ಮಗು ಹುಟ್ಟಿದ ಕ್ಷಣದಿಂದ ಹೊಸ ಹೊಸ ವಿಚಾರಗಳನ್ನು ಕಲಿತುಕೊಂಡು ಹೋಗುತ್ತದೆ. ಬಾಲ್ಯದಿಂದಲೇ ಒಳ್ಳೆಯದು ಹಾಗೂ ಕೆಟ್ಟದನ್ನು, ಹಿತಕರ ಮತ್ತುಅಹಿತಕರವಾದ ಸೂಕ್ಷ್ಮ ವಿಚಾರಗಳನ್ನು ಗ್ರಹಿಸುವ ಸಾಮರ್ಥ್ಯ ಮಗುವಿಗೆ ಇರುತ್ತದೆ.ವಿದ್ಯಾರ್ಥಿಗಳು ತಮ್ಮಗುರಿ ಸಾಧನೆಗಾಗಿ ಸದಾ ಜಾಗೃತರಾಗಬೇಕು ಎಂದು ದೂರದರ್ಶನ ಚಂದನ ವಾಹಿನಿಯ ಖ್ಯಾತ ರಸಪ್ರಶ್ನೆ ‘ಥಟ್ ಅಂತ ಹೇಳಿ’ ಕಾರ್ಯಕ್ರಮ ನಿರೂಪಕ ಡಾ. ನಾ. ಸೋಮೇಶ್ವರ ಹೇಳಿದರು.
ವಿವೇಕಾನಂದ ಪದವಿಪೂರ್ವಕಾಲೇಜಿನಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗಾಗಿ ಸಾಮಾಜಿಕ, ಸಾಂಸ್ಕೃತಿಕ ಮತ್ತು ವೈಜ್ಞಾನಿಕ ಕನಸುಗಳಿಗೆ ವೇದಿಕೆ ನೀಡುವ ಕನಸುಗಳು-2022 ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜೊತೆ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ಹುಟ್ಟಿನಿಂದಲೇ ನಾವು ಬುದ್ದಿವಂತರು.ಆದರೆ ನಾವು ಬೆಳೆಯುವ ಪರಿಸರದ ಆಧಾರದ ಮೇಲೆ ನಮ್ಮಗುಣ, ನಡತೆ ಮತ್ತು ವರ್ತನೆ ಬದಲಾವಣೆಯಾಗುತ್ತದೆ. ಜಂಕ್ ಫುಡ್ ಗಳನ್ನು ತ್ಯಜಿಸಿ, ಆರೋಗ್ಯಕ್ಕೆ ಹಿತಕರವಾದ ಆಹಾರವನ್ನು ಸೇವಿಸಬೇಕು. ವಿದ್ಯಾರ್ಥಿಗಳು ಓದುವುದರ ಜೊತೆಗೆ ಇನ್ನಿತರ ಚಟುವಟಿಕೆಯನ್ನು ರೂಢಿಸಿಕೊಳ್ಳಬೇಕು. ನಿರಂತರವಾಗಿ ಅಧ್ಯಯನ ಮಾಡುವುದರ ಮೂಲಕ ಜ್ಞಾನ ವೃದ್ಧಿ ಮಾಡಿಕೊಳ್ಳಬೇಕು. ವಿದ್ಯಾರ್ಜನೆ ವಿದ್ಯಾರ್ಥಿಯ ಬದುಕಿನ ಏಕೈಕ ನಿರ್ಧಾರವಾಗಬೇಕೆಂದು ಎಂದರು. ಕಾರ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಸತೀಶ್ ರೈ ಹಾಗೂ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮಹೇಶ್ ನಿಟಿಲಾಪುರ ಉಪಸ್ಥಿತರಿದ್ದರು.ಕಾರ್ಯಕ್ರಮವನ್ನು ಕಾಲೇಜಿನ ಉಪನ್ಯಾಸಕಿ ಭಾಗ್ಯಶ್ರೀ ನಿರೂಪಿಸಿದರು.
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…
ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…
ಉಪ್ಪಿನಂಗಡಿಯ ಶ್ರೀರಾಮ ಶಾಲೆಯ ಬೆಳವಣಿಗೆಯಲ್ಲಿ ಯು.ಜಿ. ರಾಧ ಭಟ್ ಅವರು ಸುಮಾರು 18…
ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…