ದೇಶದ ಹಲವು ಭಾಗಗಳಲ್ಲಿ ಅಂತರ್ಜಲ ಕುಸಿಯುತ್ತಿದ್ದು, ಜಲಮಾಲಿನ್ಯ ಹೆಚ್ಚುತ್ತಿದೆ. ನೀತಿ ಆಯೋಗದ ವರದಿ ಅನುಸಾರ ದೇಶದ ನೀರು ಪೂರೈಕೆಯಲ್ಲಿ ಶೇಕಡ 70ರಷ್ಟು ಅಶುದ್ಧ ಜಲವಾಗಿದೆ, ಈ ಈ ಹಿನ್ನೆಲೆಯಲ್ಲಿ ಜಲಶುದ್ಧೀಕರಣಕ್ಕೆ ಆದ್ಯತೆ ನೀಡಬೇಕು ಎಂದು ದಾವಣಗೆರೆಯ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಎಂದು ಹೇಳಿದ್ದಾರೆ. ಸಂಸತ್ ಕಲಾಪದಲ್ಲಿ ಮಾತನಾಡಿದ ಅವರು, ಜಲಶಕ್ತಿ ವಲಯದ ಅನುದಾನ ಸಮರ್ಪಕ ಬಳಕೆಯಾಗಬೇಕು ಹಾಗೂ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ ಒದಗಿಸಬೇಕು ಎಂದರು. ಕರ್ನಾಟಕದ ಭದ್ರಾ ಮೇಲ್ದಂಡೆ, ಕಳಸಾ ಬಂಡೂರಿ ನಾಲೆ ಯೋಜನೆಗಳು ಹಾಗೂ ಕೃಷ್ಣಾ, ಕಾವೇರಿ ನದಿಗಳ ನೀರು ಹಂಚಿಕೆ ವಿಚಾರದಲ್ಲಿ ಕೇಂದ್ರ ನೆರವು ನೀಡಬೇಕು ಎಂದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel