ಕೆಲವು ದಶಕಗಳ ಹಿಂದೆ………….
ಬಸ್ಸಿನ ಪ್ರಯಾಣದ ನೆನಪುಗಳು……
ಆಗಿನ ಕಲ್ಲು ಮಣ್ಣುಗಳ ರಸ್ತೆಯಲ್ಲಿ ಟೇಪ್ ರೆಕಾರ್ಡರಲ್ಲಿ ಹಾಡುಗಳನ್ನು ಹಾಕಿಕೊಂಡು ಜೋರಾಗಿ ಹಾರನ್ ಮಾಡುತ್ತಾ ಬರುತ್ತಿದ್ದವು.
ಸಾಮಾನ್ಯವಾಗಿ ಡ್ರೈವರ್ ಕಂಡಕ್ಟರ್ ಮತ್ತು ಕ್ಲೀನರ್ ಎಂಬ ಮೂರು ಜನ ಅದರೊಂದಿಗಿರುತ್ತಿದ್ದರು. ಆಗಿನ ಕಾಲಕ್ಕೆ ಅವರಿಗೆ ತುಂಬಾ ಮರ್ಯಾದೆ ಸಿಗುತ್ತಿತ್ತು. ಅವರ ಪರಿಚಯ ನಮಗಿದೆ ಎಂಬುದೇ ಒಂದು ಪ್ರತಿಷ್ಠೆಯಾಗಿತ್ತು.
ಆಗ ಕೆಲವು ರೂಟಿನಲ್ಲಿ ಒಂದೇ ಬಸ್ಸು ಸಂಚರಿಸುತ್ತಿತ್ತು. ಅನುಕೂಲಕ್ಕೆ ತಕ್ಕಂತೆ ಬೆಳಗ್ಗೆ 7 ಕ್ಕೆ ಹೊರಟು ಅನೇಕ ಊರುಗಳನ್ನು ಸುತ್ತಿ ಮಧ್ಯಾಹ್ನ 2 ಕ್ಕೆ ಗುರಿ ತಲುಪಿ ಮತ್ತೆ 3 ಕ್ಕೆ ವಾಪಸ್ಸು ಹೊರಟು ರಾತ್ರಿ 9/10 ಗಂಟೆಗೆ ವಿಶ್ರಾಂತ ಸ್ಥಳ ತಲುಪುತ್ತಿದ್ದವು.
ಬಸ್ಸಿನ ಪ್ರಯಾಣಿಕರಲ್ಲಿಯೂ ಅತ್ಯಂತ ಆತ್ಮೀಯತೆ ಉತ್ಸಾಹ ಇರುತ್ತಿತ್ತು. ಆಗಿನ ಬಡತನದ ಜೀವನದಲ್ಲೂ ಜನರು ಪ್ರಯಾಣವನ್ನು ಸಂಭ್ರಮಿಸುತ್ತಿದ್ದರು. ಒಬ್ಬರಿಗೊಬ್ಬರು ಪರಿಚಯ ಮಾಡಿಕೊಂಡು ಮಳೆ ಬೆಳೆಗಳ ಬಗ್ಗೆ ಚರ್ಚಿಸುತ್ತಿದ್ದರು. ಮಗ/ಮಗಳ ಮದುವೆ ಸಂಬಂಧಗಳ ಬಗ್ಗೆ ಸಂಪರ್ಕ ಏರ್ಪಡಿಸಿಕೊಳ್ಳುತ್ತಿದ್ದರು. ಕಷ್ಟ ಸುಖಗಳನ್ನು ಹಂಚಿಕೊಳ್ಳುತ್ತಿದ್ದರು. ಪ್ರೇಮ ಪ್ರಕರಣಗಳು ಸಾಕಷ್ಟು ಇದ್ದವು.
ಆಗ ಬಸ್ಸಿನ ಪ್ರಯಾಣಿಕರಲ್ಲಿ ಅದರಲ್ಲೂ ಮಹಿಳಾ ಪ್ರಯಾಣಿಕರಲ್ಲಿ ವಾಂತಿ ಮಾಡುವುದು ತುಂಬಾ ಇರುತ್ತಿತ್ತು. ಬಸ್ಸಿನ ಡೀಸೆಲ್ ವಾಸನೆ ಅಥವಾ ರಸ್ತೆಗಳ ಹಳ್ಳಗಳಿಂದ ಉಂಟಾಗುವ ಕುಲುಕುವಿಕೆ ಅಥವಾ ಅಪರೂಪದ ಪ್ರಯಾಣದ ಕಾರಣಕ್ಕಾಗಿ ಆಗುತ್ತಿರಬಹುದು. ಅದಕ್ಕಾಗಿ ಕೆಲವೊಮ್ಮೆ ಬಸ್ಸನ್ನು ನಿಲ್ಲಿಸುತ್ತಿದ್ದರು. ಯಾವ ಪ್ರಯಾಣಿಕರು ಬೇಸರ ಮಾಡಿಕೊಳ್ಳದೆ ಸಹಕರಿಸುತ್ತಿದ್ದರು.
ಮಕ್ಕಳೂ ಸಹ ಪ್ರಯಾಣದ ಪ್ರತಿ ಕ್ಷಣವನ್ನೂ ಪ್ರತಿ ಗಿಡ ಮರ ಕೆರೆ ಊರು ಮನೆ ಪ್ರಾಣಿಗಳನ್ನು ಅತ್ಯಂತ ಕುತೂಹಲದಿಂದ ವೀಕ್ಷಿಸುತ್ತಾ ಇರುತ್ತಿದ್ದರು. ಈಗಿನವರಂತೆ ಮೊಬೈಲ್ ವಿಡಿಯೋ ಗೇಮ್ ನಲ್ಲಿ ಕಳೆದುಹೋಗುತ್ತಿರಲಿಲ್ಲ. ಬಾಲ್ಯದಲ್ಲಿ ನಾವು ಬಸ್ಸಿನಲ್ಲಿ ಹೋಗಿತ್ತಿದ್ದರೆ ಗಿಡ ಮರಗಳು ಜೋರಾಗಿ ಚಲಿಸಿತ್ತಿದ್ದಂತೆ ಭಾಸವಾಗಿ ಅವೂ ಕೂಡ ನಮ್ಮೊಂದಿಗೆ ಬರುತ್ತಿವೆ ಎಂದು ಸೃಷ್ಟಿಸುತ್ತಿದ್ದ ಭ್ರಮೆ ನೆನಪಾದರೆ ಈಗಲೂ ನಗು ಬರುತ್ತದೆ.
# ವಿವೇಕಾನಂದ ಎಚ್ ಕೆ
ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ಗಳನ್ನು ತಪಾಸಣೆ ನಡೆಸಿ 26 ಲಕ್ಷ…
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…
ಹಾಲಿನ ದರ ಹೆಚ್ಚಳ ಮಾಡುವಂತೆ ರೈತರಿಂದ ಬೇಡಿಕೆ ಹೆಚ್ಚಿದ್ದು, ಪ್ರತಿ ಲೀಟರ್ ಗೆ…
ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…
ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್ ಅವರು ಇಲ್ಲಿ ವಿವರ…
ಪ್ರಯಾಗ್ ರಾಜ್ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…