ಕಿರುತೆರೆ, ಹಿರಿತೆರೆಯಲ್ಲಿ ಇತ್ತೀಚಿನ ದಿನಗಳಲ್ಲಿ ಮಕ್ಕಳನ್ನು(Children) ಚಿತ್ರಿಕರಣಕ್ಕೆ ಬಹಳವಾಗಿ ಬಳಸಿಕೊಳ್ಳಲಾಗುತ್ತಿದೆ. ಪೋಷಕರೇ(Parents) ಹೆಚ್ಚಾಗಿ ಮಕ್ಕಳನ್ನು ಧಾರವಾಹಿ(Serial), ರಿಯಾಲಿಟಿ ಶೂ(Reality Show), ಸಿನಿಮಮಾಗಳಲ್ಲಿ(Film) ಕಾಣಿಸುವಂತೆ ಮಾಡುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮಕ್ಕಳ ಬಳಕೆ ಜಾಸ್ತಿಯಾದ ಹಿನ್ನೆಲೆಯಲ್ಲಿ ಇನ್ಮುಂದೆ ಮಕ್ಕಳನ್ನ ಚಿತ್ರೀಕರಣಕ್ಕೆ ಬಳಸುವ ಸಂಬಂಧ ಕಾರ್ಮಿಕ ಇಲಾಖೆ (Department of Labor) ಕೆಲವೊಂದು ಷರತ್ತುಗಳನ್ನು ವಿಧಿಸಿದೆ. ಷರತ್ತು ಸಂಬಂಧ ಕಾರ್ಮಿಕ ಇಲಾಖೆಯಿಂದ ಫಿಲಂ ಚೇಂಬರ್ಗೆ (Film Chamber) ಸುತ್ತೋಲೆಯನ್ನು ರವಾನಿಸಲಾಗಿದೆ. ಇನ್ಮುಂದೆ ಮಕ್ಕಳನ್ನು ಇಟ್ಕೊಂಡು 5 ಗಂಟೆಗೂ ಹೆಚ್ಚು ಕಾಲ ಚಿತ್ರಿಕರಣ (Shooting) ಮಾಡುವಂತಿಲ್ಲ.
ಚಿತ್ರೀಕರಣ ವೇಳೆ ಬಾಲನಟರು (Child Artist) ಇರುವಾಗ ವಿಶ್ರಾಂತಿ ಇಲ್ಲದೇ ಮೂರು ಗಂಟೆಗೂ ಅಧಿಕ ಕಾಲ ನಿರಂತರವಾಗಿ ಶೂಟಿಂಗ್ ಮಾಡುವಂತಿಲ್ಲ. ಶೂಟಿಂಗ್ ಸ್ಪಾಟ್ ನಲ್ಲಿ ಮಕ್ಕಳ ದೈಹಿಕ ಮತ್ತು ಮಾನಸಿಕ ಅರೋಗ್ಯಕ್ಕೆ ಪೂರಕವಾದ ಸೌಲಭ್ಯ ಇರಬೇಕು. ಶೂಟಿಂಗ್ ಸಮಯದಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಬೇಕು ಎಂಬಿತ್ಯಾದಿ ಷರತ್ತಗಳನ್ನು ವಿಧಿಸಲಾಗಿದೆ. ನಟನೆ ಮಾಡುವ ಮಗು ನಿರಂತರವಾಗಿ 27 ದಿನ ಶೂಟಿಂಗ್ ಕೆಲಸಕ್ಕೆ ಬಳಸಬಾರದು. ಶೈಕ್ಷಣಿಕ ಹಕ್ಕು ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳಿಗೆ ರಕ್ಷಣೆ ನೀಡಬೇಕು. ಶೂಟಿಂಗ್ ಸ್ಥಳದಲ್ಲಿ ಎಚ್ಚರಿಕೆ ವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.
ಸುತ್ತೋಲೆಯಲ್ಲಿರುವ ಇತರೆ ನಿಯಮಗಳು:
*ಯಾವುದೇ ವಾಣಿಜ್ಯ ಪರ ಕಾರ್ಯಕ್ರಮದಲ್ಲಿ ಮಗು ಭಾಗವಹಿಸುದಿದ್ದರೆ ಆ ಚಟುವಟಿಕೆ ನಡೆಯುವ ಪ್ರದೇಶದ ಜಿಲ್ಲಾ ದಂಡಾಧಿಕಾರಿಗಳ ಪೂರ್ವಾನುಮತಿಯನ್ನು ಪಡೆದುಕೊಳ್ಳುವುದು. ಈ ವೇಳೆ ಮಕ್ಕಳ ಪಟ್ಟಿ ಮತ್ತು ಪೋಷಕರ ಒಪ್ಪಿಗೆ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು.
*ಚಿತ್ರೀಕರಣ ಸಮಯದಲ್ಲಿ ಮಕ್ಕಳ ದುರುಪಯೋಗ ಪ್ರಕರಣ, ನಿರ್ಲಕ್ಷ್ಯ ಅಥವಾ ಶೋಷಣೆ ನಡೆಯದಂತೆ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಂಡಿರಬೇಕು.
*ಶಿಕ್ಷಣದ ಹಕ್ಕು ಸಂರಕ್ಷಣೆ, ಲೈಂಗಿಕ ಅಪರಾಧಗಳಿಂದ ರಕ್ಷಣೆ ಒಳಗೊಂಡಂತೆ ಮಕ್ಕಳ ರಕ್ಷಣೆ ಕುರಿತಾಗಿ ಕಾಲ ಕಾಲಕ್ಕೆ ಜಾರಿಯಲ್ಲಿರೋ ಎಲ್ಲಾ ಕಾನೂನುಗಳ ಪಾಲನೆ ಮಾಡುವುದು.
*ಮಗು ಶಾಲೆಯ ಪಾಠ ಪ್ರವಚನಗಳಿಗೆ ಗೈರಾಗದಂತೆ ಶಿಕ್ಷಣದಲ್ಲಿ ನಿರಂತರವಾಗಿ ಮುಂದವರಿಯಲು ಅಗತ್ಯವಿರೋ ಎಲ್ಲಾ ಸೌಲಭ್ಯಗಳನ್ನು ಒದಗಿಸುವುದು.
*ಮಗುವಿನ ರಕ್ಷಣೆ, ಪೋಷಣೆ ಮತ್ತು ಹಿತಾಸಕ್ತಿಯನ್ನು ಕಾಪಾಡಲು ನಿರ್ಮಾಣ ಅಥವಾ ಕಾರ್ಯಕ್ರಮದಲ್ಲಿ ತೊಡಗಿರುವ ಪ್ರತಿ 5 ಮಕ್ಕಳಿಗೆ ಒಬ್ಬರಂತೆ ಜವಾಬ್ದಾರಿ ವ್ಯಕ್ತಿಯನ್ನು ನೇಮಿಸುವುದು.
*ಕಾರ್ಯಕ್ರಮದಿಂದ ಬರುವ ಒಟ್ಟು ಆದಾಯದ ಕನಿಷ್ಠ ಶೇ.20ರಷ್ಟನ್ನು ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಮಗುವಿನ ಹೆಸರಿನಲ್ಲಿ ನಿಶ್ಚಿತವ ಠೇವಣಿಯ ಖಾತೆ ತೆರೆದು ಇಡಬೇಕು. ಅದನ್ನು ಮಗು ಪ್ರಾಯಸ್ಥನಾದಾಗ ಪಡೆಯಲು ಅವಕಾಶ ಕಲ್ಪಿಸುವುದು.
*ಯಾವುದೇ ಮಗುವಿನ ಒಪ್ಪಿಗೆ ಮತ್ತು ಇಚ್ಛೆಗೆ ವಿರುದ್ಧವಾಗಿ ಯಾವುದೇ ಧ್ವನಿ, ದೃಶ್ಯ ಮತ್ತು ಕ್ರೀಡಾ ಚಟುವಟಿಕೆ ಅನೌಪಾಚಾರಿಕ ಮನರಂಜನಾ ಚಟುವಟಿಕೆ ಒಳಗೊಂಡಂತೆ ಅವುಗಳಲ್ಲಿ ಭಾಗವಹಿಸುವಂತೆ ಮಾಡಬಾರದು.
– ಅಂತರ್ಜಾಲ ಮಾಹಿತಿ
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…