ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಲು ಜಿಲ್ಲಾ ಪಂಚಾಯತ್ ಮುಂದಾಗಿದೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಡೆ ವಿನಾಯಕ ಕಾರ್ಭಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ವೀಡಿಯೋ ಸಭೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ.
ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆ ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ತ್ಯಾಜ್ಯ ಎಸೆಯುವ ಮತ್ತು ಸುಡುವ ಪ್ರಕರಣಗಳನ್ನು ಗುರುತಿಸಿ ತಕ್ಷಣ ದಂಡ ವಿಧಿಸಬೇಕು. ದಂಡ ಪಾವತಿಸದಿದ್ದರೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಿಸಲು ಸೂಚನೆ ನೀಡಲಾಗಿದೆ.
ಗಳ 1ನೇ ಮತ್ತು 3ನೇ ಶನಿವಾರ ‘ಸ್ವಚ್ಛ ಶನಿವಾರ’ ಕಾರ್ಯಕ್ರಮದಡಿ ಎಲ್ಲಾ ಗ್ರಾಮ ಪಂಚಾಯತ್‌ಗಳು ತಮ್ಮ ವ್ಯಾಪ್ತಿಯ ರಸ್ತೆ ಇಕ್ಕೆಲಗಳನ್ನು ಸ್ವಚ್ಛಗೊಳಿಸಬೇಕು ಎಂದು ಸೂಚಿಸಲಾಗಿದೆ.
63 ಗ್ರಾಮ ಪಂಚಾಯತ್‌ಗಳಲ್ಲಿ ತ್ಯಾಜ್ಯ ಘಟಕ ನಿರ್ಮಾಣ : ಸ್ವಚ್ಛ ಸಂಕೀರ್ಣ ಇಲ್ಲದ 63 ಗ್ರಾಮ ಪಂಚಾಯತ್‌ಗಳಲ್ಲಿ ಕನಿಷ್ಠ 1000 ಚದರ ಅಡಿ ವಿಸ್ತೀರ್ಣದ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣಕ್ಕೆ ಕ್ರಿಯಾಯೋಜನೆ ತಯಾರಿಸಲು ಸೂಚನೆ ನೀಡಲಾಗಿದೆ. ಇದಕ್ಕಾಗಿ ತಾಲೂಕು ಪಂಚಾಯತ್ ಅನಿಬರ್ಂಧಿತ ನಿಧಿ ಹಾಗೂ ಗ್ರಾಮ ಪಂಚಾಯತ್ ಅನುದಾನ ಬಳಸಲು ಸೂಚಿಸಲಾಗಿದೆ.
92 ಪಂಚಾಯತ್‌ಗಳಲ್ಲಿ ತ್ಯಾಜ್ಯ ನಿರ್ವಹಣಾ ಯೋಜನೆ: ಮೊದಲ ಹಂತದಲ್ಲಿ 92 ಗ್ರಾಮ ಪಂಚಾಯತ್‌ಗಳನ್ನು ಗುರುತಿಸಲಾಗಿದ್ದು, ಅವುಗಳಲ್ಲಿ 48 ಪಂಚಾಯತ್‌ಗಳು ತಕ್ಷಣವೇ ತ್ಯಾಜ್ಯ ನಿರ್ವಹಣಾ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಬೇಕು ಎಂದು ಆದೇಶಿಸಲಾಗಿದೆ.
ಸಿಂಗಲ್ ಯೂಸ್ ಪ್ಲಾಸ್ಟಿಕ್ ಮೇಲೆ ಕಠಿಣ ಕ್ರಮ : ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಲು, ತಯಾರಿಕೆ, ಸಂಗ್ರಹಣೆ, ಮಾರಾಟ, ವಿತರಣೆ ಮೇಲೆ ದಾಳಿ , ನಿಯಮ ಉಲ್ಲಂಘನೆ ಮಾಡಿದವರಿಗೆ ದಂಡ, ಪರ್ಯಾಯ ವಸ್ತುಗಳ ಬಳಕೆ ಉತ್ತೇಜನೆ, ಸಾರ್ವಜನಿಕರಲ್ಲಿ ಜಾಗೃತಿ ಅಭಿಯಾನ ನಡೆಸಲಾಗುತ್ತಿದೆ. ತಾಲೂಕು ಅಧಿಕಾರಿಗಳು ದಂಡ ಸಂಗ್ರಹಣೆಗೆ ಗುರಿ ನಿಗದಿಪಡಿಸಬೇಕು ಎಂದು ಸೂಚಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಸಭೆಯಲ್ಲಿ ಉಪಕಾರ್ಯದರ್ಶಿ ಜಯಲಕ್ಷ್ಮೀ ರಾಯಕೋಡ್, ಯೋಜನಾ ಅಧಿಕಾರಿ ಇ. ಜಯರಾಮ್, ಪರಿಸರ ಅಧಿಕಾರಿ ಮಹೇಶ್ವರಿ ಸಿಂಗ್, ಸ್ವಚ್ಛ ಭಾರತ್ ಮಿಷನ್ ಜಿಲ್ಲಾ ಸಮಾಲೋಚಕರು ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಿದರು.
Dakshina Kannada Zilla Panchayat has issued strict instructions against littering and waste burning in rural areas. Offenders will face fines, and failure to pay may lead to FIR registration. The district is also strengthening waste management systems and enforcing a ban on single-use plastics.
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…