ಜೂನ್ ತಿಂಗಳೆಂದರೆ ಮೊದಲು ನೆನಪಾಗುವುದು ವಿಶ್ವ ಪರಿಸರ ದಿನ………

June 2, 2024
7:43 PM

ಈ ವರ್ಷದ World environment day ಜೂನ್ 5………

Advertisement
Advertisement
Advertisement

ಈ ವರ್ಷದ ತಾಪಮಾನದ ಹೊಡೆತಕ್ಕೆ ಬಹಳಷ್ಟು ಜನ ಮತ್ತು ಪ್ರಾಣಿ ಪಕ್ಷಿಗಳು ನುಜ್ಜುಗುಜ್ಜಾದ ಕಾರಣ ಇದರ ನೆನಪು ಬೇಗ ಆಗುತ್ತಿದೆ….

Advertisement

ಅದರಲ್ಲೂ ಉತ್ತರ ಭಾರತದ ಒಂದು ಸ್ಥಳದಲ್ಲಿ ಗರಿಷ್ಠ ತಾಪಮಾನ 56 ಡಿಗ್ರಿ ಸೆಲ್ಸಿಯಸ್ ಎಂದು ಕೇಳಿಯೇ ತಲೆ ತಿರುಗುತ್ತಿದೆ…..

ವಿಶ್ವ ಪರಿಸರ ದಿನ ಎಂಬ ನಾಟಕ, ನೀರು ಉಳಿಸಿ ಜೀವ ಉಳಿಸಿ ಎಂಬ ಮೂರ್ಖತನ,ಹಸಿರೇ ಉಸಿರು, ಗಿಡ ನೆಡಿ ಎಂಬ ಫ್ಯಾಷನ್,
ಪ್ರಕೃತಿಯೇ ದೇವರು ಎಂಬ ಸೋಗಲಾಡಿತನ…..ಅರೆ, ಮನುಷ್ಯನೇ ಪ್ರಕೃತಿಯ ಒಂದು ಭಾಗ,ಆತನ ಅಸ್ತಿತ್ವವದ ಮೂಲವೇ ಪರಿಸರ,ಅದನ್ನು ಉಳಿಸಿಕೊಳ್ಳದೇ ನಾಶ ಮಾಡುತ್ತಿರುವ ಮನುಷ್ಯನಿಗೆ ಪರಿಸರ ದಿನ ಆಚರಿಸುವ ನೈತಿಕತೆಯೇ ಇಲ್ಲ, ಅದೊಂದು ಆತ್ಮವಂಚನೆ – ಬೂಟಾಟಿಕೆ….

Advertisement

ಸ್ವತಃ ತನ್ನ ಕಣ್ಣನ್ನು ತಾನೇ ತಿವಿದುಕೊಂಡು ನನ್ನ ಕಣ್ಣನ್ನು ಉಳಿಸಿ ಎಂದು ಗೋಗರೆಯುವ ನಾಟಕವೇಕೆ,…. ಹೃದಯವನ್ನು ಇರಿದುಕೊಂಡು ಹೃದಯ ಉಳಿಸಿ ಎಂಬ ಕಣ್ಣೀರೇಕೆ,…. ಆತ್ಮಹತ್ಯೆ ಮಾಡಿಕೊಳ್ಳಲು ವಿಷ ಕುಡಿದು ಜೀವ ಉಳಿಸಿ ಎಂದು ಬೇಡುವಂತ ದೈನೇಸಿ ಸ್ಥಿತಿ ಏಕೆ……

ಈ ಮನುಷ್ಯನಿಗೆ ಬೇಕಿರುವುದು ದೊಡ್ಡ ದೊಡ್ಡ, ಉದ್ದುದ್ದದ ವಿಶಾಲ ರಸ್ತೆಗಳು, ಲೆಕ್ಜುರಿ ಅಪಾರ್ಟ್‌ಮೆಂಟ್ ಗಳು, ಬೃಹತ್ ಕಟ್ಟಡಗಳು, ಜಂಗಲ್ ಲಾಡ್ಜ್ ಗಳು, ಸ್ಮಾರ್ಟ್ ಸಿಟಿಗಳು, ನಿರಂತರ ವಿದ್ಯುತ್, ವಿಮಾನ ನಿಲ್ದಾಣಗಳು, ಭವ್ಯ ಆಸ್ಪತ್ರೆಗಳು, ರಾಸಾಯನಿಕ ಕಾರ್ಖಾನೆಗಳು,….‌

Advertisement

ಮೊಬೈಲ್, ಷೂ, ಲಿಪ್ ಸ್ಟಿಕ್, ಡ್ರೆಸ್, ಕಾರ್, ಕಮೋಡ್ ಗಳಲ್ಲಿ ಅತ್ಯುತ್ತಮ ಕ್ವಾಲಿಟಿ ನಿರೀಕ್ಷಿಸುವ – ಬಯಸುವ ಇದೇ ಮನುಷ್ಯನಲ್ಲಿ ಆತನ ದೇಹ ಮತ್ತು ಮಾನಸಿಕ ಆರೋಗ್ಯದಲ್ಲಿ ಯಾವುದೇ ಕ್ವಾಲಿಟಿ ಇರುವುದಿಲ್ಲ…..

ನೀರನ್ನು, ಗಾಳಿಯನ್ನು, ಆಹಾರವನ್ನು ವಿಷಯುಕ್ತ ಮಾಡಿರುವ ಸರ್ಕಾರಗಳು ಈಗ ವಿಶ್ವ ಪರಿಸರ ದಿನ ಎಂಬ ಜಾಗೃತಿ ಮೂಡಿಸುವ ದಿನವನ್ನು ಆಚರಿಸುವ ನಾಟಕ ಪ್ರದರ್ಶಿಸುತ್ತಿವೆ…..

Advertisement

ಅಭಿವೃದ್ಧಿಯ ಮಾನದಂಡಗಳನ್ನು ತಪ್ಪಾಗಿ ಅರ್ಥೈಸಿ, ಆಧುನಿಕ ತಂತ್ರಜ್ಞಾನ ಉಪಯೋಗಿಸಿಕೊಂಡು ಒಂದು ಕಡೆ ಪರಿಸರ ನಾಶ, ಇನ್ನೊಂದು ಕಡೆ ಮಾನವೀಯ ಮೌಲ್ಯಗಳ ಕುಸಿತಕ್ಕೆ ಕಾರಣವಾಗಿದೆ…..

ಅಭಿವೃದ್ಧಿಯೂ ಬೇಕು, ಆಧುನಿಕತೆಯೂ ಬೇಕು, ತಂತ್ರಜ್ಞಾನವೂ ಬೇಕು, ಬೃಹತ್ ಜನಸಂಖ್ಯೆಯ ಬೇಡಿಯನ್ನೂ ಪೂರೈಸಬೇಕು, ಅದರಲ್ಲಿ ಯಾವುದೇ ರಾಜಿ ಬೇಡ. ಆದರೆ ಅದರ ಅರ್ಥ ಪರಿಸರ ಮತ್ತು ಮಾನವೀಯತೆಯ ನಾಶ ಎಂದಲ್ಲ. ಅವುಗಳ ಸಮತೋಲನ ಮತ್ತು ಸಮನ್ವಯ…..

Advertisement

ದುರಾದೃಷ್ಟವಶಾತ್ ಇಂದಿನ ಅಭಿವೃದ್ಧಿ ವಿನಾಶಕಾಲೇ ವಿಪರೀತ ಬುದ್ದಿ ಎಂಬಂತೆ ಆಗಿದೆ…..

ಅಣುವಿನ ಕಣವಾಗಿ, ಪರಿಸರದ ದಿನಕ್ಕಾಗಿ, ನಾ ಕೊಡುವುದಾದರೂ ಏನು…………….

Advertisement

ಈಗಾಗಲೇ ಎಲ್ಲವನ್ನೂ ಕೊಟ್ಟಾಗಿದೆ, ಈಗೇನಿದ್ದರೂ ಎಲ್ಲವೂ ಪಡೆಯುವುದೆ…..

ಏನೇನು ಪಡೆದಿರುವೆ ಹೇಳಲೆ……

Advertisement

ತಲೆ ತಿರುಗುತ್ತಿದೆ ಕೆಟ್ಟ ಬಿಸಿಲಿನ ಝಳಕ್ಕೆ ಸಿಲುಕಿ,…

ಕಣ್ಣು ಉರಿಯುತ್ತಿದೆ ಧೂಳು ತುಂಬಿದ ಗಾಳಿಗೆ ಸಿಲುಕಿ,….

Advertisement

ಉಸಿರಾಡುವುದೂ ಕಷ್ಟವಾಗುತ್ತಿದೆ ವಿಷಪೂರಿತ ವಾಯುವಿಗೆ ಸಿಲುಕಿ,….

ಕಿವಿ ನೋಯುತ್ತಿದೆ ಕರ್ಕಶ ಶಬ್ದಕ್ಕೆ ಸಿಲುಕಿ,…

Advertisement

ಬಾಯಿ ಹುಣ್ಣಾಗಿದೆ ಕಲುಷಿತ ನೀರಿಗೆ ಸಿಲುಕಿ,…

ನಾಲಿಗೆ ಹೆಪ್ಪುಗಟ್ಟಿದೆ ರಾಸಾಯನಿಕ ಬೆರೆಸಿದ ತಂಪು ಪಾನೀಯಕ್ಕೆ ಸಿಲುಕಿ,…

Advertisement

ಗಂಟಲು ಕೆಟ್ಟಿದೆ ಮಲಿನ ನೀರಿಗೆ ಸಿಲುಕಿ,…

ಹೊಟ್ಟೆ ನೋಯುತ್ತಿದೆ ಕಲಬೆರಕೆ ಆಹಾರಕ್ಕೆ ಸಿಲುಕಿ,…

Advertisement

ಸಾಕೇ ಇನ್ನೂ ಬೇಕೇ….

ಆದರೂ,

Advertisement

ಹೇಳುತ್ತಿದ್ದೇವೆ ಅಭಿವೃದ್ಧಿ ಹೊಂದುತ್ತಿದ್ದೇವೆಂದು,….

ಶಿಕ್ಷಣದ ಗುಣಮಟ್ಟ ಹಾಳಾಗುತ್ತಿದೆ,
ಆಡಳಿತ ವ್ಯವಸ್ಥೆ ಹದಗೆಡುತ್ತಿದೆ,
ಚುನಾವಣಾ ರಾಜಕೀಯ ಹಳ್ಳ ಹಿಡಿಯುತ್ತಿದೆ,
ನ್ಯೆತಿಕತೆ ಕುಸಿಯುತ್ತಿದೆ,
ಮಾನವೀಯ ಮೌಲ್ಯಗಳು ಕಡಿಮೆಯಾಗುತ್ತಿವೆ,….

Advertisement

ಆದರೂ,

ಹೇಳುತ್ತಿದ್ದೇವೆ ಅಭಿವೃದ್ಧಿ ಹೊಂದುತ್ತಿದ್ದೇವೆಂದು,….

Advertisement

SMART CITY ಆಗುತ್ತಿದೆ,
BULLET TRAIN ಬರುತ್ತಿದೆ,
E-GOVERNENCE ಆಗುತ್ತಿದೆ,
DIGITAL INDIA ಬರುತ್ತಿದೆ,
HIGHTECH ಆಸ್ಪತ್ರೆ ಆಗುತ್ತಿದೆ,
FIRST CLASS. ರಸ್ತೆಗಳು ಬರುತ್ತಿವೆ,….

ಶ್ರೀಮಂತರು ಜಾಸ್ತಿಯಾಗುತ್ತಿದ್ದಾರೆ,
ತಂತ್ರಜ್ಞಾನ ಮುಂದುವರಿಯುತ್ತಿದೆ,….

Advertisement

ಆದರೆ, ಧೈರ್ಯವಾಗಿ ಹೇಳಲು ಸಾಧ್ಯವಾಗುತ್ತಿಲ್ಲ ನಾವು ಮುಂದುವರಿಯುತ್ತಿದ್ದೇವೆಂದು…….

ಈ ಅಭಿವೃದ್ಧಿ, ಹಣ ಕೇಂದ್ರಿತ, ತಂತ್ರಜ್ಞಾನ ಆಧಾರಿತ, ಅಂಕಿ ಸಂಖ್ಯೆ ಪ್ರೇರಿತ,…..

Advertisement

ವ್ಯಕ್ತಿತ್ವಗಳೇ ಕುಸಿಯುತ್ತಿರುವಾಗ, ಮಾನವೀಯತೆ ಮರೆಯಾಗುತ್ತಿರುವಾಗ,
ಸಮಾನತೆ ಕಾಣದಾದಾಗ, ಪ್ರಬುದ್ಧತೆ ಬೆಳೆಯದಾದಾಗ,
ಅಭಿವೃದ್ಧಿ ತಾತ್ಕಾಲಿಕ ಮತ್ತು ವಿನಾಶಕಾರಕ,….

ಪ್ರಕೃತಿ – ಪರಿಸರಗಳನ್ನೇ ದೇವರೆಂದು ಹೇಳಿ ಅದರ ಹೃದಯಕ್ಕೆ ಬೆನ್ನಿಗೆ ಚೂರಿ ಹಾಕುವ ಈ ಮನುಷ್ಯ ಪ್ರಾಣಿಗೆ ಏನು ಮಾಡುವುದು…..ಪರಿಸರ ನಾಶ ಮಾಡುತ್ತಾ ಪರಿಸರದ ದಿನ ಆಚರಿಸುವ ಆತ್ಮವಂಚಕ ಮನಸ್ಥಿತಿ ನಮ್ಮದು…..

Advertisement

ತಕ್ಷಣ ಮಾಡಬೇಕಾದ ಕೆಲಸ ಬಹಳಷ್ಟಿದೆ. ಆದರೆ ಮಾಡುವವರು ಯಾರು ಎಂಬುದೇ ದೊಡ್ಡ ಪ್ರಶ್ನೆಯೊಂದಿಗೆ……

ಬರಹ :
ವಿವೇಕಾನಂದ. ಎಚ್.ಕೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ವಿವೇಕಾನಂದ ಎಚ್‌ ಕೆ

ಸಾಮಾಜಿಕ ಕಾರ್ಯಕರ್ತ ( ಪ್ರಬುದ್ಧ ಮನಸ್ಸು, ಪ್ರಬುದ್ಧ ಸಮಾಜ,ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ ಮನಸ್ಸುಗಳ ಅಂತರಂಗದ ಚಳವಳಿಯನ್ನು  ಜ್ಞಾನ ಭಿಕ್ಷಾ ಪಾದಯಾತ್ರೆಯ ಮೂಲಕ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ)

ಇದನ್ನೂ ಓದಿ

ಕೋಲಾರದಲ್ಲಿ ಅತೀ ಹೆಚ್ಚು ನಕಲಿ ವೈದ್ಯರು…! | ನಕಲಿ ವೈದ್ಯರ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮ
November 21, 2024
7:36 PM
by: The Rural Mirror ಸುದ್ದಿಜಾಲ
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ  ಮನವಿ
November 21, 2024
7:32 PM
by: The Rural Mirror ಸುದ್ದಿಜಾಲ
ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ದೆಹಲಿಯಲ್ಲಿ ಲಭ್ಯ | 2.5 ಲಕ್ಷ ಲೀಟರ್ ಹಾಲು ದೆಹಲಿಗೆ ಪೂರೈಸಲು ತೀರ್ಮಾನ |
November 21, 2024
7:25 PM
by: ದ ರೂರಲ್ ಮಿರರ್.ಕಾಂ
ಹುಣಸೆ ಹಣ್ಣು ಸಂರಕ್ಷಣೆ, ಮಾರಾಟದ ತರಬೇತಿ ಕಾರ್ಯಾಗಾರ
November 21, 2024
7:09 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror