ಕೇರಳದಿಂದ ಅಪಾಯಕಾರಿ ತ್ಯಾಜ್ಯ ವಿಲೇವಾರಿ | ಅತ್ಯಂತ ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ

February 17, 2025
9:07 PM

ಕೇರಳದಿಂದ ಅಪಾಯಕಾರಿ  ರಾಸಾಯನಿಕ ತ್ಯಾಜ್ಯವನ್ನು  ಟ್ಯಾಂಕರ್ ಗಳಲ್ಲಿ ತಂದು ಮಂಗಳೂರಿನ ಚರಂಡಿ ಹಾಗೂ ರಾಜಕಾಲುವೆಗಳಲ್ಲಿ ವಿಲೇವಾರಿ  ಮಾಡುತ್ತಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ರೀತಿ ಅಕ್ರಮ ಕೃತ್ಯಗಳಲ್ಲಿ ತೊಡಗಿರುವವರನ್ನು ಪತ್ತೆ ಹಚ್ಚಿ  ಅವರ ವಿರುದ್ಧ ಪರಿಸರ ಸಂರಕ್ಷಣೆ ಹಾಗೂ ಜಲ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ  ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಅರಣ್ಯ ಹಾಗೂ ಪರಿಸರ ಸಚಿವ  ಈಶ್ವರ್ ಖಂಡ್ರೆ ಆದೇಶಿಸಿದ್ದಾರೆ. ದ್ರವ ತ್ಯಾಜ್ಯವನ್ನು ಬತ್ತಿಹೋಗಿರುವ ಯಾವುದೇ ಜಲಮೂಲಕ್ಕೆ ಹರಿಸುವುದು  ಕಾನೂನು ಪ್ರಕಾರ ಅಪರಾಧವಾಗಿರುತ್ತದೆ. ರಾಜ್ಯ ಸರ್ಕಾರ ಪ್ರಕೃತಿ, ಪರಸರ ಸಂರಕ್ಷಣೆಗೆ  ಕಟಿಬದ್ಧವಾಗಿದ್ದು, ಪರಿಸರ ಮಾಲಿನ್ಯವನ್ನು ಉಂಟು ಮಾಡುವವರ ವಿರುದ್ಧ ಜಿಲ್ಲಾಡಳಿತ ಸ್ಥಳೀಯ ಸಂಸ್ಥೆಗಳು ಹಾಗೂ ಪೊಲೀಸರ ಮೂಲಕವೂ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ
September 2, 2026
2:30 PM
by: ಸಾಯಿಶೇಖರ್ ಕರಿಕಳ
ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ
E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror