಿಶೇಷ ಸಂವಾದ

November 13, 2022
9:56 AM

ಮಗು ಹುಟ್ಟಿದ ಕ್ಷಣದಿಂದ ಹೊಸ ಹೊಸ ವಿಚಾರಗಳನ್ನು ಕಲಿತುಕೊಂಡು ಹೋಗುತ್ತದೆ. ಬಾಲ್ಯದಿಂದಲೇ ಒಳ್ಳೆಯದು ಹಾಗೂ ಕೆಟ್ಟದನ್ನು, ಹಿತಕರ ಮತ್ತುಅಹಿತಕರವಾದ ಸೂಕ್ಷ್ಮ ವಿಚಾರಗಳನ್ನು ಗ್ರಹಿಸುವ ಸಾಮರ್ಥ್ಯ  ಮಗುವಿಗೆ ಇರುತ್ತದೆ.ವಿದ್ಯಾರ್ಥಿಗಳು ತಮ್ಮಗುರಿ ಸಾಧನೆಗಾಗಿ ಸದಾ ಜಾಗೃತರಾಗಬೇಕು ಎಂದು ದೂರದರ್ಶನ ಚಂದನ ವಾಹಿನಿಯ ಖ್ಯಾತ ರಸಪ್ರಶ್ನೆ ‘ಥಟ್‍ ಅಂತ ಹೇಳಿ’ ಕಾರ್ಯಕ್ರಮ ನಿರೂಪಕ ಡಾ. ನಾ. ಸೋಮೇಶ್ವರ ಹೇಳಿದರು.

ವಿವೇಕಾನಂದ ಪದವಿಪೂರ್ವಕಾಲೇಜಿನಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗಾಗಿ ಸಾಮಾಜಿಕ, ಸಾಂಸ್ಕೃತಿಕ ಮತ್ತು ವೈಜ್ಞಾನಿಕ ಕನಸುಗಳಿಗೆ ವೇದಿಕೆ ನೀಡುವ ಕನಸುಗಳು-2022 ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜೊತೆ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹುಟ್ಟಿನಿಂದಲೇ ನಾವು ಬುದ್ದಿವಂತರು.ಆದರೆ ನಾವು ಬೆಳೆಯುವ ಪರಿಸರದ ಆಧಾರದ ಮೇಲೆ ನಮ್ಮಗುಣ, ನಡತೆ ಮತ್ತು ವರ್ತನೆ  ಬದಲಾವಣೆಯಾಗುತ್ತದೆ. ಜಂಕ್ ಫುಡ್ ಗಳನ್ನು ತ್ಯಜಿಸಿ, ಆರೋಗ್ಯಕ್ಕೆ ಹಿತಕರವಾದ ಆಹಾರವನ್ನು ಸೇವಿಸಬೇಕು. ವಿದ್ಯಾರ್ಥಿಗಳು ಓದುವುದರ ಜೊತೆಗೆ ಇನ್ನಿತರ ಚಟುವಟಿಕೆಯನ್ನು ರೂಢಿಸಿಕೊಳ್ಳಬೇಕು. ನಿರಂತರವಾಗಿ ಅಧ್ಯಯನ ಮಾಡುವುದರ ಮೂಲಕ ಜ್ಞಾನ ವೃದ್ಧಿ ಮಾಡಿಕೊಳ್ಳಬೇಕು. ವಿದ್ಯಾರ್ಜನೆ ವಿದ್ಯಾರ್ಥಿಯ ಬದುಕಿನ ಏಕೈಕ ನಿರ್ಧಾರವಾಗಬೇಕೆಂದು ಎಂದರು.

ಕಾರ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಸತೀಶ್‍ ರೈ ಹಾಗೂ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮಹೇಶ್ ನಿಟಿಲಾಪುರ ಉಪಸ್ಥಿತರಿದ್ದರು.ಕಾರ್ಯಕ್ರಮವನ್ನು ಕಾಲೇಜಿನ ಉಪನ್ಯಾಸಕಿ ಭಾಗ್ಯಶ್ರೀ ನಿರೂಪಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು
August 24, 2026
10:24 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 24, 2026
12:18 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror