Advertisement
MIRROR FOCUS

ಮತ್ತಷ್ಟು ಚುರುಕುಗೊಂಡ ಮುಂಗಾರು | ಹಾರಂಗಿ ಜಲಾಶಯದಿಂದ ನೀರು ಬಿಡುಗಡೆ | ಕಾವೇರಿ ತೀರದಲ್ಲಿ ಪ್ರವಾಹ ಭೀತಿ

Share

ಮುಂಗಾರು ಮಳೆ ಚುರುಕುಗೊಂಡರು, ಈ ಬಾರಿ ಮಳೆಯ ಪ್ರಮಾಣ ಕಡಿಮೆ ಎಂದು ಹವಾಮಾನ ಇಲಾಖೆ ವರದಿ ಮಾಡಿತ್ತು. ಆದರೆ ಕಳೆದ ಎರಡು ದಿನದಿಂದ ಕೊಡಗು (Kodagu) ಜಿಲ್ಲೆಯಲ್ಲಿ ಭಾರೀ ಮಳೆ (Rain) ಸುರಿಯುತ್ತಿರುವುದರಿಂದ ಕುಶಾಲನಗರದ ಹಾರಂಗಿ ಜಲಾಶಯದ (Harangi Dam) ಒಳಹರಿವಿನ ಪ್ರಮಾಣ 20 ಸಾವಿರ ಕ್ಯೂಸೆಕ್‌ಗೆ ಏರಿಕೆಯಾಗಿದೆ. ಕ್ಷಣ ಕ್ಷಣಕ್ಕೂ ಒಳಹರಿವು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವುದರಿಂದ ರಾತ್ರಿ 12 ಗಂಟೆ ಸುಮಾರಿಗೆ ಜಲಾಶಯದಿಂದ ಸುಮಾರು 10 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿತ್ತು. ಇದೀಗ ನೀರಿನ ಒಳಹರಿವು ಹೆಚ್ಚಾಗಿದ್ದು, ಇನ್ನಷ್ಟು ನೀರನ್ನು ಹೊರಬಿಡುವ ಸಾಧ್ಯತೆ ಇದೆ. ಇದರಿಂದ ಕಾವೇರಿ ಮತ್ತು ಹಾರಂಗಿ ನದಿ ದಂಡೆಯಲ್ಲಿ ಪ್ರವಾಹದ (Flood) ಭೀತಿ ಸೃಷ್ಟಿಯಾಗಿದೆ.

Advertisement
Advertisement
ಮಡಿಕೇರಿ ತಾಲೂಕಿನ ಭಾಗಮಂಡಲದಲ್ಲೂ ರಾತ್ರಿಯಿಂದ ಉತ್ತಮ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ನದಿಯ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗುತ್ತಿದೆ. ಇದೇ ರೀತಿಯಲ್ಲಿ ಮಳೆ ಮುಂದುವರೆದರೆ ಮಡಿಕೇರಿ-ನಾಪೋಕ್ಲು ರಸ್ತೆ ಕಡಿತಗೊಳ್ಳುವ ಸಾಧ್ಯತೆಯೂ ಇದೆ. ಅಲ್ಲದೇ ಜಿಲ್ಲೆಯಲ್ಲಿ ವಿಪರೀತ ಗಾಳಿ ಮಳೆಯಾಗುತ್ತಿದ್ದು, ಹಲವಾರು ಗ್ರಾಮೀಣ ಭಾಗದಲ್ಲಿ ವಿದ್ಯುತ್ ಕಂಬ ಹಾಗೂ ಮರಗಳು ಬಿದ್ದು ರಸ್ತೆ ಸಂಚಾರಕ್ಕೂ ಅಡಚಣೆಯಾಗಿದೆ. ಕೆಲ ಗ್ರಾಮ ವಿದ್ಯುತ್ ಇಲ್ಲದೆ ಕತ್ತಲೆಯಲ್ಲಿ ಮುಳುಗಿದೆ.
ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಕೊಡಗು ಜಿಲ್ಲೆಯಾದ್ಯಂತ ಅಂಗನವಾಡಿ ಸೇರಿದಂತೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೊಡಗು ಜಿಲ್ಲೆಗೆ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಆರೆಂಜ್ ಅಲರ್ಟ್ ಘೋಷಿಸಿದೆ.

ರಾಜ್ಯದಾದ್ಯಂತ ಮುಂದಿನ 5 ದಿನ ಭಾರೀ ಮಳೆಯ (Rain) ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿಯ ಮೂರು ಜಿಲ್ಲೆಗಳಿಗೂ ಇಂದು ಹಾಗೂ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ನಂತರದ ಮೂರು ದಿನ ಆರೆಂಜ್ ಅಲರ್ಟ್ ಘೋಷಿಸಿದೆ. ಉತ್ತರ ಒಳನಾಡಿಗೆ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಿದ್ದು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಸಾಧಾರಣ ಅಥವಾ ತುಂತುರು ಮಳೆಯಾಗುವ ಸಾಧ್ಯತೆಯಿದೆ. ನಗರದಲ್ಲಿ ಮುಂದಿನ ಮೂರ್ನಾಲ್ಕು ದಿನ ಮೋಡ ಕವಿದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

Advertisement
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪಿಎಂ ಸೂರ್ಯಘರ್-ಉಚಿತ ವಿದ್ಯುತ್ ಯೋಜನೆ | ದಕ್ಷಿಣ ಕನ್ನಡದಲ್ಲೂ ಯಶಸ್ವಿಯಾಗಿ ಅನುಷ್ಟಾನ |

ಪಿಎಂ ಸೂರ್ಯಘರ್-ಉಚಿತ ವಿದ್ಯುತ್ ಯೋಜನೆ ದೇಶದಾದ್ಯಂತ ಚಾಲನೆಗೊಂಡಿದೆ. ಈ ಯೋಜನೆಯಡಿ “ಮಾದರಿ ಸೌರ…

8 hours ago

ಹಾಲಿನ ದರ ಹೆಚ್ಚಳ ಚರ್ಚೆ| ಹೈನುಗಾರರಿಗೆ ಪ್ರಯೋಜನವೇನು…? |

ಹಾಲಿನ ದರ ಹೆಚ್ಚಳದ ಬಗ್ಗೆ ಚರ್ಚೆಗಳು ಆರಂಭವಾಗಿದೆ. ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳೂ…

9 hours ago