ವಯನಾಡಿನಲ್ಲಿ ಮತ್ತೊಂದು ಭೀತಿ | ಭೂಕುಸಿತದ ಪ್ರದೇಶದಲ್ಲಿ ಭೂಮಿ ಕಂಪಿಸಿದ ಅನುಭವ

August 10, 2024
11:20 AM

ಕೇರಳದ(Kerala) ವಯನಾಡು(Wayanad) ಈಗಾಗಲೇ ರಣ ಭೀಕರ ಭು ಕುಸಿತ ದುರಂತಕ್ಕೆ ಹೈರಾಣಾಗಿದೆ. ಮತ್ತೆ ಮರಳಿ ಅಲ್ಲಿ ಜೀವನ ಕಟ್ಟಿಕೊಳ್ಳುವುದು ಅಸಾಧ್ಯ ಅನ್ನುವ ಮಟ್ಟಕ್ಕೆ ದುರಂತ ಸಂಭವಿಸೆದೆ. ಮತ್ತೆ ಅಲ್ಲಿ ಬದುಕು ಕಟ್ಟಿಕೊಳ್ಳಬಹುದೇನೋ ಅನ್ನುವ ಅಸೆಯಲ್ಲಿದ್ದ ವಯನಾಡಿನ ಜನತೆಗೆ ಇದೀಗ ಮತ್ತೊಂದು ಭೀತಿ ಎದುರಾಗಿದೆ.  ಇಂದು ಬೆಳಗ್ಗೆ 10:15 ಕ್ಕೆ ವಯನಾಡಿನಲ್ಲಿ ಭೂಮಿ ಕಂಪಿಸಿದ(Earth Quqke) ಅನುಭವವಾಗಿದೆ.

Advertisement
Advertisement

ಇತ್ತೀಚೆಗೆ ಭೂಕುಸಿತ ಸಂಭವಿಸಿದ ಚೂರಲ್ಮಲಾ – ಮುಂಡಕ್ಕೈ ಪ್ರದೇಶಗಳಿಂದ ಸುಮಾರು 15 ರಿಂದ 20 ಕಿಲೋಮೀಟರ್ ದೂರದಲ್ಲಿರುವ ಅಂಬಲವಾಯಲ್-ಎಡಕಲ್ ಪ್ರದೇಶಗಳಲ್ಲಿ ಬೆಳಗ್ಗೆ ಗುಡುಗು ಸದ್ದು ಕೇಳಿಸಿತು ಎನ್ನಲಾಗಿದೆ. ಪಕ್ಕದ ಕೋಝಿಕ್ಕೋಡ್ ಮತ್ತು ಪಾಲಕ್ಕಾಡ್ ಜಿಲ್ಲೆಗಳ ಭಾಗಗಳಿಂದ ಇದೇ ರೀತಿಯ ಶಬ್ದಗಳು ಕೇಳಿಬಂದಿವೆ ಎಂದು ವರದಿಯಾಗಿದೆ. ಶಬ್ದ ಕೇಳಿ ಅಂಬಲವಾಯಲ್-ಎಡಕಲ್ ಭಾಗದ ಜನರು ಮನೆಯಿಂದ ಹೊರ ಬಂದರು. ಈ ಪ್ರದೇಶದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಪರಿಹಾರ ಶಿಬಿರದಲ್ಲಿ ಹಲವು ಕುಟುಂಬಗಳು ಆಶ್ರಯ ಪಡೆದಿವೆ.

ಆರಂಭದಲ್ಲಿ ಗುಡುಗು ಇರಬಹುದು ಎಂದು ಹಲವರು ಭಾವಿಸಿದ್ದರು. ಆದರೆ ಶಬ್ದವು ಭೂಮಿಯ ಮೇಲ್ಮೈಯಿಂದ ಬಂದಿದೆ. ಹಲವರಿಗೆ ತಮ್ಮ ಮನೆಯ ಕಿಟಕಿ ಗಾಜುಗಳು ಅಲುಗಾಡಿರುವ ಅನುಭವವಾಗಿದೆ. ಭೂಕುಸಿತದ ತೀವ್ರತೆಯನ್ನು ಮೌಲ್ಯಮಾಪನ ಮಾಡಲು ಕೇಂದ್ರದ ತಜ್ಞರ ತಂಡವು ಈಗಾಗಲೇ ವಯನಾಡು ಪ್ರದೇಶಕ್ಕೆ ಭೇಟಿ ನೀಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಭೂಕುಸಿತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದು, ಈಗಾಗಲೇ ಈ ಪ್ರದೇಶದಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಜು.30 ರಂದು ಚೂರಲ್ಮಲಾ-ಮುಂಡಕ್ಕೈ ಪ್ರದೇಶಗಳಲ್ಲಿ ಸಂಭವಿಸಿದ ಭೂಕುಸಿತದಲ್ಲಿ 225 ಜನರು ಸಾವನ್ನಪ್ಪಿದ್ದಾರೆ. 131 ಕ್ಕೂ ಹೆಚ್ಚು ಜನರು ಇನ್ನೂ ನಾಪತ್ತೆಯಾಗಿದ್ದಾರೆ.

  • ಅಂತರ್ಜಾಲ ಮಾಹಿತಿ

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ
July 26, 2025
10:25 PM
by: The Rural Mirror ಸುದ್ದಿಜಾಲ
ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ
July 26, 2025
10:13 PM
by: The Rural Mirror ಸುದ್ದಿಜಾಲ
ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ
July 26, 2025
10:05 PM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ
July 26, 2025
9:12 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group