ಭಾವೀ ಪತ್ರಕರ್ತರು ಹೇಗಿರಬೇಕು ? | ವಿವೇಕಾನಂದ ಕಾಲೇಜಿನಲ್ಲಿ ‘ಪತ್ರಕರ್ತ ಮೇಷ್ಟ್ರು| ಪವಿತ್ರ ಭಟ್ ಜಿಗಳೆಮನೆ ಸಲಹೆ|

March 26, 2022
10:39 PM

ಸ್ಫರ್ಧಾತ್ಮಕ ಜಗದಲ್ಲಿ ವೇಗದ ಕೆಲಸಕ್ಕೆ ಪ್ರಾಶಸ್ತ್ಯ ಹೆಚ್ಚು. ಉದ್ಯೋಗ ಕ್ಷೇತ್ರದಲ್ಲಿ ಸಮಯಪಾಲನೆ, ಶಿಸ್ತು ಮುಖ್ಯ. ಲೇಖನಗಳಲ್ಲಿ ಉಪಯೋಗಿಸುವ ಬರವಣಿಗೆಗಳು ಆಕರ್ಷಣಿಯವಾಗಿರಬೇಕು ಮತ್ತು ಜನರಿಗೆ ಅರ್ಥವಾಗುವಂತೆ ಇರಬೇಕು. ಅಂತೆಯೇ ಸಾಮಾಜಿಕ ಜಾಲತಾಣದ ಬಳಕೆಯ ಬಗ್ಗೆ ಜ್ಞಾನವಿರಬೇಕು. ವಿಷಯ ವಸ್ತುಗಳ ಅಭಿವೃದ್ಧಿ ಮಾಡುವುದನ್ನು ಕಲಿತುಕೊಳ್ಳಬೇಕು.ಈ ನಿಟ್ಟಿನಲ್ಲಿ ಭಾವಿ ಪತ್ರಕರ್ತರು ಪೂರ್ವತಯಾರಿ ಮಾಡಿಕೊಂಡಿರಬೇಕು ಎಂದು ಪುತ್ತೂರು ವಿವೇಕಾನಂದಕಾಲೇಜಿನ ಹಿರಿಯ ವಿದ್ಯಾರ್ಥಿನಿ ಮತ್ತು ಬೆಂಗಳೂರಿನ ಟೈಮ್ಸ್ ಇಂಟರ್ನೆಟ್‍ ಡಿಜಿಟಲ್‍ನ ಪರ್ತಕರ್ತೆ ಪವಿತ್ರ ಭಟ್ ಜಿಗಳೆಮಣೆ ಹೇಳಿದರು.

Advertisement
Advertisement

ಅವರು ಕಾಲೇಜಿನ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ಆಯೋಜಿಸಲಾದ ‘ಪತ್ರಕರ್ತ ಮೇಷ್ಟ್ರು’ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ,ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಭವಿಷ್ಯ ಶೆಟ್ಟಿ ಮಾತನಾಡಿ, ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕರಾದ ತಾರಾ, ಸೀಮಾ ಪೋನಡ್ಕ, ಭರತ್‍ಕುಮಾರ್ ಕೆ. ಬಿ.ಉಪಸ್ಥಿತರಿದ್ದರು. ದ್ವಿತೀಯ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿ ಜಗದೀಶ ಜೆ ಸ್ವಾಗತಿಸಿ, ವಿದ್ಯಾರ್ಥಿನಿ ಜಯಶ್ರೀ ಆರ್ಯಾಪು ವಂದಿಸಿದರು. ಕಾರ್ಯದರ್ಶಿ ಅರುಣ್‍ ಕಿರಿಮಂಜೇಶ್ವರ ಕಾರ್ಯಕ್ರಮವನ್ನು ನಿರೂಪಿಸಿದರು.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ
May 29, 2025
7:40 AM
by: The Rural Mirror ಸುದ್ದಿಜಾಲ
ಭಾರತ್ ಮುನ್ಸೂಚನಾ ವ್ಯವಸ್ಥೆ | ಭಾರತದಿಂದ ವಿಶ್ವದ ಅತ್ಯಂತ ನಿಖರವಾದ ಹವಾಮಾನ ಮಾದರಿಗೆ ಚಾಲನೆ | ಸಣ್ಣ ಪ್ರಮಾಣದ ಹವಾಮಾನ ಸ್ಥಿತಿಗತಿಗಳ ನಿಖರವಾದ ಮಾಹಿತಿ ಲಭ್ಯ|
May 29, 2025
7:37 AM
by: ದ ರೂರಲ್ ಮಿರರ್.ಕಾಂ
ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ
May 29, 2025
7:22 AM
by: The Rural Mirror ಸುದ್ದಿಜಾಲ
14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ
May 29, 2025
7:12 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group