ನಿರ್ಮಲ ತುಂಗಾಭದ್ರಾ ಅಭಿಯಾನ- ಬೃಹತ್ ಜಲಜಾಗೃತಿ ಪಾದಯಾತ್ರೆಯ ಭಾಗವಾಗಿ ಶಿವಮೊಗ್ಗ ನಗರದಲ್ಲಿ ತುಂಗಾ ಆರತಿ ಸೇರಿದಂತೆ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶಾಸಕ ಎಸ್.ಎನ್.ಚೆನ್ನಬಸಪ್ಪ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ತುಂಗಾ ಹಾಗೂ ಭದ್ರಾ ನದಿಯ ಪಾತ್ರದ ಜನರಿಗೆ ಜಲಮಾಲಿನ್ಯವಾಗುತ್ತಿರುವ ಬಗ್ಗೆ ಮಾಹಿತಿ ಹಾಗೂ ನದಿಯ ಸ್ವಚ್ಚತೆ ಕುರಿತು ಜಾಗೃತಿ ಮೂಡಿಸಲು ನಿರ್ಮಲ ತುಂಗಾಭದ್ರಾ ಅಭಿಯಾನ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ನಿರ್ಮಲ ತುಂಗಾಭದ್ರಾ ಅಭಿಯಾನದ ಭಾಗವಾಗಿ ನಾಳೆ ಸಂಜೆ ತುಂಗಾ ಆರತಿ ಕಾರ್ಯಕ್ರಮ ಆಯೋಜಿಸಲಾಗಿದೆ. ತುಮಕೂರು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದು, ಸಚಿವ ಮಧು ಬಂಗಾರಪ್ಪ, ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಪ್ರಮುಖರು ಭಾಗಿಯಾಗಲಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel