ರಾಜ್ಯದಲ್ಲಿ ಮುಂಗಾರು ವಿಳಂಭವಾಗಿ ಬಂದ ಕಾರಣ ರಾಜ್ಯದ ಅಣೆಕಟ್ಟುಗಳು ನೀರು ಖಾಲಿಯಾಗಿ ಬಣಗುಟ್ಟುತ್ತಿದ್ದವು. ಆದರೆ ಕಳೆದ ನಾಲ್ಕು ದಿನಗಳಿಂದ ಮುಂಗಾರು ಬಿರುಸುಗೊಂಡ ಕಾರಣ ಡ್ಯಾಂಗಳಲ್ಲಿ ನೀರಿನ ಮಟ್ಟ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರಿಂದ ರಾಜ್ಯದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
Advertisement
ಕೆಲ ದಿನಗಳ ಹಿಂದೆ ಬಣಗುತ್ತಿದ್ದ ಕೆಆರ್‌ಎಸ್ ಡ್ಯಾಂಗೆ #KRSDam ಉತ್ತಮ ಮಳೆಯಿಂದಾಗಿ ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ #CauveryBasin ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಕಳೆದ 12 ಗಂಟೆಗಳ ಅವಧಿಯಲ್ಲಿ ಕೆಆರ್‌ಎಸ್ ಡ್ಯಾಂ 3 ಅಡಿ ಭರ್ತಿಯಾಗಿದ್ದು, ನೀರಿನ ಮಟ್ಟ 95 ಅಡಿಗೆ ಏರಿಕೆಯಾಗಿದೆ. ಅಲ್ಲದೇ ಕಳೆದ 12 ಗಂಟೆಗಳ ಅವಧಿಯಲ್ಲಿ 2 ಟಿಎಂಸಿ ನೀರು ಹರಿದು ಬಂದಿದ್ದು, 19.139 ಟಿಎಂಸಿಯಷ್ಟು ನೀರು ಶೇಖರಣೆಯಾಗಿದೆ. ಇನ್ನೂ ಡ್ಯಾಂನ ಒಳಹರಿವಿನ ಪ್ರಮಾಣದಲ್ಲೂ ಭಾರೀ ಏರಿಕೆ ಕಂಡಿದೆ. ಸದ್ಯ ಡ್ಯಾಂಗೆ 29,552 ಕ್ಯೂಸೆಕ್ ನೀರು ಒಳಹರಿವಿದ್ದು, ಹೊರಹರಿವು 5,297 ಕ್ಯೂಸೆಕ್ ನಷ್ಟಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement