#KRSDAM | ಕೆಆರ್‌ಎಸ್‌ ಡ್ಯಾಂನಿಂದ ರೈತರ ಬೆಳೆಗಳಿಗೆ ಬಿಡುತ್ತಿದ್ದ ನೀರು ಸ್ಥಗಿತ | ತಮಿಳುನಾಡಿಗೆ ನೀರು ಬಿಡುಗಡೆ |

August 5, 2023
12:41 PM
ಮಂಡ್ಯ ಜಿಲ್ಲೆಯ ನಾಲೆಗಳಿಗೆ ಬಿಡುತ್ತಿದ್ದ ನೀರನ್ನು ಸ್ಥಗಿತಗೊಳಿಸಲಾಗಿದೆ. ತಮಿಳುನಾಡಿಗೆ ಬಿಡಬೇಕಾದ ಖೋಟಾ ನೀರನ್ನು ಬಿಡುಗಡೆ ಮಾಡಲಾಗಿದೆ. ರೈತರ ಬೆಳೆಗಳಿಗೆ ನೀರು ಬಿಡುಗಡೆಯ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜನಪ್ರತಿನಿಧಿಗಳು ತಿಳಿಸಿದ್ದಾರೆ.

ವರುಣನ ಕೃಪೆಯಿಂದ ರಾಜ್ಯದ ಜೀವ ನದಿ ಕಾವೇರಿ ಮೈದುಂಬಿ ಹರಿಯುತ್ತಿದ್ದಾಳೆ. ಮಂಡ್ಯ ರೈತರ, ಬೆಂಗಳೂರು ನಾಗರೀಕರ ಅಗತ್ಯವನ್ನು ಪೂರೈಸುವುದಲ್ಲದೆ, ಪಕ್ಕದ ರಾಜ್ಯ ತಮಿಳುನಾಡಿನ ಜೀವನಾಡಿ ಕೂಡ ಹೌದು. ಇದೀಗ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಡ್ಯಾಂನಿಂದ ತಮಿಳುನಾಡಿಗೆ ನೀರು ಬಿಡಲಾಗಿದೆ. 5,308 ಕ್ಯೂಸೆಕ್‌ ನೀರನ್ನು ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ.

ನಾಲೆಗಳಿಗೆ ಬಿಡುತ್ತಿದ್ದ ನೀರನ್ನು ಸ್ಥಗಿತಗೊಳಿಸಲಾಗಿದೆ. ತಮಿಳುನಾಡಿಗೆ ಬಿಡಬೇಕಾದ ಖೋಟಾ ನೀರನ್ನು ಬಿಡುಗಡೆ ಮಾಡಲಾಗಿದೆ. ರೈತರ ಬೆಳೆಗಳಿಗೆ ನೀರು ಬಿಡುಗಡೆಯ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜನಪ್ರತಿನಿಧಿಗಳು ತಿಳಿಸಿದ್ದಾರೆ. ಹೀಗಿರುವಾಗ ಕಾವೇರಿ ನೀರಾವರಿ ನಿಗಮ ತಮಿಳುನಾಡಿಗೆ ನೀರು ಹರಿಸಿದೆ. ಮುಂಗಾರಿನ ಹಿನ್ನೆಲೆ ಕೆಲ ದಿನಗಳ ಹಿಂದೆ ಕೊಡಗಿನಲ್ಲಿ ಉತ್ತಮ ಮಳೆಯಾಗಿತ್ತು. ಹೀಗಾಗಿ ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟವೂ ಹೆಚ್ಚಿದೆ. ಈಗ ಮತ್ತೆ ಮಳೆ ಪ್ರಮಾಣ ತಗ್ಗಿದೆ. ಈಗಾಗಲೇ ಕೆಆರ್‌ಎಸ್‌ 113 ಅಡಿ ತುಂಬಿದೆ. ಡ್ಯಾಂ ಸಂಪೂರ್ಣ ಭರ್ತಿಗೆ ಇನ್ನೂ 11 ಅಡಿಯಷ್ಟೇ ಬಾಕಿ ಇದೆ.

KRS ಡ್ಯಾಂನ ಇಂದಿನ ನೀರಿನ ಮಟ್ಟ
ಗರಿಷ್ಠ ಮಟ್ಟ – 124.80 ಅಡಿ
ಇಂದಿನ ಮಟ್ಟ – 113.44 ಅಡಿ
ಒಳ ಹರಿವು – 5,270 ಕ್ಯೂಸೆಕ್
ಹೊರ ಹರಿವು – 5,358 ಕ್ಯೂಸೆಕ್
ಗರಿಷ್ಠ ಸಂಗ್ರಹ ಸಾಮರ್ಥ್ಯ – 49.452 ಟಿಎಂಸಿ
ಇಂದು ಸಂಗ್ರಹ ಇರುವ ನೀರು – 35.325 ಟಿಎಂಸಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ
ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ
July 24, 2026
5:01 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?
July 24, 2026
4:21 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror