ಭಾರತ ಸಂವಿಧಾನದ ಪ್ರಾಮುಖ್ಯತೆ ಮತ್ತು ಶ್ರೇಷ್ಠತೆಯನ್ನು ಮೂಡಿಸಲು ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಕಲಾ ವಿಭಾಗದ ಮುಖ್ಯಸ್ಥೆ ಮೋನಿಷಾ ಅವರು ಸಂವಿಧಾನದ ದಿನದ ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು. ನಂತರ ಸಂವಿಧಾನದ ರೂಪುರೇಷೆಯ ಬಗ್ಗೆ ಮಾತನಾಡಿ ಭಾರತದ ಸಂವಿಧಾನವು ನಮ್ಮ ಭಾರತೀಯ ಆಚಾರ-ವಿಚಾರಗಳ ಆಧಾರದ ಮೇಲೆ ನಿಂತಿದೆ. ನಮ್ಮ ಹಿರಿಯರು ಹೇಗೆ ನಮ್ಮನ್ನುಉತ್ತಮ ಮನುಷ್ಯನನ್ನಾಗಿ ಮಾಡಲು ಪ್ರಯತ್ನ ಪಡುತ್ತಿದ್ದರೂ, ಇಂದು ಅದೇ ರೀತಿ ನಮ್ಮ ಸಂವಿಧಾನ ನಮ್ಮ ದೇಶದ ಪ್ರತಿಯೊಬ್ಬ ಪ್ರಜೆಯನ್ನುರಕ್ಷಿಸುವ, ಅವರ ಬೆಳವಣಿಗೆಗೆ ಅವಕಾಶವನ್ನುಕೊಡುತ್ತದೆ.ವಿದ್ಯಾರ್ಥಿಗಳು ಸಂವಿಧಾನದ ಆಶಯದ ಕುರಿತಾದ ಕಾರ್ಯಕ್ರಮಗಳನ್ನು ರೂಪಿಸಿ, ಸಮಾಜದ ಉನ್ನತಿಗೆ ಪ್ರಯತ್ನಿಸಬೇಕು. ನಮ್ಮ ಸಂವಿಧಾನ ಪ್ರತಿಯೊಬ್ಬರನ್ನು ಸಮಾನರಾಗಿ ಕಾಣುವುದಲ್ಲದೆ, ಅವರಿಗೆ ಸಮಾನ ಅವಕಾಶ ನೀಡುತ್ತದೆ. ವಿದ್ಯಾರ್ಥಿಗಳೆಲ್ಲರೂ ಸಂವಿಧಾನ ದಿನಾಚರಣೆಯನ್ನುಅರ್ಥಪೂರ್ಣವಾಗಿಆಚರಿಸುವಜೊತೆಗೆ ಸಮಾಜದ ಎಲ್ಲರಿಗೂ ಸಂವಿಧಾನದ ಆಶಯವನ್ನುತಲುಪಿಸುವ ಕಾರ್ಯವನ್ನು ಮಾಡೋಣ ಹಾಗೂ ಆ ಮೂಲಕ ನಮ್ಮ ಸಂವಿಧಾನವನ್ನುಗೌರವಿಸೋಣಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಮಹೇಶ ನಿಟಿಲಾಪುರ, ಕಾಲೇಜಿನ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…
ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್…
ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…
ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…
ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…