Advertisement
ಮನಸ್ಸಿನ ಕನ್ನಡಿ

ಒಳ್ಳೆಯ ಮನಸ್ಸಿನವರಿಗೆ ಎಲ್ಲವೂ ಒಳ್ಳೆಯದೇ ಆಗುತ್ತದೆ…..ನಿಜವೇ ? | ಮನಸ್ಸಿನ ಕನ್ನಡಿಯಲ್ಲಿ ಬರೆಯುತ್ತಾರೆ ವಿವೇಕಾನಂದ ಎಚ್‌ ಕೆ… |

Share

ಒಳ್ಳೆಯ ಮನಸ್ಸಿನವರಿಗೆ ಎಲ್ಲವೂ ಒಳ್ಳೆಯದೇ ಆಗುತ್ತದೆ… ನಿಜವೇ ? , ನಾವು ಏನು ದಾನ ಮಾಡುತ್ತೇವೆಯೋ ಅದರ ಎರಡು ಪಟ್ಟು ನಮಗೆ ಬರುತ್ತದೆ… ಸತ್ಯವೇ ?..

Advertisement
Advertisement

ಒಳ್ಳೆಯವರಿಗೆ ಒಳ್ಳೆಯದು ಕೆಟ್ಟವರಿಗೆ ಕೆಟ್ಟದ್ದು ಆಗುತ್ತದೆ…. ವಾಸ್ತವವೇ ? , ನಾವು ಬದಲಾದರೆ ಜಗತ್ತೇ ಬದಲಾಗುತ್ತದೆ…. ಇದು ಪ್ರಾಯೋಗಿಕವೇ ? , ಇಂದಿನ ಎಲ್ಲಾ ಕಷ್ಟ ಸುಖಗಳಿಗೂ ಹಿಂದಿನ ಜನ್ಮದ ಪಾಪ ಪುಣ್ಯಗಳೇ ಕಾರಣ…. ನಂಬಬಹುದೇ ? , ಗಂಡು ಹೆಣ್ಣಿನ ಮದುವೆ ಸಂಬಂಧ ಪೂರ್ವ ನಿಯೋಜಿತ ಋಣಾನುಬಂಧ. ….ಸರಿಯೇ ?, ಗಂಡ ಹೆಂಡತಿ ಸಂಬಂಧ ಏಳು ಜನುಮಗಳ ಅನುಬಂದ….ಹೌದೇ ? , ಅನ್ನದ ಪ್ರತಿ ಅಗುಳಿನ ಮೇಲೂ ತಿನ್ನುವವನ ಹೆಸರು ಬರೆದಿರುತ್ತದೆ….. ಗೊತ್ತೇ ?, ಅಪಘಾತ, ಆಕಸ್ಮಿಕ, ಅನಾರೋಗ್ಯದ ಸಾವು ನಮ್ಮ ಹಣೆಬರಹ….. ಒಪ್ಪೋಣವೇ ?,  ಬದುಕಿನ ಎಲ್ಲಾ ಘಟನೆಗಳೂ ಪೂರ್ವ ನಿರ್ಧಾರಿತ…. ಪ್ರಶ್ನಿಸಬಾರದೇ ? , ನಮ್ಮನ್ನು ಕಾಡುವ ಈ ಮನಸ್ಥಿತಿಗೆ ಸಮಾಧಾನಕರ ಉತ್ತರಬೇಕಿದೆ……………

Advertisement

ಹೊಟ್ಟೆ ತುಂಬಿದ ಶ್ರೀಮಂತರು……., ವೇದಾಧ್ಯಯನ ಪಂಡಿತರು………., ಬೈಬಲ್ ಪ್ರಚಾರಕರು………., ಖುರಾನ್ ಆರಾಧಕರು…………., ವಿಭೂತಿ ಬಳಿದ ಮಠಾಧೀಶರು…………, ಪುನರ್ಜನ್ಮ ಸೃಷ್ಟಿಕರ್ತರು………, ಜ್ಯೋತಿಷಿಗಳು………., ವಿಚಾರವಾದಿಗಳು………, ವಿಜ್ಞಾನಿಗಳ ಉತ್ತರಗಳು ನಮಗೆ ಬೇಡ……….,

ಬೀದಿಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಯುವತಿಯಿಂದ ಉತ್ತರ ಬೇಕಿದೆ…….. ಹುತಾತ್ಮ ಯೋಧನ ಹೆಂಡತಿಯಿಂದ ಉತ್ತರ ಬೇಕಿದೆ…… ,ಆತ್ಮಹತ್ಯೆ ಮಾಡಿಕೊಂಡ ರೈತನ ಮಗನಿಂದ ಉತ್ತರ ಬೇಕಿದೆ………….., ಬಸ್ ಸ್ಟ್ಯಾಂಡಿನಲ್ಲಿ ದಿನ ಕಳೆಯುವ ಅನಾಥನಿಂದ ಉತ್ತರ ಬೇಕಿದೆ…………..,ಗಂಡನಿಂದಲೇ ಏಡ್ಸ್ ಬಂದು ಈಗ ಆತನಿಂದಲೇ ಪರಿತ್ಯಕ್ತಳಾದ ಮಹಿಳೆಯಿಂದ ಉತ್ತರ ಬೇಕಿದೆ………………., ಮಾನವೀಯತೆಯಿಂದ ವಿಧುವೆಗೆ ಬದುಕು ನೀಡಿ ಈಗ ವರದಕ್ಷಿಣೆ ಆರೋಪದಲ್ಲಿ ಜೈಲಿನಲ್ಲಿ ದಿನದೂಡುತ್ತಿರುವ ಯುವಕನಿಂದ ಉತ್ತರ ಬೇಕಿದೆ……………….., ತನ್ನದೆಲ್ಲವನ್ನೂ ಗಲಭೆಯಲ್ಲಿ ಕಳೆದುಕೊಂಡ ವ್ಯಕ್ತಿಯ ಉತ್ತರ ಬೇಕಿದೆ, ತಮ್ಮ ಸರ್ವಸ್ವವನ್ನೂ ತಮ್ಮ ನಾಲ್ಕು ಮಕ್ಕಳಿಗಾಗಿ ತ್ಯಾಗಮಾಡಿ ಈಗ ಅವರಿಂದ ತಿರಸ್ಕೃತರಾಗಿ ವೃದ್ಧಾಶ್ರಮದಲ್ಲಿ ಬದುಕುತ್ತಿರುವ ತಂದೆಯ ಉತ್ತರ ಬೇಕಿದೆ………………., ನಿವೃತ್ತಿ ವೇತನ ಪಡೆಯಲು 5 ವರ್ಷದಿಂದ ಭ್ರಷ್ಟ ಸರ್ಕಾರಿ ವ್ಯವಸ್ಥೆಯಲ್ಲಿ ನರಳುತ್ತಿರುವ ವೃಧ್ಧರಿಂದ ಉತ್ತರ ಬೇಕಿದೆ……………, ಪ್ರಾಮಾಣಿಕರಾಗಿದ್ದುದರಿಂದಲೇ ತನ್ನ ಸಹಚರರಿಂದ ಕಿರುಕುಳಕ್ಕೊಳಗಾಗಿ ಸೇವೆಯಿಂದ ವಜಾಗೊಂಡ ಸರ್ಕಾರಿ ಅಧಿಕಾರಿಯಿಂದ ಉತ್ತರ ಬೇಕಿದೆ…………..,

Advertisement

ಅವರ ಉತ್ತರಗಳು ಆಶಾದಾಯಕವಾಗಿದ್ದರೆ ಇವನ್ನೆಲ್ಲಾ ಮತ್ತೊಮ್ಮೆ ವಾಸ್ತವದ ವಿಮರ್ಶೆಗೊಳಪಡಿಸಬಹುದು. ಇಲ್ಲದಿದ್ದರೆ ಇನ್ನೆಷ್ಟು ದಿನ ಈ ಭ್ರಮೆಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು ಮುಂದುವರಿಯುವುದು. ಅಥವಾ
ಮೇಲೆ ಹೇಳಿದ ಎಲ್ಲವೂ ಸತ್ಯ. ನಿಮಗೆ ತಿಳಿವಳಿಕೆಯ ಕೊರತೆಯಿದೆ ಎನ್ನುವುದಾದರೆ ನಿಮಗೆ ಧನ್ಯವಾದಗಳು. ನಿಮ್ಮ ಅದೃಷ್ಟ ನಮಗಿಲ್ಲ.

ಏಕೆಂದರೆ…….

Advertisement

ಅಪ್ಪ ಅಮ್ಮ ಇದ್ದರೂ ಅನಾಥ ನಾ,

ಹೆಂಡತಿ ಮಕ್ಕಳಿದ್ದರೂ ಒಂಟಿ ನಾ,

Advertisement

ಗೆಳೆಯರಿದ್ದರೂ ಸ್ವತಂತ್ರ ನಾ,

ಹಣವಿದ್ದರೂ ದರಿದ್ರ ನಾ,

Advertisement

ಗುಣವಿದ್ದರೂ ದಡ್ಡ ನಾ,

ಆರೋಗ್ಯವಿದ್ದರೂ ರೋಗಿ ನಾ,

Advertisement

ಮಾತು ಬಂದರೂ ಮೂಕ ನಾ,

ದೇಶವಿದ್ದರೂ ನಿರಾಶ್ರಿತ ನಾ,

Advertisement

ಜ್ಞಾನವಿದ್ದರೂ ಅರಿಯದವನು ನಾ,

ಭಕ್ತಿಯಿದ್ದರೂ ನಾಸ್ತಿಕ ನಾ,

Advertisement

ಅಧಿಕಾರವಿದ್ದರೂ ಬೈರಾಗಿ ನಾ,

ಎಲ್ಲಾ ಇದ್ದರೂ ಏನೂ ಇಲ್ಲದವನು ನಾ,

Advertisement

ಏಕೆಂದರೆ ನಾ ಬಂದಿದ್ದೂ ಒಂಟಿಯಾಗಿ, ಹೋಗುವುದು ಒಂಟಿಯಾಗಿ ಎಂದು ತಿಳಿದವನು ನಾ

# ವಿವೇಕಾನಂದ ಎಚ್‌ ಕೆ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿವೇಕಾನಂದ ಎಚ್‌ ಕೆ

ಸಾಮಾಜಿಕ ಕಾರ್ಯಕರ್ತ ( ಪ್ರಬುದ್ಧ ಮನಸ್ಸು, ಪ್ರಬುದ್ಧ ಸಮಾಜ,ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ ಮನಸ್ಸುಗಳ ಅಂತರಂಗದ ಚಳವಳಿಯನ್ನು  ಜ್ಞಾನ ಭಿಕ್ಷಾ ಪಾದಯಾತ್ರೆಯ ಮೂಲಕ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ)

Published by
ವಿವೇಕಾನಂದ ಎಚ್‌ ಕೆ

Recent Posts

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ …

3 hours ago

ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |

ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.

10 hours ago

Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ…

13 hours ago

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

1 day ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

1 day ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

2 days ago