ಪ್ರತಿ ಮನೆಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು ಸರ್ಕಾರ ಮುಂದು |

January 16, 2023
3:00 PM

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಈ ಅವಧಿಯ ಕೊನೆಯ ಬಜೆಟ್ ನಲ್ಲಿ ಜನಪ್ರಿಯ ಯೋಜನೆಗಳನ್ನು ಘೋಷಿಸಲು ಬಿಜೆಪಿ ಸರ್ಕಾರ ಮುಂದಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಮನೆ ಮನೆಗಳಿಗೆ ಕುಡಿಯುವ ನೀರು ಪೂರೈಸುವ ಜಲಜೀವನ್ ಮಿಷನ್ ಮಾದರಿಯಲ್ಲಿ ರಾಜ್ಯದಾದ್ಯಂತ ಎಲ್ಲಾ ಪೌರ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ರತಿ ಮನೆಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು ಸರ್ಕಾರ ಮುಂದಾಗಿದೆ.

Advertisement

ಯೋಜನೆಗೆ ಪ್ರಧಾನಿ ಮೋದಿ ಅವರ ಮೂಲಕ ಚಾಲನೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಹೆಚ್ಚಿನ ಜನ ಸಮುದಾಯ ತಲುಪುವ ಯೋಜನೆಗಳಿಗೆ ಚಾಲನೆ ನೀಡಲು 2023 -24ನೇ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡುವ ನಿರೀಕ್ಷೆ ಇದೆ. 155 ಪೌರ ಸಂಸ್ಥೆಗಳ ವ್ಯಾಪ್ತಿಯಲ್ಲಿ ಯೋಜನೆ ಜಾರಿಗೊಳಿಸುವ ನಿರೀಕ್ಷೆ ಇದ್ದು, ರಾಜ್ಯದ 55 ಲಕ್ಷ ಮನೆಗಳಿಗೆ ನಲ್ಲಿ ಸಂಪರ್ಕ ಕಲ್ಪಿಸಲಾಗುವುದು ಉಚಿತವಾಗಿ ನೀರು ಪೂರೈಕೆ ಬಗ್ಗೆಯೂ ಚಿಂತನೆ ನಡೆಸಲಾಗಿದೆ.

ಮೇಲ್ಮೈ ಜಲ ಮೂಲಗಳಿಂದ ಗುಣಮಟ್ಟದ ಕುಡಿಯುವ ನೀರು ಪೂರೈಕೆ ಮಾಡುವುದು ಯೋಜನೆಯ ಉದ್ದೇಶವಾಗಿದ್ದು, ಜಲಜೀವನ್ ಮಿಷನ್ ಯೋಜನೆ ವಿಸ್ತರಣೆ ರೀತಿಯಲ್ಲಿ ಇದು ಇರಲಿದೆ. ಮಾಸಿಕ 10,000 ಲೀಟರ್ ಮಿತಿಗೆ ಒಳಪಟ್ಟು ಉಚಿತವಾಗಿ ನೀರು ಒದಗಿಸಲು ಚಿಂತನೆ ಕೂಡ ನಡೆದಿದೆ.

ರಾಜ್ಯದಾದ್ಯಂತ ಗರಿಷ್ಠ 55 ಲಕ್ಷ ಮನೆಗಳು ಈ ಯೋಜನೆ ವ್ಯಾಪ್ತಿಗೆ ಬರಬಹುದಾಗಿದ್ದು, ಎಷ್ಟು ವೆಚ್ಚವಾಗಬಹುದು ಎಂಬ ಲೆಕ್ಕಾಚಾರ ನಡೆದಿದೆ. ಅನುದಾನ ಹೊಂದಾಣಿಕೆ ಮಾಡಿಕೊಂಡು ಬಜೆಟ್ ನಲ್ಲಿ ಜಲಜೀವನ ಮಿಷನ್ ಗೆ ಹೊಸ ರೂಪ ನೀಡಿ ರಾಜ್ಯದ ಪಟ್ಟಣ, ನಗರವಾಸಿಗಳ ಮನೆಗಳಿಗೆ ನಲ್ಲಿ ಸಂಪರ್ಕ ಕಲ್ಪಿಸುವ ಈ ಜನಪ್ರಿಯ ಯೋಜನೆ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹರಿಯಾಣ | 800 ಮೆ.ವ್ಯಾ.ವಿದ್ಯುತ್ ಉತ್ಪಾದನಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ
April 14, 2025
7:40 PM
by: The Rural Mirror ಸುದ್ದಿಜಾಲ
ಚಾಮರಾಜನಗರ ಜಿಲ್ಲೆ ಸಿದ್ದಾಪುರ ಜಮೀನು ವಿವಾದ | ರೈತರು ಆತಂಕಪಡುವ ಅಗತ್ಯವಿಲ್ಲ
April 14, 2025
7:28 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ |14.04.2025 | ಕರಾವಳಿ ಕೆಲವು ಕಡೆ ಗುಡುಗು ಸಹಿತ ಮಳೆ | ಎ.19ರ ನಂತರ ಮಳೆಯ ಪ್ರಮಾಣ ತೀರಾ ಕಡಿಮೆ |
April 14, 2025
12:45 PM
by: ಸಾಯಿಶೇಖರ್ ಕರಿಕಳ
ಅನುಭವದ ಕೃಷಿಯಿಂದ ಡಾಟಾ ಆಧಾರಿತ “ಸ್ಮಾರ್ಟ್ ಫಾರ್ಮಿಂಗ್ “‌ ಕಡೆಗೆ ಆಧುನಿಕ ಕೃಷಿ
April 14, 2025
7:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group