ಅನುಕ್ರಮ

ಹಿರಿಯರ ನೆನಪಿನ ಹಬ್ಬ ಮಹಾಲಯ ಅಮಾವಾಸ್ಯೆ ಅಥವಾ ಪಿತೃಪಕ್ಷ…..

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇತಿಹಾಸದ ಸಾವಿರಾರು ವರ್ಷಗಳ ಅನುಭವಗಳು ವೈಯಕ್ತಿಕವಾಗಿ ಮತ್ತು ಸಾಮಾಜಿಕವಾಗಿ ಒಂದು ಕ್ರಮಬದ್ಧ ಜೀವನಶೈಲಿ ರೂಪಿಸುವಲ್ಲಿ ಮಹತ್ವದ ಪಾಠ ಕಲಿಸುತ್ತವೆ. ಅದು ಮೂಡ ನಂಬಿಕೆಗಳಾಗದೆ ಸಹಜ ಸಾರ್ವತ್ರಿಕ ಸತ್ಯಗಳಾಗಿದ್ದರೆ ಅದರಿಂದ ಸಾಕಷ್ಟು ಪ್ರಯೋಜನ ಪಡೆಯಬಹುದು.

Advertisement

ನಮ್ಮ ಹಿರಿಯ ತಲೆಮಾರುಗಳನ್ನು ಪ್ರತಿ ವರ್ಷ ನೆನಪಿಸುವ ಮತ್ತು ಅವರ ಆದರ್ಶಗಳನ್ನು ಮೆಲುಕು ಹಾಕುವ ಹಾಗು ನಮ್ಮ ಮುಂದಿನ ಪೀಳಿಗೆಯವರಿಗೆ ಪರಿಚಯಿಸುವ ಒಂದು ಹಬ್ಬ ಈ‌ ಮಹಾಲಯ ಅಮಾವಾಸ್ಯೆ.ನಗರ ಮತ್ತು ಗ್ರಾಮೀಣ ಪ್ರದೇಶ ಎಂಬ ಭೇದವಿಲ್ಲದೆ ಬಹುತೇಕರ ಮನೆಯಲ್ಲಿ ಆಚರಿಸಲಾಗುತ್ತದೆ.

ತೀರಿಹೋದ ಹಿರಿಯರ ನೆನಪಿಗಾಗಿ ಅವರ ಇಷ್ಟದ ಊಟ ಬಟ್ಟೆ ವಸ್ತುಗಳು ಇತ್ಯಾದಿಗಳನ್ನು ಇಟ್ಟು ಅವರಿಗೆ ಅರ್ಪಿಸಿದಂತೆ ಮಾಡಿ ನಾವೇ ಉಪಯೋಗಿಸುವುದು.

ಜ್ಯೋತಿಷಿಗಳಂತು ಟಿವಿಗಳಲ್ಲಿ ಇದರ ಬಗ್ಗೆ ಇಲ್ಲಸಲ್ಲದ ಅನೇಕ ಮೌಢ್ಯಗಳನ್ನು ಹೇಳಿ ಜನರನ್ನು ಮತ್ತಷ್ಟು ದಿಕ್ಕು ತಪ್ಪಿಸುತ್ತಿದ್ದಾರೆ. ಬದಲಾದ ಕಾಲಮಾನದಲ್ಲಿ ಇದರ ಆಚರಣೆಯನ್ನು ಮತ್ತಷ್ಟು ವಿಶಾಲ ಮತ್ತು ಮಾನವೀಯಗೊಳಿಸಬಹುದು ಎಂಬ ಅಭಿಪ್ರಾಯದ ಹಿನ್ನೆಲೆಯಲ್ಲಿ……

ವ್ಯಕ್ತಿಯ ಸಾವೇ ಅವರ ಕೊನೆ. ಬದುಕಿದ್ದಾಗ ಎಷ್ಟೇ ಪ್ರಮುಖನಾಗಿದ್ದರೂ ಉಸಿರು ನಿಂತ ನಂತರ ಆತನ ದೇಹ ಪ್ರಕೃತಿಯಲ್ಲಿ ಲೀನವಾಗುತ್ತದೆ. ಅನಂತರ ನಾವು ಮಾಡುವ ಯಾವ ಕ್ರಿಯೆಗಳು ಚಟುವಟಿಕೆಗಳು ಅವನಿಗೆ ಅರಿವಾಗುವುದಿಲ್ಲ. ಅವೆಲ್ಲಾ ಬದುಕಿರುವವರ ಮಾನಸಿಕ ನೆಮ್ಮದಿಗಾಗಿ ಆಚರಿಸಿಕೊಂಡು ಬಂದಿರುವ ಸಂಪ್ರದಾಯಗಳು.

ಹೌದು ನಿಜ, ಸತ್ತ ವ್ಯಕ್ತಿ ಅದರಲ್ಲೂ ನಮ್ಮ ತಾತ ಅಜ್ಜಿ ಅಪ್ಪ ಅಮ್ಮ ಆಗಿದ್ದರೆ ಅವರನ್ನು ಅವರ ಒಳ್ಳೆಯ ಆದರ್ಶ ಗುಣಗಳನ್ನು ನೆನಪಿಸಿಕೊಳ್ಳುವುದು ಮತ್ತು ಅದನ್ನು ಪಾಲಿಸುವುದು ಬದುಕಿರುವ ಮುಂದಿನ ಪೀಳಿಗೆಯವರ ಕರ್ತವ್ಯ. ಅದರಲ್ಲಿ ಎರಡು ಮಾತಿಲ್ಲ.

ಆದರೆ, ಎಂದೋ ಸತ್ತಿರುವ ನಮ್ಮ ಹಿರಿಯರ ಹೆಸರಿನಲ್ಲಿ ಅನವಶ್ಯಕವಾಗಿ ಅವರಿಗೆ ತಲುಪದಿರುವ ಕಾರ್ಯಗಳನ್ನು ಸಂಪ್ರದಾಯವೆಂಬತೆ ಹಣ ಮತ್ತು ಸಮಯ ವ್ಯರ್ಥಮಾಡುವ ಬದಲು, ಜೀವಂತವಿರುವ ನಮ್ಮ ಅಜ್ಜ ಅಜ್ಜಿ ಅಪ್ಪ ಅಮ್ಮ ಚಿಕ್ಕಪ್ಪ ದೊಡ್ಡಮ್ಮ ಮುಂತಾದ ನಮ್ಮ ಅವಲಂಬಿತರ ಬದುಕಿನ ಕೊನೆಯ ಹಂತದಲ್ಲಿರುವ ಹಿರಿಯ ಚೇತನಗಳಿಗೆ ಮಹತ್ವ ನೀಡಿ ವೃದ್ಧಾಪ್ಯದಲ್ಲಿ ಅವರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸುವುದು ಹೆಚ್ಚು ಉಪಯುಕ್ತವಲ್ಲವೇ.

ಅದರಲ್ಲೂ ಇಂದಿನ ಆಧುನಿಕ ಜೀವನದಲ್ಲಿ ನೆಮ್ಮದಿಯ ಆಶ್ರಯಕ್ಕಾಗಿ ಪರಿತಪ್ಪಿಸುತ್ತಿರುವ ನಮ್ಮ ಪೋಷಕರಿಗೆ ನೆರವಾಗುವುದು ಸತ್ತ ವ್ಯಕ್ತಿಗೆ ನಾವು ತೋರಿಸುವ ಗೌರವಕ್ಕಿಂತ ಹೆಚ್ಚು ಮಾನವೀಯವಲ್ಲವೆ.

ಇದ್ದಾಗ ಅವರನ್ನು ಸರಿಯಾಗಿ ನೋಡಿಕೊಳ್ಳದೆ ತುಚ್ಚವಾಗಿ ಕಂಡು ಸತ್ತನಂತರ ಅವರಿಗಾಗಿ ಏನು ಮಾಡಿದರೇನು ಫಲ. ವಾಸ್ತವ ನೆಲೆಯಲ್ಲಿ ಆಗಿಹೋದವರನ್ನು ಮಾನಸಿಕವಾಗಿ ಗೌರವಿಸಿ ಕೃತಜ್ಞತೆ ಅರ್ಪಿಸೋಣ. ಆದರೆ ಅದರ ಜೊತೆಗೆ ನಮ್ಮೆಲ್ಲಾ ತನು ಮನ ಧನಗಳನ್ನು ಭೌತಿಕವಾಗಿ ನಮ್ಮೊಂದಿಗಿರುವ ನಮ್ಮ ಆತ್ಮೀಯ ಹಿರಿಯ ಜೀವಗಳಿಗೆ ಮೀಸಲಿಡೋಣ.

ಈ ಹಬ್ಬವನ್ನು ಹೆಚ್ಚು ಮಾನವೀಯ, ಜೀವಪರಗೊಳಿಸೋಣ. ಇದಕ್ಕಾಗಿ ಹೆಚ್ಚು ಶ್ರಮವೇನು ಪಡಬೇಕಾಗಿಲ್ಲ. ಕೇವಲ ಒಂದು ಸಣ್ಣ ಜೀವಪರ ನಿಲುವಿನಿಂದ ಇದು ಸಾಧ್ಯ.

ಬದಲಾವಣೆ ಇಲ್ಲಿಂದಲೇ, ನಮ್ಮಿಂದಲೇ ಪ್ರಾರಂಭವಾಗಲಿ. ಅನುಭವದಿಂದ ಮೂಡಿದ ಸಾಂಪ್ರದಾಯಿಕ ವೈಚಾರಿಕ ಆಚರಣೆಗಳು ಕಾಲದ ಪರೀಕ್ಷೆಯಲ್ಲಿ ಮತ್ತಷ್ಟು ಹೊಳಪು ಮೂಡಿ ಹೆಚ್ಚು ಪ್ರಯೋಜನಕಾರಿಯಾಗಲಿ ಎಂಬ ಆಶಯವಷ್ಟೆ.

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ, ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ,

ಬರಹ:
ವಿವೇಕಾನಂದ ಎಚ್.ಕೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿವೇಕಾನಂದ ಎಚ್‌ ಕೆ

ಸಾಮಾಜಿಕ ಕಾರ್ಯಕರ್ತ ( ಪ್ರಬುದ್ಧ ಮನಸ್ಸು, ಪ್ರಬುದ್ಧ ಸಮಾಜ,ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ ಮನಸ್ಸುಗಳ ಅಂತರಂಗದ ಚಳವಳಿಯನ್ನು  ಜ್ಞಾನ ಭಿಕ್ಷಾ ಪಾದಯಾತ್ರೆಯ ಮೂಲಕ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ)

Published by
ವಿವೇಕಾನಂದ ಎಚ್‌ ಕೆ

Recent Posts

ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ

ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು  ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…

6 hours ago

ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ – ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…

6 hours ago

ಅಡಿಕೆ ಧಾರಣೆ ಏರಿಕೆಗೆ ಕಾರಣ ಇದೆ | ಈಗ ಅಡಿಕೆ ಮಾರುಕಟ್ಟೆಗೆ ಅನ್ವಯಿಸುವ ಸಿದ್ಧಾಂತಗಳು ಯಾವುದು..?

ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ, ಅಡಿಕೆ ಬೆಳೆ ಕಡಿಮೆ, ಧಾರಣೆ ಏರಿಕೆ…

11 hours ago

2025: ಲಕ್ಷ್ಮೀನಾರಾಯಣ ಯೋಗ | ಈ ರಾಶಿಗೆ ಅದೃಷ್ಟದ ಬಾಗಿಲು ಓಪನ್

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

12 hours ago

ರೈತರ ಪಂಪ್ ಸೆಟ್ ಗಳಿಗೆ ಹಗಲು ಹೊತ್ತಿನಲ್ಲಿಯೇ ವಿದ್ಯುತ್ ನೀಡಲು ತೀರ್ಮಾನ

ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್…

20 hours ago

ಹೀಟ್‌ವೇವ್‌ ಸಂಕಷ್ಟದಲ್ಲಿ ತೆಲಂಗಾಣ-ಹೈದರಾಬಾದ್‌ |

ತೆಲಂಗಾಣ ಹಾಗೂ ಹೈದ್ರಾಬಾದ್‌ ಪ್ರದೇಶದಲ್ಲಿ ಹೀಟ್‌ವೇವ್‌ ಪರಿಸ್ಥಿತಿ ಕಂಡುಬಂದಿದೆ. ಹೀಗಾಗಿ ಹೆಚ್ಚುತ್ತಿರುವ ಉಷ್ಣ…

20 hours ago