ಕರ್ನಾಟಕದ ಕರಾವಳಿ ಭಾಗದಲ್ಲಿ “ಹೈ ವೇವ್ ಅಲರ್ಟ್” ಭಾರತೀಯ ಹವಾಮಾನ ಇಲಾಖೆ ಘೋಷಣೆ ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆ 42ಕಿ.ಮೀ ನಷ್ಟು ಉದ್ದದ ಕರಾವಳಿ ತೀರ ಹೊಂದಿದ್ದು, ಇತ್ತೀಚಿಗೆ ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಪಶ್ಚಿಮ ಕರಾವಳಿಗೆ “ಬಿಪರ್ ಜಾಯ್’ ಚಂಡಮಾರುತವು ಅಪ್ಪಳಿಸುವ ಸಾಧ್ಯತೆಗಳು ಇರುತ್ತದೆ. ಈ ಚಂಡಮಾರುತದ ತೀವ್ರತೆಯ ಪರಿಣಾಮದಿಂದ ಸಮುದ್ರದ ಅಲೆಗಳ ಎತ್ತರ 3 ರಿಂದ 4ಮೀ. ನಷ್ಟು ಇರಲಿದ್ದು, ಕರಾವಳಿಯಲ್ಲಿ ಉಂಟಾಗಿರುವ ಪ್ರಕ್ಷುಬ್ಧ ವಾತಾವರಣದಿಂದಾಗಿ ಮುಂದಿನ 5 ದಿನಗಳವರೆಗೆ ಅಂದರೆ, ಜೂ.19ರ ವರೆಗೆ ಕರಾವಳಿ ತೀರದಲ್ಲಿ ಸಾರ್ವಜನಿಕರು, ಪ್ರವಾಸಿಗರು, ಮಕ್ಕಳು, ಸ್ಥಳೀಯರು, ಮೀನುಗಾರರು ಸಮುದ್ರಕ್ಕೆ ಯಾವುದೇ ಕಾರಣಕ್ಕೂ ಇಳಿಯದಂತೆ ಎಚ್ಚರಿಕೆ ನೀಡಿದೆ. ಸಮುದ್ರದ ಹತ್ತಿರ ಓಡಾಡುವುದು ಹಾಗೂ ಆಟವಾಡುವುದನ್ನು ಕೂಡಾ ನಿಷೇಧಿಸಲಾಗಿದೆ.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ತುರ್ತು ಸೆವೆಗೆ 24/7 ಕಂಟ್ರೋಲ್ ರೂಂ. ಟೋಲ್ ಫ್ರೀ ಸಂಖ್ಯೆ:1077/0824-2442590 ಗೆ ಕರೆ ಮಾಡುವಂತೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.