ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಜಲಾನಯನ ಅಭಿವೃದ್ಧಿ ಘಟಕದ ಸಹಯೋಗದಲ್ಲಿ ಸುಸ್ಥಿರ ನೀರು ನಿರ್ವಹಣೆ ಬಗ್ಗೆ ಜಾಗೃತಿ ಮೂಡಿಸುವ ‘ಜಲಾನಯನ ಯಾತ್ರೆ’ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕುರುಡು ಮಲೆಯಲ್ಲಿ ಆರಂಭವಾಯಿತು.
Advertisement
ಜಲಾನಯನ ಯಾತ್ರೆಗಳ ವಾಹನಗಳಿಗೆ ಅಭಿವೃದ್ಧಿ ಇಲಾಖೆ ಆಯುಕ್ತ ಮಹೇಶ್ ಬಿರೂರ್ ಚಾಲನೆ ನೀಡಿದರು.ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ ಜಾಗೃತಿ ಮೂಡಿಸಲಿದೆ. ಸಮಾರಂಭದಲ್ಲಿ ಶಾಸಕ ಕೊತ್ತೂರು ಮಂಜನಾಥ್ ಮಾತನಾಡಿ, ಸಾಂಪ್ರದಾಯಿಕ ಜಲಮೂಲಗಳು ಒತ್ತುವರಿ ಆಗಿದ್ದು, ಜಲ ಮೂಲಗಳ ಪುನಶ್ಚೇತನ ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.
Advertisement
ವಿಧಾನಪರಿಷತ್ ಸದಸ್ಯ ಅನಿಲ್ ಕುಮಾರ್, ಕೆರೆ, ಮಳೆ ನೀರನ್ನು ಸಂರಕ್ಷಿಸಬೇಕು. ಮಳೆ ನೀರಿನಲ್ಲಿ ಮಣ್ಣು ಕೊಚ್ಚಿಕೊಂಡು ಹೋಗದಂತೆ ತಡೆಗಟ್ಟಬೇಕಾಗಿದೆ. ಈ ನಿಟ್ಟಿನಲ್ಲಿ ಜನರಲ್ಲಿ ಅರಿವು ಮೂಡಿಸಬೇಕಾಗಿದೆ ಎಂದು ಹೇಳಿದರು.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement