Advertisement
MIRROR FOCUS

ಶಾಲೆಗಳಲ್ಲಿ ‘ವಾಟರ್ ಬೆಲ್’ ಕಡ್ಡಾಯ | ಮಕ್ಕಳಿಗೆ ಪ್ರತಿ ಗಂಟೆ ನೀರು ಕುಡಿಯುವ ಜ್ಞಾಪನೆ

Share

ಮಕ್ಕಳ ಉತ್ತಮ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳಲ್ಲಿ ಪ್ರತಿ ಗಂಟೆಗೆ ‘ನೀರಿನ ಗಂಟೆ’ ಅಥವಾ ‘ವಾಟರ್ ಬೆಲ್’ ಬಾರಿಸುವುದನ್ನು ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಇಲಾಖೆಯ ‘ಪಿ.ಎಂ ಪೋಷಣೆ ಶಕ್ತಿ ನಿರ್ಮಾಣ್’ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿ ಸುಮಾರು ಮೂರೂವರೆ ವರ್ಷಗಳ ಹಿಂದಿನಿಂದಲೇ ಜಾರಿಯಲ್ಲಿರುವ ಈ ಯೋಜನೆ, ಈಗ ರಾಜ್ಯದ ಎಲ್ಲ ಶಾಲೆಗಳಿಗೂ ವಿಸ್ತರಣೆಗೊಂಡಿದೆ. ಗಂಗಾವತಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ‘ವಾಟರ್ ಬೆಲ್’ ಪರಿಕಲ್ಪನೆ ಯಶಸ್ವಿಯಾಗಿ ಜಾರಿಯಲ್ಲಿದೆ.

ಈ ಶಾಲೆಯಲ್ಲಿ ಒಂದರಿಂದ ಐದನೇ ತರಗತಿವರೆಗೆ ಓದುತ್ತಿರುವ ಮಕ್ಕಳಿಗೆ ನೀರಿನ ಬಾಟಲಿಗಳನ್ನು ನೀಡಲಾಗಿದ್ದು, ಪ್ರತಿತಾಸಿಗೂ ಒಂದು ಸಲ ಬೆಲ್ ಬಾರಿಸಲಾಗುತ್ತದೆ. ಇದರ ಮೂಲಕ ಮಕ್ಕಳು ನಿಯಮಿತವಾಗಿ ನೀರು ಕುಡಿಯುವ ಅಭ್ಯಾಸ ಬೆಳೆಸಿಕೊಳ್ಳುತ್ತಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಜಿಲ್ಲೆಯ ಮಾದರಿಯನ್ನು ಅನುಸರಿಸಿ ರಾಜ್ಯದ ಸುಮಾರು 120 ಆಶ್ರಮ ಶಾಲೆಗಳಲ್ಲಿ ‘ವಾಟರ್ ಬೆಲ್’ ಯೋಜನೆಯನ್ನು ಜಾರಿಗೊಳಿಸುವಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮೊದಲೇ ಆದೇಶಿಸಿತ್ತು. ಇದೀಗ ಈ ಆದೇಶ ರಾಜ್ಯದ ಎಲ್ಲ ಶಾಲೆಗಳಿಗೂ ಅನ್ವಯವಾಗಿದೆ.

ತಜ್ಞರ ಅಭಿಪ್ರಾಯದಂತೆ, ಮಕ್ಕಳಲ್ಲಿ ದೇಹದ ನೀರಿನ ಕೊರತೆ (ಡಿಹೈಡ್ರೇಶನ್) ತಪ್ಪಿಸಲು ಮತ್ತು ಏಕಾಗ್ರತೆ ಹೆಚ್ಚಿಸಲು ನಿಯಮಿತವಾಗಿ ನೀರು ಕುಡಿಯುವ ಅಭ್ಯಾಸ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ‘ವಾಟರ್ ಬೆಲ್’ ಯೋಜನೆ ಮಕ್ಕಳ ಆರೋಗ್ಯ ಕಾಪಾಡುವತ್ತ ಮಹತ್ವದ ಹೆಜ್ಜೆಯಾಗಿದೆ.

ಇದನ್ನೂ ಓದಿ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

9 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

10 hours ago

ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ

ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…

10 hours ago

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…

10 hours ago

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ

2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…

1 day ago

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…

1 day ago