Advertisement
ಅಂಕಣ

ಒಳ್ಳೆಯ ಕೆಲಸದಲ್ಲಿ ಕೆಟ್ಟದ್ದನ್ನು ಹುಡುಕುವ ಗುಣ ವರ್ಗಾಯಿಸಲ್ಪಡುತ್ತಿದೆ…! | ವಿವೇಕಾನಂದ ಎಚ್‌ ಕೆ ಮನಸ್ಸಿನ ಕನ್ನಡಿಯಲ್ಲಿ ಬರೆಯುತ್ತಾರೆ…|

Share

ಳ್ಳೆಯ ಕೆಲಸದಲ್ಲಿ ಕೆಟ್ಟದ್ದನ್ನು, ಕೆಟ್ಟ ಕೆಲಸಗಳಲ್ಲಿ ಒಳ್ಳೆಯದನ್ನು ಹುಡುಕುವ ಗುಣ ಜನರಿಂದ ರಾಜಕಾರಣಿಗಳಿಗೆ, ರಾಜಕಾರಣಿಗಳಿಂದ ಮಾಧ್ಯಮಗಳಿಗೆ ವರ್ಗಾಯಿಸಲ್ಪಟ್ಟಿದೆ.

Advertisement
Advertisement
Advertisement
Advertisement

ಪ್ರೀತಿಯಲ್ಲಿ ದ್ವೇಷವನ್ನು, ದ್ವೇಷದಲ್ಲಿ ಪ್ರೀತಿಯನ್ನು ಹುಡುಕುವ ಮನೋಭಾವ ಧಾರವಾಹಿ ಸಿನಿಮಾ ಕಥೆ ಕಾದಂಬರಿಗಳಿಂದ ಜನರಿಗೆ ವರ್ಗಾಯಿಸಲ್ಪಟ್ಟಿದೆ.

Advertisement

ನಾಜೂಕಿನ ವಂಚನೆಯನ್ನು,ಕಾನೂನಿನ ನೆರಳಲ್ಲಿ ಅಪರಾಧವನ್ನು, ಅಮಾಯಕರಿಗೆ ಹಿಂಸೆ ಕೊಡುವ ಉಪಾಯಗಳನ್ನು ನ್ಯಾಯಾಲಯಗಳು ಜನರಿಗೆ ವರ್ಗಾಯಿಸಿವೆ.

ಕಲೆಗಳಿಂದ ಜನಪ್ರಿಯತೆಯನ್ನು, ಜನಪ್ರಿಯತೆಯಿಂದ ಸನ್ಮಾನಗಳನ್ನು, ಸನ್ಮಾನಗಳಿಂದ ಪ್ರಶಸ್ತಿಗಳನ್ನು, ಪ್ರಶಸ್ತಿಗಳಿಂದ ಅಧಿಕಾರವನ್ನು, ಅಧಿಕಾರದಿಂದ ಹಣವನ್ನು ಪಡೆಯುವ ಮಾರ್ಗಗಳನ್ನು ಅಕ್ಷರ ಜ್ಞಾನ ಜನರಿಗೆ ವರ್ಗಾಯಿಸಿದೆ.

Advertisement

ತಪ್ಪುಗಳನ್ನು ಸರಿ ಎಂದು, ಸರಿಯನ್ನು ತಪ್ಪೆಂದು,  ನಿಜವನ್ನು ಸುಳ್ಳೆಂದು, ಸುಳ್ಳನ್ನು ನಿಜವೆಂದು, ವಾಸ್ತವವನ್ನು ಭ್ರಮೆ ಎಂದು
ಭ್ರಮೆಯನ್ನು ವಾಸ್ತವ ಎಂದು ನಿರೂಪಿಸುವ ಕಲೆಗಾರಿಕೆ ಸಮೂಹ ಸಂಪರ್ಕ ಮಾಧ್ಯಮಗಳಿಂದ ಜನರಿಗೆ ವರ್ಗಾಯಿಸಲ್ಪಟ್ಟಿದೆ.

ಕಪಟ ಭಕ್ತಿಯಿಂದ, ಆಡಂಬರ ಪ್ರದರ್ಶನದ ಪೂಜೆಗಳಿಂದ ದೇವರನ್ನೇ ವಂಚಿಸುವ, ದೇವರಿಗೆ ಲಂಚ ಕೊಡುವ ಮನೋಭಾವ ಮಂದಿರ ಮಸೀದಿ ಚರ್ಚುಗಳ ಮುಖ್ಯಸ್ಥರಿಂದ ಜನರಿಗೆ ವರ್ಗಾಯಿಸಲ್ಪಟ್ಟಿದೆ.

