ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

April 3, 2026
8:00 AM
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ತ್ಯಾಜ್ಯ ನಿರ್ವಹಣೆ ಮತ್ತು ಸ್ವಚ್ಛತೆಗೆ ಕಠಿಣ ಕ್ರಮ ಆರಂಭವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಲು ಜಿಲ್ಲಾ ಪಂಚಾಯತ್ ಮುಂದಾಗಿದೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಡೆ ವಿನಾಯಕ ಕಾರ್ಭಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ವೀಡಿಯೋ ಸಭೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ.

ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆ ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ತ್ಯಾಜ್ಯ ಎಸೆಯುವ ಮತ್ತು ಸುಡುವ ಪ್ರಕರಣಗಳನ್ನು ಗುರುತಿಸಿ ತಕ್ಷಣ ದಂಡ ವಿಧಿಸಬೇಕು. ದಂಡ ಪಾವತಿಸದಿದ್ದರೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಿಸಲು ಸೂಚನೆ ನೀಡಲಾಗಿದೆ.

ಗಳ 1ನೇ ಮತ್ತು 3ನೇ ಶನಿವಾರ ‘ಸ್ವಚ್ಛ ಶನಿವಾರ’ ಕಾರ್ಯಕ್ರಮದಡಿ ಎಲ್ಲಾ ಗ್ರಾಮ ಪಂಚಾಯತ್‌ಗಳು ತಮ್ಮ ವ್ಯಾಪ್ತಿಯ ರಸ್ತೆ ಇಕ್ಕೆಲಗಳನ್ನು ಸ್ವಚ್ಛಗೊಳಿಸಬೇಕು ಎಂದು ಸೂಚಿಸಲಾಗಿದೆ.

 63 ಗ್ರಾಮ ಪಂಚಾಯತ್‌ಗಳಲ್ಲಿ ತ್ಯಾಜ್ಯ ಘಟಕ ನಿರ್ಮಾಣ : ಸ್ವಚ್ಛ ಸಂಕೀರ್ಣ ಇಲ್ಲದ 63 ಗ್ರಾಮ ಪಂಚಾಯತ್‌ಗಳಲ್ಲಿ ಕನಿಷ್ಠ 1000 ಚದರ ಅಡಿ ವಿಸ್ತೀರ್ಣದ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣಕ್ಕೆ ಕ್ರಿಯಾಯೋಜನೆ ತಯಾರಿಸಲು ಸೂಚನೆ ನೀಡಲಾಗಿದೆ. ಇದಕ್ಕಾಗಿ ತಾಲೂಕು ಪಂಚಾಯತ್ ಅನಿಬರ್ಂಧಿತ ನಿಧಿ ಹಾಗೂ ಗ್ರಾಮ ಪಂಚಾಯತ್ ಅನುದಾನ ಬಳಸಲು ಸೂಚಿಸಲಾಗಿದೆ.

92 ಪಂಚಾಯತ್‌ಗಳಲ್ಲಿ ತ್ಯಾಜ್ಯ ನಿರ್ವಹಣಾ ಯೋಜನೆ:  ಮೊದಲ ಹಂತದಲ್ಲಿ 92 ಗ್ರಾಮ ಪಂಚಾಯತ್‌ಗಳನ್ನು ಗುರುತಿಸಲಾಗಿದ್ದು, ಅವುಗಳಲ್ಲಿ 48 ಪಂಚಾಯತ್‌ಗಳು ತಕ್ಷಣವೇ ತ್ಯಾಜ್ಯ ನಿರ್ವಹಣಾ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಬೇಕು ಎಂದು ಆದೇಶಿಸಲಾಗಿದೆ.

ಸಿಂಗಲ್ ಯೂಸ್ ಪ್ಲಾಸ್ಟಿಕ್ ಮೇಲೆ ಕಠಿಣ ಕ್ರಮ :  ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಲು,  ತಯಾರಿಕೆ, ಸಂಗ್ರಹಣೆ, ಮಾರಾಟ, ವಿತರಣೆ ಮೇಲೆ ದಾಳಿ , ನಿಯಮ ಉಲ್ಲಂಘನೆ ಮಾಡಿದವರಿಗೆ ದಂಡ,  ಪರ್ಯಾಯ ವಸ್ತುಗಳ ಬಳಕೆ ಉತ್ತೇಜನೆ, ಸಾರ್ವಜನಿಕರಲ್ಲಿ ಜಾಗೃತಿ ಅಭಿಯಾನ ನಡೆಸಲಾಗುತ್ತಿದೆ.  ತಾಲೂಕು ಅಧಿಕಾರಿಗಳು ದಂಡ ಸಂಗ್ರಹಣೆಗೆ ಗುರಿ ನಿಗದಿಪಡಿಸಬೇಕು ಎಂದು ಸೂಚಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಸಭೆಯಲ್ಲಿ ಉಪಕಾರ್ಯದರ್ಶಿ ಜಯಲಕ್ಷ್ಮೀ ರಾಯಕೋಡ್, ಯೋಜನಾ ಅಧಿಕಾರಿ ಇ. ಜಯರಾಮ್, ಪರಿಸರ ಅಧಿಕಾರಿ ಮಹೇಶ್ವರಿ ಸಿಂಗ್, ಸ್ವಚ್ಛ ಭಾರತ್ ಮಿಷನ್ ಜಿಲ್ಲಾ ಸಮಾಲೋಚಕರು ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಿದರು.

Dakshina Kannada Zilla Panchayat has issued strict instructions against littering and waste burning in rural areas. Offenders will face fines, and failure to pay may lead to FIR registration. The district is also strengthening waste management systems and enforcing a ban on single-use plastics.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ
July 26, 2026
3:04 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ
July 26, 2026
2:49 PM
by: ಸಾಯಿಶೇಖರ್ ಕರಿಕಳ
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror