ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ ಸೂಚಿಸಿದ್ದಾರೆ.
ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿರುವ ಪ್ರತಿ ಅಂಗನವಾಡಿ ಮತ್ತು ಶಾಲೆಗಳ ಕುಡಿಯುವ ನೀರಿನ ಘಟಕವನ್ನು ಆದ್ಯತೆಯಲ್ಲಿ ತಪಾಸಣೆ ನಡೆಸಬೇಕು. ಮಹಿಳಾ ಮತ್ತು ಮಕ್ಕಳ ಇಲಾಖೆ ಉಪ ನಿರ್ದೇಶಕರು ಹಾಗೂ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಇದರ ಉಸ್ತುವಾರಿ ವಹಿಸಬೇಕು. ಅದೇ ರೀತಿ ಅಂಗನವಾಡಿ ಮತ್ತು ಶಾಲೆಗಳ ಕುಡಿಯುವ ನೀರಿನ ಟ್ಯಾಂಕ್‍ಗಳನ್ನು ಪ್ರತಿ ಮೂರು ತಿಂಗಳಿಗೊಮ್ಮೆ ಸ್ವಚ್ಛಗೊಳಿಸಬೇಕು. ಇದಕ್ಕಾಗಿ ಗ್ರಾಮ ಪಂಚಾಯತ್‍ಗಳ ನೀರು ಗಂಟಿಗಳನ್ನು (ವಾಟರ್ ಮ್ಯಾನ್) ಬಳಸಿಕೊಳ್ಳುವಂತೆ ಸೂಚಿಸಿದರು. ಈ ಸಂಬಂಧ ಜಿಪಿಎಸ್ ಫೋಟೋ ತೆಗೆದು ಪ್ರತಿ ಶಾಲೆಯಲ್ಲಿ ಇಟ್ಟುಕೊಂಡು ತಪಾಸಣೆ ವೇಳೆ ಪರಿಶೀಲಿಸಬೇಕು ಎಂದು ಅವರು ನಿರ್ದೇಶಿಸಿದರು.
ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರಿನ ಇಲಾಖೆ ಕಾರ್ಯಪಾಲಕ ಅಭಿಯಂತರ ಜೈಪ್ರಕಾಶ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ತಿಮ್ಮಯ್ಯ, ಜಂಟಿ ಕೃಷಿ ನಿರ್ದೇಶಕ ಹೊನ್ನಪ್ಪ ಗೌಡ, ಸಣ್ಣ ನೀರಾವರಿ ಇಲಾಖೆ ಎಇಇ ತಾಜುದ್ದೀನ್ ಉಬೈದ್ ಮತ್ತಿತರರು ಇದ್ದರು.
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…
ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…
ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…
ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…