Advertisement
ವಿಶೇಷ ವರದಿಗಳು

ಗ್ರಾಮಗಳಲ್ಲಿ ನೀರಿನ ಹೊಂಡ | ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ ವಿಶ್ವಬ್ಯಾಂಕ್ ನೆರವಿನ ಯೋಜನೆ ಅನುಷ್ಟಾನ |

Share

ವಿಶ್ವಬ್ಯಾಂಕ್ ನೆರವಿನ ರಿವಾರ್ಡ್ ಯೋಜನೆಯಡಿ ಕೃಷಿ ಮತ್ತು ಜಲಾನಯನ ಅಭಿವೃದ್ಧಿ ಇಲಾಖೆಯಿಂದ ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ ಸಂಪೂರ್ಣ ಜಲಾನಯನ ಉಪಚಾರ ಕಾರ್ಯಕ್ರಮ ಅನುಷ್ಠಾನ ಮಾಡಲಾಗುತ್ತಿದೆ. ಯೋಜನೆಯಡಿ  ಕುರಿ-ಮೇಕೆ, ದನ-ಕರು, ಎಮ್ಮೆಗಳಿಗೆ  ಕುಡಿಯಲು ನೀರು. ಏಳು ಹಳ್ಳಿಗಳ ಸೂಕ್ತ ಪ್ರದೇಶದಲ್ಲಿ ತಲಾ ಒಂದು ನೀರಿನ ತೊಟ್ಟಿ ಅಥವಾ ಕೃಷಿ ಹೊಂಡ ನಿರ್ಮಿಸಲಾಗಿದೆ.…..ಮುಂದೆ ಓದಿ….

ಈ ಯೋಜನೆಯ ಬಗ್ಗೆ   ಗ್ರಾಮೀಣ ಭಾಗದಲ್ಲಿ ಈಗಾಗಲೇ ಉತ್ತಮವಾದ ಅಭಿಪ್ರಾಯ ವ್ಯಕ್ತವಾಗಿದೆ. ಮೊದಲ ಹಂತದಲ್ಲಿ10 ಹಾಗೂ ಎರಡನೇ ಹಂತದಲ್ಲಿ 10 ಜಿಲ್ಲೆಗಳಲ್ಲಿ ಈ ಯೋಜನೆ ಅನುಷ್ಠಾನವಾಗುತ್ತಿದೆ. ನೀರಿನ ಲಭ್ಯತೆ ಹಾಗೂ ಮಣ್ಣಿನ ಆಧಾರದ ಮೇಲೆ ಈ ಪ್ರದೇಶ ಆಯ್ಕೆ ಮಾಡಲಾಗಿದೆ.  ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ 5 ಸಾವಿರದ 171 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ ಅನುಷ್ಠಾನ ಮಾಡಲಾಗುತ್ತಿದ್ದು, ನಾಲಾ ಬದು, ಸಣ್ಣ ಜಿನುಗು ಕೆರೆ ಹಾಗೂ  ಕೃಷಿ ಹೊಂಡಗಳ ನಿರ್ಮಾಣ ಮಾಡಲಾಗುತ್ತಿದೆ.

ಗ್ರಾಮಗಳಲ್ಲಿ ತೊಟ್ಟಿ ನಿರ್ಮಾಣದಿಂದ ಕುರಿ, ಮೇಕೆ, ನೀರು ಸೇವಿಸಲು ಅನುಕೂಲವಾಗಿದೆ ಎಂದು ಗ್ರಾಮಸ್ಥ ತಿಪ್ಪೇರುದ್ರ ಹೇಳುತ್ತಾರೆ. ತಮ್ಮ14 ಎಕರೆ ಜಮೀನಿನಲ್ಲಿ ರಿವಾರ್ಡ್ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ ತೆಂಗು,ಮಾವು, ಸೀಬೆ ಗಿಡಗಳನ್ನು ನೆಡಲಾಗಿದ್ದು, ಬಹಳ ಸಹಾಯವಾಗಿದೆ ಎನ್ನುತ್ತಾರೆ ಕೃಷಿಕ ತಿಪ್ಪೇಸ್ವಾಮಿ ರೆಡ್ಡಿ.

Source : DD

The Department of Agriculture and  Jayanayana Development is currently carrying out a comprehensive water tank program in seven villages of Chitradurga district as part of the World Bank aided reward scheme. The program includes providing drinking water for sheep, goats, cattle, calves, and buffaloes. Additionally, one water tank has been constructed in each appropriate location within the seven villages.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 hour ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

6 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

11 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

23 hours ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

1 day ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

1 day ago