ವಯನಾಡ್‌ ದುರಂತ | ಪ್ರಾಕೃತಿಕ ವಿಕೋಪಕ್ಕೆ ಬಲಿಯಾದವರ ಸಂಖ್ಯೆ 160 ಕ್ಕೆ ಏರಿಕೆ | ಇನ್ನೂ 190 ಜನರು ನಾಪತ್ತೆ |

July 31, 2024
8:58 PM
ವಯನಾಡ್‌ ಜಿಲ್ಲೆಯ ಚೂರಲ್​​ಮಲ ಮತ್ತು ಮುಂಡಕೈ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 160 ಕ್ಕೆ ಏರಿಕೆಯಾಗಿದೆ.

ಕೇರಳದ ವಯನಾಡ್‌ ಜಿಲ್ಲೆಯ ಚೂರಲ್​​ಮಲ ಮತ್ತು ಮುಂಡಕೈ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 160 ಕ್ಕೆ ಏರಿಕೆಯಾಗಿದೆ. ಇನ್ನೂ 190 ಜನರು ನಾಪತ್ತೆಯಾಗಿದ್ದಾರೆ ಎಂದು ಕೇರಳ ಸರ್ಕಾರ ಮಾಹಿತಿ ನೀಡಿದೆ. ಈಗಲೂ ರಕ್ಷಣಾ ಕಾರ್ಯಾಚರಣೆಗಳು ಮುಂದುವರಿದಿದ್ದು, ಇದೀಗ ಮಳೆ ಅಡ್ಡಿಯಾಗಿದೆ. ಈ ನಡುವೆ ಮತ್ತೆ ಭಾರೀ ಮಳೆಯ ಸಾಧ್ಯತೆಯ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಸಿದೆ. ಆಗಸ್ಟ್ 1 ರಂದು ಭಾರಿ ಮಳೆ’ ಎಚ್ಚರಿಕೆ ನೀಡಲಾಗಿದೆ. ಕೇರಳ ಸರ್ಕಾರವು  ರಾಜ್ಯಾದ್ಯಂತ ಶೋಕಾಚರಣೆಯನ್ನು ಆಚರಿಸಲಿದೆ.

ವಯನಾಡಿನ ಚೂರಲ್‌ಮಲ ಮತ್ತು ಮುಂಡಕೈ ಪ್ರದೇಶದಲ್ಲಿ ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ. 200 ಕ್ಕೂ ಅಧಿಕ ಸೈನಿಕರು ಐದು ಗುಂಪುಗಳಲ್ಲಿ ಸ್ಥಳಕ್ಕೆ ಬಂದಿದ್ದು, ಮಣ್ಣಿನಡಿಯಲ್ಲಿ ಸಿಲುಕಿರುವವರ ಪತ್ತೆಗೆ ದೆಹಲಿಯಿಂದ ಸ್ನಿಫರ್ ಡಾಗ್‌ಗಳನ್ನು ತರಿಸಲಾಗಿದೆ. ಟೆಟ್ರಾ ಟ್ರಕ್‌ಗಳನ್ನು ವಯನಾಡಿಗೆ ತಲುಪಿಸಲಾಗುವುದು ಎಂದು ಸೇನೆಯು ಮಾಹಿತಿ ನೀಡಿದೆ.

The death toll from landslides in the Churalmala and Mundakai areas of Kerala’s Wayanad district has now reached 160, with an additional 190 people reported missing. Rescue operations are ongoing, although they are being hampered by the continuing rainfall. The Meteorological Department has issued a warning of potential heavy rain in the area.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 18-03-2026 | ಗುಡುಗು-ಆಲಿಕಲ್ಲು ಮಳೆ ಅಲರ್ಟ್‌ | ರಾಜ್ಯಾದ್ಯಂತ ಹವಾಮಾನ ಬದಲಾವಣೆ..!
March 18, 2026
1:40 PM
by: ಸಾಯಿಶೇಖರ್ ಕರಿಕಳ
ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ
March 18, 2026
7:15 AM
by: ದ ರೂರಲ್ ಮಿರರ್.ಕಾಂ
ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ
March 18, 2026
6:51 AM
by: ಮಿರರ್‌ ಡೆಸ್ಕ್
ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು
March 18, 2026
6:44 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror