ಕೇರಳದಿಂದ ಅಪಾಯಕಾರಿ ರಾಸಾಯನಿಕ ತ್ಯಾಜ್ಯವನ್ನು ಟ್ಯಾಂಕರ್ ಗಳಲ್ಲಿ ತಂದು ಮಂಗಳೂರಿನ ಚರಂಡಿ ಹಾಗೂ ರಾಜಕಾಲುವೆಗಳಲ್ಲಿ ವಿಲೇವಾರಿ ಮಾಡುತ್ತಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ರೀತಿ ಅಕ್ರಮ ಕೃತ್ಯಗಳಲ್ಲಿ ತೊಡಗಿರುವವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಪರಿಸರ ಸಂರಕ್ಷಣೆ ಹಾಗೂ ಜಲ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಅರಣ್ಯ ಹಾಗೂ ಪರಿಸರ ಸಚಿವ ಈಶ್ವರ್ ಖಂಡ್ರೆ ಆದೇಶಿಸಿದ್ದಾರೆ. ದ್ರವ ತ್ಯಾಜ್ಯವನ್ನು ಬತ್ತಿಹೋಗಿರುವ ಯಾವುದೇ ಜಲಮೂಲಕ್ಕೆ ಹರಿಸುವುದು ಕಾನೂನು ಪ್ರಕಾರ ಅಪರಾಧವಾಗಿರುತ್ತದೆ. ರಾಜ್ಯ ಸರ್ಕಾರ ಪ್ರಕೃತಿ, ಪರಸರ ಸಂರಕ್ಷಣೆಗೆ ಕಟಿಬದ್ಧವಾಗಿದ್ದು, ಪರಿಸರ ಮಾಲಿನ್ಯವನ್ನು ಉಂಟು ಮಾಡುವವರ ವಿರುದ್ಧ ಜಿಲ್ಲಾಡಳಿತ ಸ್ಥಳೀಯ ಸಂಸ್ಥೆಗಳು ಹಾಗೂ ಪೊಲೀಸರ ಮೂಲಕವೂ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel