ವಿದ್ಯಾರ್ಥಿ ಸಂಘಟನೆಗಳು ರಚನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು

October 26, 2021
10:29 PM

ಪುತ್ತೂರು: ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಂಡು ಮುಂದಿನ ಜೀವನಕ್ಕೆ ಅಗತ್ಯವಿರುವ ಭದ್ರ ಬುನಾದಿಯನ್ನು ಹಾಕಿಕೊಳ್ಳಬೇಕು. ಪರಿಶ್ರಮ ಮತ್ತು ಪ್ರಾಮಾಣಿಕತೆಯ ಪ್ರತಿನಿಧಿಗಳಾಗಬೇಕು. ಉತ್ತಮ ವ್ಯಕ್ತಿತ್ವ ಮತ್ತು ಸಂಸ್ಕೃತಿಗಳನ್ನು ಅಳವಡಿಸಿಕೊಂಡು ಜಗತ್ತಿಗೆ ಹೊಸ ಬೆಳಕು ನೀಡಬೇಕು ಎಂದು ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ದಿನೇಶ್ ಶೆಣೈ ಹೇಳಿದರು.

ವಿವೇಕಾನಂದ ಪದವಿಪೂರ್ವ ಕಾಲೇಜಿನ 2021-22 ಸಾಲಿನ ವಿದ್ಯಾರ್ಥಿ ಸಂಘ, ವಿಜ್ಞಾನ, ವಾಣಿಜ್ಯ, ಸಾಹಿತ್ಯ, ಕ್ರೀಡಾಸಂಘ ಮತ್ತು ಇಕೋ ಕ್ಲಬ್‌ಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಒಮ್ಮತದಿಂದ ಕಾರ್ಯ ನಿರ್ವಹಿಸುವ ಮನೋಭಾವವನ್ನು ಬೆಳೆಸಿಕೊಂಡು ಪರಂಪರೆ, ಪರಿಸರ ಮತ್ತು ಕಠಿಣ ಪರಿಶ್ರಮದ ನೆಲೆಗಟ್ಟಿನಲ್ಲಿ ಮೌಲ್ಯಾಧರಿತ ಜೀವನವನ್ನು ರೂಢಿಸಿಕೊಂಡರೆ ಬದುಕು ಉತ್ತಮವಾಗುತ್ತದೆ. ಸೋಲು ಎದುರಾದಾಗ ಧೈರ್ಯದಿಂದ ಎದುರಿಸಿ ವಾಸ್ತವಕ್ಕೆ ಮುಖಮಾಡಿ ನಿಲ್ಲಬೇಕು. ಮಹತ್ವಾಕಾಂಕ್ಷೆ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ರವಿಮುಂಗ್ಲಿಮನೆ ಮಾತನಾಡಿ ವಿದ್ಯಾರ್ಥಿ ಸಂಘಟನೆಗಳು ರಚನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಶಿಕ್ಷಣ ಸಂಸ್ಥೆಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಬೇಕು. ವಿದ್ಯಾರ್ಥಿಗಳು ಬದುಕನ್ನು ಗೌರವಿಸುವ ವ್ಯಕ್ತಿತ್ವವನ್ನು ರೂಪಿಸಿಕೊಂಡು ಸತ್ಪ್ರಜೆಗಳಾಗಿ ಹೊರಹೊಮ್ಮಬೇಕು. ದೊರೆತ ಅವಕಾಶಗಳನ್ನು ಉಪಯೋಗಿಸಿಕೊಂಡು ಪರಿಪೂರ್ಣ ವ್ಯಕ್ತಿತ್ವವನ್ನು ಪಡೆದುಕೊಳ್ಳಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪುನೀತ್ ,ಕಾರ್ಯದರ್ಶಿ ಕುಲದೀಪ್‌ಸಿಂಗ್, ಜತೆ ಕಾರ್ಯದರ್ಶಿ ಧರಿತ್ರಿ , ಕ್ರೀಡಾ ಸಂಘದ ಕಾರ್ಯದರ್ಶಿ ಗುರುಪ್ರಸಾದ್ , ಜತೆಕಾರ್ಯದರ್ಶಿ ದೀಪಾಲಿ ಇವರಿಗೆ ಪ್ರಮಾಣ ವಚನವನ್ನು ಬೋಧಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಉಪನ್ಯಾಸಕ ದೇವಿಪ್ರಸಾದ್ ವಿದ್ಯಾರ್ಥಿ ಪ್ರತಿನಿಧಿಗಳ ಆಯ್ಕೆ ಪ್ರಕ್ರಿಯೆ ಬಗ್ಗೆ ಸ್ಥೂಲವಾಗಿ ವಿವರಿಸಿದರು. ಉಪನ್ಯಾಸಕಿ ಉಷಾ ಕಾರ್ಯಕ್ರಮವನ್ನು ನಿರೂಪಿಸಿದರು. ಉಪನ್ಯಾಸಕಿ ಮಾಧವಿ ಪಟೇಲ್ ಸ್ವಾಗತಿಸಿ ಯಶವಂತಿ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror