ವಿವೇಕಾನಂದ ಇಂಜಿನಿಯರಿಂಗ್‌ ಕಾಲೇಜು | ಶೈಕ್ಷಣಿಕ ಅಭಿವೃದ್ಧಿ ಹಾಗೂ ವಿದೇಶೀ ಉನ್ನತ ಶಿಕ್ಷಣದಲ್ಲಿ ಸಹಭಾಗಿತ್ವ ಒಪ್ಪಂದ |

September 26, 2022
11:47 AM

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಹಾಗೂ ಐಡಿಪಿ ಎಜುಕೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇವುಗಳ ನಡುವೆ ಶೈಕ್ಷಣಿಕ ಅಭಿವೃದ್ಧಿ ಹಾಗೂ ವಿದೇಶೀ ಉನ್ನತ ಶಿಕ್ಷಣದಲ್ಲಿ ಸಹಭಾಗಿತ್ವವನ್ನು ನೀಡುವ ತಿಳುವಳಿಕೆಯ ಒಪ್ಪಂದಕ್ಕೆ (MOU) ಸಹಿ ಹಾಕಲಾಯಿತು.

ವಿದೇಶದಲ್ಲಿ ಉನ್ನತ ಶಿಕ್ಷಣವನ್ನು ಮಾಡಬಯಸುವ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನವನ್ನು ನೀಡುವುದು, ವಿವಿಧ ದೇಶಗಳ ವಿಶ್ವವಿದ್ಯಾನಿಲಯಗಳ ಮಾಹಿತಿ ನೀಡುವುದು, ಅಲ್ಲಿ ಪ್ರವೇಶ ಪಡೆಯುವುದಕ್ಕೆ ಬೇಕಾದ ತರಬೇತಿಯನ್ನು ನೀಡುವುದು ಮುಂತಾದ ವಿಷಯಗಳಲ್ಲಿ ಸಹಭಾಗಿತ್ವದ ಒಪ್ಪಂದ ಮಾಡಿಕೊಳ್ಳಲಾಗಿದೆ. ಅಲ್ಲದೆ ಅಂತಾರಾಷ್ಟ್ರೀಯ ಸಮ್ಮೇಳನಗಳಿಗೆ ಸಂಪನ್ಮೂಲ ವ್ಯಕ್ತಿಗಳನ್ನು ಒದಗಿಸುವುದು, ಉಪನ್ಯಾಸಕರಿಗೆ ತರಬೇತಿಗಳನ್ನು ನೀಡುವುದೂ ಇದರಲ್ಲಿ ಸೇರಿದೆ.

ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ, ಮೆಕ್ಯಾನಿಕಲ್ ವಿಭಾಗ ಮುಖ್ಯಸ್ಥ ಡಾ.ಮನುಜೇಶ್.ಬಿ.ಜೆ, ಎಂಬಿಎ ವಿಭಾಗದ ಪ್ರೊ.ರೋಬಿನ್ ಶಿಂಧೆ, ಐಡಿಪಿ ಎಜುಕೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‍ನ ವಿಭಾಗ ಪ್ರಬಂಧಕ ಅಜಯ್ ಚಂದ್ರನ್.ಬಿ, ಸಹಾಯಕ ವ್ಯವಸ್ಥಾಪಕ ಶಿಜೋ ಮೊನ್ ಯೇಸುದಾಸ್ ಹಾಗೂ ಇತರ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

ಇದೇ ಸಂದರ್ಭದಲ್ಲಿ ಕಾಲೇಜಿನ ಅಂತಿಮ ವರ್ಷದ ಮೆಕ್ಯಾನಿಕಲ್ ಮತ್ತು ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಐಡಿಪಿ ಎಜುಕೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‍ನ ಸಂಪನ್ಮೂಲ ವ್ಯಕ್ತಿಗಳು ಉನ್ನತ ಶಿಕ್ಷಣ ಮತ್ತು ಔದ್ಯೋಗಿಕ ಅವಕಾಶಗಳು ಎನ್ನುವ ವಿಷಯದ ಬಗ್ಗೆ ಮಾಹಿತಿಯನ್ನು ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್
ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror