ಸ್ಫರ್ಧಾತ್ಮಕ ಜಗದಲ್ಲಿ ವೇಗದ ಕೆಲಸಕ್ಕೆ ಪ್ರಾಶಸ್ತ್ಯ ಹೆಚ್ಚು. ಉದ್ಯೋಗ ಕ್ಷೇತ್ರದಲ್ಲಿ ಸಮಯಪಾಲನೆ, ಶಿಸ್ತು ಮುಖ್ಯ. ಲೇಖನಗಳಲ್ಲಿ ಉಪಯೋಗಿಸುವ ಬರವಣಿಗೆಗಳು ಆಕರ್ಷಣಿಯವಾಗಿರಬೇಕು ಮತ್ತು ಜನರಿಗೆ ಅರ್ಥವಾಗುವಂತೆ ಇರಬೇಕು. ಅಂತೆಯೇ ಸಾಮಾಜಿಕ ಜಾಲತಾಣದ ಬಳಕೆಯ ಬಗ್ಗೆ ಜ್ಞಾನವಿರಬೇಕು. ವಿಷಯ ವಸ್ತುಗಳ ಅಭಿವೃದ್ಧಿ ಮಾಡುವುದನ್ನು ಕಲಿತುಕೊಳ್ಳಬೇಕು.ಈ ನಿಟ್ಟಿನಲ್ಲಿ ಭಾವಿ ಪತ್ರಕರ್ತರು ಪೂರ್ವತಯಾರಿ ಮಾಡಿಕೊಂಡಿರಬೇಕು ಎಂದು ಪುತ್ತೂರು ವಿವೇಕಾನಂದಕಾಲೇಜಿನ ಹಿರಿಯ ವಿದ್ಯಾರ್ಥಿನಿ ಮತ್ತು ಬೆಂಗಳೂರಿನ ಟೈಮ್ಸ್ ಇಂಟರ್ನೆಟ್ ಡಿಜಿಟಲ್‍ನ ಪರ್ತಕರ್ತೆ ಪವಿತ್ರ ಭಟ್ ಜಿಗಳೆಮಣೆ ಹೇಳಿದರು.
ಅವರು ಕಾಲೇಜಿನ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ಆಯೋಜಿಸಲಾದ ‘ಪತ್ರಕರ್ತ ಮೇಷ್ಟ್ರು’ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ,ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಭವಿಷ್ಯ ಶೆಟ್ಟಿ ಮಾತನಾಡಿ, ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕರಾದ ತಾರಾ, ಸೀಮಾ ಪೋನಡ್ಕ, ಭರತ್‍ಕುಮಾರ್ ಕೆ. ಬಿ.ಉಪಸ್ಥಿತರಿದ್ದರು. ದ್ವಿತೀಯ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿ ಜಗದೀಶ ಜೆ ಸ್ವಾಗತಿಸಿ, ವಿದ್ಯಾರ್ಥಿನಿ ಜಯಶ್ರೀ ಆರ್ಯಾಪು ವಂದಿಸಿದರು. ಕಾರ್ಯದರ್ಶಿ ಅರುಣ್ ಕಿರಿಮಂಜೇಶ್ವರ ಕಾರ್ಯಕ್ರಮವನ್ನು ನಿರೂಪಿಸಿದರು.
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…
ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…
ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…
ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…
ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…