15 ದಿನಗಳಿಗೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ – ಜಿ. ಪಂ ಸಿಇಒ ಸೂಚನೆ 

August 13, 2025
8:04 PM

ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ  ತಪಾಸಣೆ ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ  ನರ್ವಾಡೆ ವಿನಾಯಕ್ ಕಾರ್ಬಾರಿ   ಸೂಚಿಸಿದ್ದಾರೆ.

ಅವರು ಬುಧವಾರ  ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿರುವ ಪ್ರತಿ ಅಂಗನವಾಡಿ ಮತ್ತು ಶಾಲೆಗಳ ಕುಡಿಯುವ ನೀರಿನ ಘಟಕವನ್ನು ಆದ್ಯತೆಯಲ್ಲಿ ತಪಾಸಣೆ ನಡೆಸಬೇಕು.  ಮಹಿಳಾ ಮತ್ತು ಮಕ್ಕಳ ಇಲಾಖೆ ಉಪ ನಿರ್ದೇಶಕರು ಹಾಗೂ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು  ಇದರ ಉಸ್ತುವಾರಿ ವಹಿಸಬೇಕು. ಅದೇ ರೀತಿ ಅಂಗನವಾಡಿ  ಮತ್ತು ಶಾಲೆಗಳ ಕುಡಿಯುವ ನೀರಿನ ಟ್ಯಾಂಕ್‍ಗಳನ್ನು ಪ್ರತಿ ಮೂರು ತಿಂಗಳಿಗೊಮ್ಮೆ ಸ್ವಚ್ಛಗೊಳಿಸಬೇಕು. ಇದಕ್ಕಾಗಿ ಗ್ರಾಮ ಪಂಚಾಯತ್‍ಗಳ ನೀರು ಗಂಟಿಗಳನ್ನು  (ವಾಟರ್ ಮ್ಯಾನ್) ಬಳಸಿಕೊಳ್ಳುವಂತೆ ಸೂಚಿಸಿದರು. ಈ ಸಂಬಂಧ ಜಿಪಿಎಸ್ ಫೋಟೋ ತೆಗೆದು ಪ್ರತಿ ಶಾಲೆಯಲ್ಲಿ ಇಟ್ಟುಕೊಂಡು ತಪಾಸಣೆ ವೇಳೆ ಪರಿಶೀಲಿಸಬೇಕು ಎಂದು ಅವರು ನಿರ್ದೇಶಿಸಿದರು.
ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರಿನ ಇಲಾಖೆ ಕಾರ್ಯಪಾಲಕ ಅಭಿಯಂತರ  ಜೈಪ್ರಕಾಶ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ತಿಮ್ಮಯ್ಯ, ಜಂಟಿ ಕೃಷಿ ನಿರ್ದೇಶಕ ಹೊನ್ನಪ್ಪ ಗೌಡ, ಸಣ್ಣ ನೀರಾವರಿ ಇಲಾಖೆ  ಎಇಇ ತಾಜುದ್ದೀನ್  ಉಬೈದ್ ಮತ್ತಿತರರು ಇದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror