ಅಪರಾಧಿ ತಪ್ಪಿಸಿಕೊಂಡರು ಪರವಾಗಿಲ್ಲ, ನಿರಪರಾಧಿಗೆ ಶಿಕ್ಷೆಯಾಗಬಾರದು ಅನ್ನೋ ಮಾತಿದೆ. ಆದರೆ ಸೌಜನ್ಯ ಕೇಸ್‌ನಲ್ಲಿ ತನಗೆ ಸಂಬಂಧವೇ ಇಲ್ಲದ ವಿಷಯಕ್ಕೆ ಸಂತೋಷ್ ರಾವ್ ಸುಮಾರು 11 ವರ್ಷಗಳ ಕಾಲ ಮಾನಸಿಕ, ದೈಹಿಕ, ಜೊತೆಗೆ ಜೈಲು ಶಿಕ್ಷೆಯನ್ನು ಅನುಭವಿಸಿದ್ದಾರೆ. ಇಡೀ ಸಮಾಜದಿಂದ ಅವಮಾನಗೊಂಡು ಏಕಾಂತ ಬದುಕನ್ನು ಬದುಕುತ್ತಿದೆ ಸಂತೋಷ್ ರಾವ್ ಕುಟುಂಬ. ನಿರ್ದೂಷಿ ಎಂದು ಜೈಲಿನಿಂದ ಬಿಡುಗಡೆಯಾದರೂ ಇಂದೂ ಕೂಡ ಸಮಾಜ ಅವರನ್ನು ಅನುಮಾನದಿಂದಲೇ ನೋಡುತ್ತಿದೆ.
ಈಗ ಸಂತೋಷ್ ರಾವ್ ಕುಟುಂಬಕ್ಕೆ ಬೇಕಾಗಿದ್ದು ಸಾಂತ್ವನ, ಜೀವನ ಕಟ್ಟಿಕೊಳ್ಳುವ ಧೈರ್ಯ ತುಂಬುವ ಮನಸ್ಸುಗಳು, ಸಹಾಯ ಹಸ್ತ ಚಾಚುವ ಕೈಗಳು. ಇದನ್ನೆಲ್ಲವನ್ನೂ ಎಂದೂ ನಿರೀಕ್ಷಿಸದ ಸಂತೋಷ್ ರಾವ್ ಕುಟುಂಬಕ್ಕೆ ಸ್ವ ಇಚ್ಚೆಯಿಂದ ಒಂದಷ್ಟು ಸಹಾಯ ಮಾಡಿ ಕ್ಷಮೆ ಕೇಳಿ, ಗುರುವಂದನೆ ಸಲ್ಲಿಸುವ ಕೆಲಸವನ್ನು ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿಅವರ ತಂಡ ಭೇಟಿ ಮಾಡಿ ಬಂದಿದೆ.
ಸೌಜನ್ಯಾ ಕೊಲೆ ಪ್ರಕರಣದ ತೀರ್ಪಿನಲ್ಲಿ ನಿರ್ದೋಷಿ ಎಂದು ಬಿಡುಗಡೆಯಾದ ಸಂತೋಷ್ ರಾವ್ ಕುಟುಂಬವನ್ನು ಸೌಜನ್ಯ ನ್ಯಾಯದ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಅವರ ತಂಡ ಭೇಟಿ ಮಾಡಿ ಸಾಂತ್ವನವನ್ನು ಹೇಳಿದ್ದಾರೆ. ಕಾರ್ಕಳ ತಾಲ್ಲೂಕಿನ ಬೈಲೂರಿನ ಸಂತೋಷ್ ರಾವ್ ನಿವಾಸಕ್ಕೆ ಭೇಟಿ ನೀಡಿದ ಮಹೇಶ್ ಶೆಟ್ಟಿ ತಿಮರೋಡಿ, ಇತಿಹಾಸ ಸಂಶೋಧಕ ತಮ್ಮಣ್ಣ ಶೆಟ್ಟಿ, ಸುಧಾಕರ ರಾವ್ ಮತ್ತು ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಅವರ ತಂಡ ಸಂತೋಷ್ ರಾವ್ ಅವರ ತಂದೆ ಸುಧಾಕರ ರಾವ್ ಅವರಿಗೆ ಗುರುವಂದನೆ ಸಲ್ಲಿಸಿದ್ದಾರೆ.
ಇದಲ್ಲದೆ ಸುಧಾಕರ ಅವರಿಗೆ ತಲೆಗೂದಲು ಕ್ಷೌರ ಮಾಡಿಸಿ, ಹೊಸಬಟ್ಟೆ ತೊಡಿಸಿ ಪಾದಪೂಜೆ ಮಾಡಿದ್ದಾರೆ. ಬಳಿಕ ಅವರ ಮನೆಗೆ ಸುಣ್ಣಬಣ್ಣ ಬಳಿಯಲಾಗಿದೆ.ಬಳಿಕ ಮಾತನಾಡಿದ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ,ಸೌಜನ್ಯಾ ಕೊಲೆ ಪ್ರಕರಣದಲ್ಲಿ ಸಂತೋಷ್ ರಾವ್ ಮತ್ತು ಕುಟುಂಬ ಮಾನಸಿಕವಾಗಿ, ದೈಹಿಕವಾಗಿ ನೊಂದುಕೊಂಡಿದೆ. ಸಮಾಜದಿಂದ ದೂರವಿದ್ದು ದಯನೀಯ ಸ್ಥಿತಿಯಲ್ಲಿ ಬದುಕು ಸಾಗಿಸಿದೆ.ಇಂತಹ ಪರಿಸ್ಥಿತಿಯಲ್ಲಿ ಸಮಾಜದ ಪರವಾಗಿ ಸಂತೋಷ್ ರಾವ್ ಕುಟುಂಬದ ಕ್ಷಮೆ ಕೇಳುತ್ತಿದ್ದೇವೆ ಎಂದು ಹೇಳಿದ್ದಾರೆ.
ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…
ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…
ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…
ಕ್ಯಾನ್ಸರ್ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ…
ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ…
ನಾಗರಪಂಚಮಿ, ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯಂದು ಆಚರಿಸಲಾಗುವ ಪವಿತ್ರ ಹಬ್ಬವಾಗಿದೆ.…