ವಕ್ಫ್ ವಿವಾದದ ಹಿನ್ನೆಲೆಯಲ್ಲಿ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಾಂಬಿಕ ಪಾಲ್ ರಾಜ್ಯದಲ್ಲಿ ಸುಮಾರು 500 ಕ್ಕೂ ಹೆಚ್ಚು ರೈತರಿಂದ ಅರ್ಜಿ ಸ್ವೀಕರಿಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಪರಿಶೀಲನೆ ನಡೆಸಿದ ಅವರು, ರೈತರಿಂದ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹಲವು ರೈತರು ಮನವಿ ಸಲ್ಲಿಸಿದ್ದು, ಜಂಟಿ ಸಂಸದೀಯ ಸಮಿತಿ ವಕ್ಫ್ ಮಸೂದೆಯಲ್ಲಿ ಬದಲಾವಣೆ ತರಲು ನಿರ್ಧರಿಸಿದೆ ಎಂದು ಹೇಳಿದರು. ಇದೇ ವೇಳೆ ರಾಜ್ಯ ಸರ್ಕಾರ ಹಾಗೂ ಸಚಿವ ಜಮೀರ್ ಅಹಮದ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅವರು, ಸರ್ಕಾರ ಆರ್‌ಟಿಸಿ ಬದಲಾವಣೆ ಮಾಡುತ್ತಿರುವುದು ಯಾಕೆ ಎಂದು ಪ್ರಶ್ನಿಸಿದರು. ಶೀಘ್ರವೇ ಎಲ್ಲ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಹೇಳಿದರು. ಇದಕ್ಕೂ ಮೊದಲು ಹುಬ್ಬಳ್ಳಿಯಲ್ಲಿ ಜಗದಂಬಿಕಾ ಪಾಲ್ ಅವರನ್ನು ರೈತರು ಹಾಗೂ ಬಿಜೆಪಿ ನಿಯೋಗ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು. ವಿಜಯಪುರ, ಬೀದರ್, ಕಲಬುರಗಿ, ಹುಬ್ಬಳ್ಳಿ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಯ ರೈತರು ವಕ್ಫ್ ವಿವಾದ ಕುರಿತಂತೆ ಪಾಲ್ ಹಾಗೂ ಸಂಸದ ತೇಜಸ್ವಿಸೂರ್ಯ ಅವರಿಗೆ ಪತ್ರ ಬರೆದಿದ್ದರು.
JPC Chairman Jagdambika Pal received over 500 petitions from farmers in Karnataka alleging their lands are being marked as Waqf properties.
15.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ : ಕಾಸರಗೋಡು…
ತೆಂಗಿನ ಕಾಯಿ ಧಾರಣೆ ಈಗ ಮತ್ತೆ 50 ರೂಪಾಯಿಗೆ ಏರಿಕೆಯಾಗಿದೆ.
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಗುಣಮಟ್ಟದ ಹತ್ತಿ ಉತ್ಪನ್ನ ಖರೀದಿಸಲು ಯಾದಗಿರಿ…
ಮಂಡ್ಯ ಜಿಲ್ಲೆಯಲ್ಲಿ ಭತ್ತ, ರಾಗಿ ಖರೀದಿಗೆ ರೈತರ ನೋಂದಣಿ ಕೇಂದ್ರಗಳನ್ನು ಶೀಘ್ರದಲ್ಲಿಯೇ ಆರಂಭಿಸಲಾಗುವುದು…
ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಒದಗಿಸಲು ಗ್ರಾಮಸ್ಥರ…
ಭಾರತೀಯ ದೂರಸಂಪರ್ಕ ಇಲಾಖೆ (BSNL) ಭಾರತದ ಮೊದಲ ಉಪಗ್ರಹದಿಂದ ಸಂಪರ್ಕ ಸಾಧನದ ಸೇವೆಯನ್ನು…