ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ 12 ದಿನಗಳ ರಾಜ್ಯಮಟ್ಟದ ವಿಜ್ಞಾನ ಶಿಬಿರ ಯುರೇಕಾ-2022 ರ ನಾಲ್ಕನೇ ದಿನದ ಕಾರ್ಯಕ್ರಮ ನೆರವೇರಿತು. ನಾಲ್ಕನೇ ದಿನದ ಮೊದಲ ಅವಧಿಯನ್ನು ಇಂದ್ರಪ್ರಸ್ಥ ಕಾಲೇಜಿನ ಪ್ರಾಂಶುಪಾಲರಾದ ಎಚ್. ಕೆ. ಪ್ರಕಾಶ್ ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಪ್ರಕೃತಿಯಲ್ಲಿರುವ ಹಲವು ಜೀವರಾಶಿಗಳು, ಅವುಗಳ ಬದುಕು, ಪ್ರಕೃತಿಗೆ ಆ ಜೀವಿಗಳ ಕೊಡುಗೆ, ಮಾನವ ಹಾಗೂ ಜೀವ ಸಂಕುಲದ ಕೊಂಡಿ ಹೇಗೆ ಇರಬೇಕು, ಪರಿಸರದಲ್ಲಿ ಈ ಜೀವಿಗಳ ಅವಶ್ಯಕತೆ ಎಷ್ಟಿವೆ, ಅವುಗಳ ಬಗ್ಗೆ ನಾವೆಷ್ಟು ಅರಿತುಕೊಂಡಿದ್ದೇವೆ ಇತ್ಯಾದಿ ವಿಷಯಗಳ ಕುರಿತು ಮಾತನಾಡುತ್ತಾ ಈ ಜೀವಸಂಕುಲದ ಕುರಿತು ಸಂಪೂರ್ಣವಾಗಿ ಅರಿಯಬೇಕಾದರೆ ಜೀವಶಾಸ್ತ್ರದ ಅಧ್ಯಯನ ಅವಶ್ಯಕ ಎಂದರು. ಜೀವಶಾಸ್ತ್ರದ ವಿಸ್ಮಯಗಳು, ವಿಷಯದ ಕುರಿತಾಗಿ ವಿದ್ಯಾರ್ಥಿಗಳೊಂದಿಗೆ ಅವರು ಸಂವಾದ ನಡೆಸಿದರು.
ಎರಡನೇ ಅವಧಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಗಣಿತಶಾಸ್ತ್ರದ ಜಟಿಲ ಸಮಸ್ಯೆಗಳನ್ನು ಅಲ್ಪಸಮಯದಲ್ಲಿ ಹೇಗೆ ಪರಿಹರಿಸಬಹುದು ಎನ್ನುವುದನ್ನು ಪ್ರಾತ್ಯಕ್ಷಿಕೆಗಳ ಮೂಲಕ ಗಣಿತಶಾಸ್ತ್ರದ ಪರಿಣಿತ ಉಪನ್ಯಾಸಕಿ ಕವಿತಾ ಇವರು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕೊನೆಯ ಅವಧಿಯಲ್ಲಿ ಜೀವಶಾಸ್ತ್ರದ ಉಪನ್ಯಾಸಕಿ ಡಾ. ಶ್ರುತಿ ಇವರು ಪ್ರಾಣಿ ಜಗತ್ತಿನ ವೈವಿಧ್ಯತೆ ವಿಷಯದ ಬಗ್ಗೆ ಸಂವಾದ ನಡೆಸಿದರು. ಈ ಶಿಬಿರ 12 ದಿನಗಳ ಕಾಲ ನಡೆಯಲಿದ್ದು ರಾಜ್ಯದ ವಿವಿಧ ಭಾಗಗಳಿಂದ ಸುಮಾರು ನೂರು ಶಿಬಿರಾರ್ಥಿಗಳು ಪಾಲ್ಗೊಳ್ಳುತ್ತಿದ್ದಾರೆ.ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…
ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ, ಅಡಿಕೆ ಬೆಳೆ ಕಡಿಮೆ, ಧಾರಣೆ ಏರಿಕೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್…
ತೆಲಂಗಾಣ ಹಾಗೂ ಹೈದ್ರಾಬಾದ್ ಪ್ರದೇಶದಲ್ಲಿ ಹೀಟ್ವೇವ್ ಪರಿಸ್ಥಿತಿ ಕಂಡುಬಂದಿದೆ. ಹೀಗಾಗಿ ಹೆಚ್ಚುತ್ತಿರುವ ಉಷ್ಣ…