ಪ್ರಮುಖ

#GaganyaanMission | ಮತ್ತಷ್ಟು ಸಾಹಸಗಳಿಗೆ ಕೈ ಹಾಕುತ್ತಿರುವ ಇಸ್ರೋ | ಗಗನಯಾನ ಮಿಷನ್‌ನಲ್ಲಿ ಬಾಹ್ಯಾಕಾಶಕ್ಕೆ ಹೋಗಲಿದ್ದಾಳೆ ʼವ್ಯೋಮಿತ್ರ’ ಮಹಿಳಾ ರೋಬೋಟ್‌

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಈ ಪ್ರಪಂಚದಲ್ಲಿ, ಅದರಲ್ಲೂ ನಮ್ಮ ಆಕಾಶಕಾಯದಲ್ಲಿ ಅದೇನೇನು ಕೌತುಕಗಳಿವೆ ಅನ್ನೋದನ್ನು ಈಗಾಗಲೇ ನಮ್ಮ ವಿಜ್ಞಾನಿಗಳು ಕಂಡು ಹಿಡಿದಿದ್ದಾರೆ. ಆದರೆ ಅದೊಂದು ಮುಗಿಯದ ಯೋಜನೆ, ಬಗೆದಷ್ಟು ಮತ್ತಷ್ಟು ವಿಶೇಷಗಳು ಸಿಗುತ್ತಲೇ ಹೋಗುತ್ತದೆ. ವಿಜ್ಞಾನಿಗಳಿಗೆ ಅಲ್ಲಿನ ಕೌತುಕಗಳನ್ನು ಮತ್ತಷ್ಟು ತಿಳಿಯುವ ಉತ್ಸಾಹ. ಇದೀಗ ಭಾರತದ ಮಹತ್ವಾಕಾಂಕ್ಷೆಯ ಗಗನಯಾನ ಮಿಷನ್‌ನಲ್ಲಿ ವ್ಯೋಮಿತ್ರ #Vyommitra ಹೆಸರಿನ ಮಹಿಳಾ ರೋಬೋಟ್‌ #FemaleRobot ಅನ್ನು ಬಾಹ್ಯಾಕಾಶಕ್ಕೆ ಕಳುಹಿಸಲಾಗುತ್ತದೆ.

Advertisement

ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆಯ ರಾಜ್ಯ ಸಚಿವ ಜಿತೇಂದ್ರ ಸಿಂಗ್, ಈ ಬಾಹ್ಯಾಕಾಶ  ಯಾನದ ಮೊದಲ ಪ್ರಯೋಗವನ್ನು ಅಕ್ಟೋಬರ್ ಮೊದಲ ಅಥವಾ ಎರಡನೇ ವಾರದಲ್ಲಿ ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ನಂತರದ ಕಾರ್ಯಾಚರಣೆಗಳಲ್ಲಿ ಮಹಿಳಾ ರೋಬೋಟ್ ‘ವ್ಯೋಮಿತ್ರ’ ಬಾಹ್ಯಾಕಾಶಕ್ಕೆ ಪ್ರಯಾಣಿಸಲಿದೆ ಎಂದು ತಿಳಿಸಿದರು. ಮಹಿಳಾ ರೋಬೋಟ್ ಎಲ್ಲಾ ಮಾನವ ಚಟುವಟಿಕೆಗಳನ್ನು ಅನುಕರಿಸಲಿದೆ. ಈ ಪ್ರಯೋಗ ಯಶಸ್ವಿಯಾದ ಬಳಿಕ ನಾವು ಈ ಯೋಜನೆಯಲ್ಲಿ ಮುಂದುವರಿಯಬಹುದು ಎಂದು ಹೇಳಿದರು. 2019 ರವರೆಗೆ ಮುಚ್ಚಿದ್ದ ಶ್ರೀಹರಿಕೋಟಾದ ಗೇಟ್‌ಗಳನ್ನು ಈಗ ತೆರೆಯಲಾಗಿದೆ. ಈಗ ಮಾಧ್ಯಮಗಳನ್ನು ಮತ್ತು ಶಾಲಾ ಮಕ್ಕಳನ್ನು ಆಹ್ವಾನಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಅವರು ಬಾಹ್ಯಾಕಾಶ ಕ್ಷೇತ್ರವನ್ನು ಎಲ್ಲರಿಗೂ ಈಗ ತೆರೆದಿದ್ದಾರೆ ಎಂದರು.

ಗಗನಯಾನ ಮಾನವನನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಮತ್ತು ಸುರಕ್ಷಿತವಾಗಿ ಭೂಮಿಗೆ ಮರಳಿಸುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ#ISRO ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ನಿಗದಿ ಪ್ರಕಾರ 2024ಕ್ಕೆ ಮೂವರು ಗಗನಯಾನಿಗಳನ್ನು ಇಸ್ರೋ ಬಾಹ್ಯಾಕಾಶಕ್ಕೆ ಕಳುಹಿಸಬೇಕಿತ್ತು. ಆದರೆ ಕೋವಿಡ್‌ನಿಂದಾಗಿ ಈ ಯೋಜನೆ ವಿಳಂಬವಾಗಿದೆ. ಗಗನಯಾನ ಮಿಷನ್‌ನಲ್ಲಿ ಮೂವರು ಗಗನಯಾನಿಗಳನ್ನು ಮೂರು ದಿನ 400 ಕಿ.ಮೀ ಎತ್ತರದ ಕಕ್ಷೆಗೆ ಕಳುಹಿಸಿ ನಂತರ ಸಮುದ್ರದ ನೀರಿನ ಮೇಲೆ ಇಳಿಸಲಾಗುತ್ತದೆ.

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಲ್ಲಿಗೆ ಕೃಷಿ ತರಬೇತಿ ಕಾರ್ಯಾಗಾರ

ಅಜ್ಜಾವರ ಪಂಚಾಯತ್ ಸಭಾಂಗಣದಲ್ಲಿ ಮಲ್ಲಿಗೆ ಕೃಷಿ ತರಬೇತಿ ನಡೆಯಿತು.

7 hours ago

ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣ ಪತ್ತೆ | ಹೆಚ್ಚುತ್ತಿರುವ ಬರ್ಮಾ ಅಡಿಕೆ ಸಾಗಾಟ |

ಮಿಜೋರಾಂನ ಚಂಫೈ ಜಿಲ್ಲೆಯ ಕಾಡಿನಲ್ಲಿ ದಾಸ್ತಾನು ಇರಿಸಿದ್ದ 321 ಚೀಲ ಅಡಿಕೆಯನ್ನು ಅಸ್ಸಾಂ…

9 hours ago

ಯೇನೆಕಲ್ಲು ಬಚ್ಚನಾಯಕ ನಮ್ಮ ಕಾರ್ಣಿಕದ ಆರಾಧ್ಯ ಶಕ್ತಿ

ಕಡಬ ತಾಲೂಕಿನ ಯೇನೆಕಲ್ಲು ಬಚ್ಚನಾಯಕ ದೈವಸ್ಥಾನದಲ್ಲಿ ವಾರ್ಷಿಕ ನೇಮ ನಡೆಯುತ್ತಿದೆ. ಈ ಸಂದರ್ಭಹವ್ಯಾಸಿ…

10 hours ago

2030ರ ವೇಳೆಗೆ 170 ಮಿಲಿಯನ್ ಉದ್ಯೋಗ ಸೃಷ್ಟಿ | ಇಂಧನ ಕ್ಷೇತ್ರದಲ್ಲಿ ಭಾರತ ಮೂರನೇ ಅತಿದೊಡ್ಡ ರಾಷ್ಟ್ರ

ನವೀಕರಿಸಬಹುದಾದ  ಇಂಧನ ಕ್ಷೇತ್ರದಲ್ಲಿ ಭಾರತ ಮೂರನೇ ಅತಿದೊಡ್ಡ ರಾಷ್ಟ್ರವಾಗಿದ್ದು, ಹಸಿರು ಪರಿವರ್ತನೆಯಂತಹ  ಕ್ಷೇತ್ರದಲ್ಲಿ…

15 hours ago

ಹವಾಮಾನ ವರದಿ | 31-03-2025 | ಎ.1 ರಿಂದ ವಿವಿದೆಡೆ ಮಳೆ ಆರಂಭದ ಸಾಧ್ಯತೆ |

ಈಗಿನಂತೆ ಎ.1 ರಿಂದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ…

19 hours ago