Advertisement

ಪಾಶ್ಚಾತ್ಯ ಸಂಸ್ಕೃತಿಗಳ ನಾಗರಿಕ ಪ್ರಜ್ಞೆಯನ್ನು ಮರೆಮಾಚಿ ಅವರ ಊಟ ಬಟ್ಟೆ ಕುಡಿತ ಜೂಜು ಅನೈತಿಕ ಸಂಬಂಧಗಳು ದುಂದು ವೆಚ್ಚ ಮುಂತಾದ ಬಾಹ್ಯ ನಡವಳಿಕೆಗಳು ಮಾತ್ರ ಮಾಧ್ಯಮಗಳ ಮುಖಾಂತರ ಜನರಿಗೆ ವರ್ಗಾಯಿಸಲ್ಪಟ್ಟಿದೆ.

ಹೀಗೆ ವರ್ಗಾಯಿಸಲ್ಪಟ್ಟ ಮನಸ್ಥಿತಿ ಇಡೀ ವ್ಯವಸ್ಥೆಯ ಮೂಲದ್ರವ್ಯವನ್ನೇ ನುಂಗಿ ಮೌಲ್ಯಗಳ ಅಧಃಪತನ ಹೊಂದಿ ಕೇವಲ ಮುಖವಾಡಗಳ ವ್ಯಾವಹಾರಿಕ ಜೀವನವೇ ನಮ್ಮ ಸಮಾಜವಾಗಿದೆ. ಇದನ್ನು ಬದಲಿಸುವುದೇ ನಮ್ಮೆಲ್ಲರ ಮೊದಲ ಆಧ್ಯತೆಯಾಗಿರಲಿ.

Advertisement

ಏಕೆಂದರೆ ಈಗ ನಾವು ನಮ್ಮ ಜವಾಬ್ದಾರಿ ನಿರ್ವಹಿಸದೆ ಮೌನವಾಗಿ ಎಲ್ಲವನ್ನೂ ಸಹಿಸಿಕೊಂಡರೆ ಭವಿಷ್ಯದಲ್ಲಿ ನಮ್ಮ ಮಕ್ಕಳ ಬದುಕು ತುಂಬಾ ಕಷ್ಟದ ಹಾದಿಯಾಗುತ್ತದೆ. ಹಾಲು ಕುಡಿಯುವವರೇ ಬದುಕುವುದು ಕಷ್ಟವಾಗಿರುವಾಗ ವಿಷ ಕುಡಿಯುವವರು ಬದುಕಲು ಸಾಧ್ಯವೇ ?

ವೇಗದ ಆಧುನಿಕ ಬದುಕಿನಲ್ಲಿ ಎಲ್ಲವೂ ವ್ಯಾಪರೀಕರಣ ಆಗಿರುವಾಗ ನಾವು ನಮ್ಮ ಜವಾಬ್ದಾರಿ ನಿರ್ವಹಿಸಲೇ ಬೇಕು. ಆ ಬಗ್ಗೆ ದಯವಿಟ್ಟು ಗಂಭೀರವಾಗಿ ಯೋಚಿಸಿ ಎಂದು ಮನವಿ ಮಾಡಿಕೊಳ್ಳುತ್ತಾ……,.

Advertisement

# ವಿವೇಕಾನಂದ ಎಚ್‌ ಕೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿವೇಕಾನಂದ ಎಚ್‌ ಕೆ

ಸಾಮಾಜಿಕ ಕಾರ್ಯಕರ್ತ ( ಪ್ರಬುದ್ಧ ಮನಸ್ಸು, ಪ್ರಬುದ್ಧ ಸಮಾಜ,ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ ಮನಸ್ಸುಗಳ ಅಂತರಂಗದ ಚಳವಳಿಯನ್ನು  ಜ್ಞಾನ ಭಿಕ್ಷಾ ಪಾದಯಾತ್ರೆಯ ಮೂಲಕ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ)

Published by
ವಿವೇಕಾನಂದ ಎಚ್‌ ಕೆ

Recent Posts

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

10 hours ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

10 hours ago

ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…

10 hours ago

ಗ್ರೇಟರ್ ಹೆಸರಗಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ ಶುದ್ಧ ಪರಿಸರಕ್ಕೆ ಸಹಕಾರಿ | ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ

ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…

10 hours ago

ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ

ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಕರ್ನಾಟಕ ಕೊಳಚೆ…

10 hours ago