ವಯನಾಡಿನಲ್ಲಿ ಭೂಕುಸಿತ | ಭಾರೀ ಕುಸಿತಕ್ಕೆ ಹತ್ತು ಮಂದಿ ಬಲಿ | ನೂರಾರು ಮಂದಿ ಸಿಲುಕಿರುವ ಭೀತಿ | ನಡೆಯುತ್ತಿದೆ ರಕ್ಷಣಾ ಕಾರ್ಯಾಚರಣೆ |

July 30, 2024
8:56 AM
ವಯನಾಡ್​ನಲ್ಲಿ ಭಾರೀ ಮಳೆಗೆ ಭೂ ಕುಸಿತ ಸಂಭವಿಸಿದೆ. ಕನಿಷ್ಟ 10 ಮಂದಿ ಬಲಿಯಾಗಿದ್ದಾರೆ, 100 ಅಧಿಕ ಮಂದಿ ನಾಪತ್ತೆಯಾಗಿದ್ದಾರೆ.

ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿ ಮಂಗಳವಾರ ನಸುಕಿನ ಜಾವ ಗುಡ್ಡ ಕುಸಿತ ಉಂಟಾಗಿದೆ. ಭಾರಿ ಭೂಕುಸಿತದ ನಂತರ ಹತ್ತು ಮೃತದೇಹಗಳು ಪತ್ತೆಯಾಗಿದೆ. ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಕೇರಳ ರಾಜ್ಯ ವಿಪತ್ತು ನರ‍್ವಹಣಾ ಪ್ರಾಧಿಕಾರ (ಕೆಎಸ್‌ಡಿಎಂಎ)  ಮತ್ತು ಎನ್‌ಡಿಆರ್‌ಎಫ್ ತಂಡಗಳು ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಸುತ್ತಿದೆ. ನೂರಾರು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಕಣ್ಣೂರು ರಕ್ಷಣಾ ಭದ್ರತಾ ದಳದ ಎರಡು ತಂಡಗಳೊಂದಿಗೆ ಹೆಚ್ಚುವರಿ ಎನ್‌ಡಿಆರ್‌ಎಫ್ ತಂಡ ಕೂಡ ಸಹಾಯಕ್ಕೆ ತೆರಳುತ್ತಿದೆ.………ಮುಂದೆ ಓದಿ……..

Advertisement
Advertisement

ಮಂಗಳವಾರ ಮುಂಜಾನೆ ಕೇರಳದ ವಯನಾಡ್‌ನ ಚೂರಲ್‌ಮಲಾ ಮತ್ತು ಮುಂಡಕ್ಕಾಯಿಯಲ್ಲಿ ಭಾರೀ ಮಳೆಯ ನಡುವೆ ಭೂಕುಸಿತ ಸಂಭವಿಸಿದೆ. ರಕ್ಷಣಾ ಕಾರ್ಯ ಭರದಿಂದ ನಡೆಯುತ್ತಿದೆ. ತೊರ್ನಾಡ್‌  ಗ್ರಾಮದಲ್ಲಿದ್ದ ನೇಪಾಳಿ ಕುಟುಂಬದ ಒಂದು ವರ್ಷದ ಮಗು ಭೂಕುಸಿತದಲ್ಲಿ ಸಾವನ್ನಪ್ಪಿದೆ ಎಂದು ವಯನಾಡ್ ಜಿಲ್ಲಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೇರಳದ ಸುದ್ದವಾಹಿನಿ ಮನೋರಮಾ ಪ್ರಕಾರ, ಗ್ರಾಮದ ಪ್ರಮುಖ ಸೇತುವೆಯೊಂದು ಕೊಚ್ಚಿ ಹೋಗಿದೆ. ಭೂಕುಸಿತದ  ಸ್ಥಳಗಳಲ್ಲಿ ಅನೇಕರು ಸಿಲುಕಿಕೊಂಡಿದ್ದಾರೆ. ಮನೋರಮಾ ವರದಿಗಳ ಪ್ರಕಾರ ಸಾವುನೋವುಗಳ ಸಂಖ್ಯೆ ನಿಖರವಾಗಿ ತಿಳಿದಿಲ್ಲ.

Advertisement

Wayanad Landslide  | Ten killed, hundreds feared trapped amid landslides near Meppadi | rescue operations underway

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 23.05.2025 | ಮುಂದಿನ 10 ದಿನಗಳವರೆಗೂ ರಾಜ್ಯದಲ್ಲಿ ಉತ್ತಮ ಮಳೆ
May 23, 2025
4:03 PM
by: ಸಾಯಿಶೇಖರ್ ಕರಿಕಳ
ತೆಲಿಕೆದ ಬೊಳ್ಳಿ ಅರವಿಂದ್ ಬೋಳಾರ್ ಇವರಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಕಡೆಯಿಂದ ಸನ್ಮಾನ
May 23, 2025
3:50 PM
by: ದ ರೂರಲ್ ಮಿರರ್.ಕಾಂ
ಅಪಾರ ಏಕಾದಶಿಯ ನಾಲ್ಕು ಶುಭಯೋಗ | ಐದು ರಾಶಿಯವರಿಗೆ ವಿಷ್ಣುವಿನ ಅನುಗ್ರಹ ಪ್ರಾಪ್ತಿ
May 23, 2025
7:30 AM
by: ದ ರೂರಲ್ ಮಿರರ್.ಕಾಂ
ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ
May 22, 2025
10:48 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group