ವಯನಾಡಿನಲ್ಲಿ ಭೂಕುಸಿತದ ದುರಂತ | ಒಂದು ಬಲಿ , 7 ಮಂದಿ ನಾಪತ್ತೆ | ಇದು ಮಾನವ ನಿರ್ಮಿತ ದುರಂತ ಎಂದ ಸಚಿವ

July 7, 2026
3:44 PM
ವಯನಾಡಿನ ಕಲ್ಲಾಡಿ ಸುರಂಗ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಏಳು ಮಂದಿ ನಾಪತ್ತೆಯಾಗಿದ್ದಾರೆ.

ಕೇರಳದ ವಯನಾಡು ಜಿಲ್ಲೆಯ ಕಲ್ಲಾಡಿಯಲ್ಲಿರುವ ನಿರ್ಮಾಣ ಹಂತದ ಸುರಂಗ ಕಾಮಗಾರಿ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಓರ್ವ ಕಾರ್ಮಿಕ ಮೃತಪಟ್ಟಿದ್ದು, ಇನ್ನೂ ಏಳು ಮಂದಿ ನಾಪತ್ತೆಯಾಗಿದ್ದಾರೆ. ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಮುಂದುವರಿದಿದೆ.‌ ಭೂಕುಸಿತದ ವೇಳೆ ಸ್ಥಳದಲ್ಲಿದ್ದ ಎಂಜಿನಿಯರ್‌ಗಳು ಮತ್ತು ಭದ್ರತಾ ಸಿಬ್ಬಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ

ನಿರಂತರ ಸುರಿಯುತ್ತಿರುವ ಭಾರೀ ಮಳೆಯ ನಡುವೆ ಮೆಪ್ಪಾಡಿ ಸಮೀಪದ ಮೀನಾಕ್ಷಿ ಸೇತುವೆ ಬಳಿ ಗುಡ್ಡ ಕುಸಿದು ಕಾಮಗಾರಿ ಪ್ರದೇಶ ಮಣ್ಣಿನಡಿ ಹೂತು ಹೋಗಿದೆ. ಅಗ್ನಿಶಾಮಕ ದಳ, ಪೊಲೀಸರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಹಾಗೂ ಸ್ಥಳೀಯರು ಜಂಟಿಯಾಗಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಕೇರಳ ಸರ್ಕಾರದ ಸಚಿವ ಸಿದ್ದಿಕ್ ಈ ಘಟನೆ ಕುರಿತು ಪ್ರತಿಕ್ರಿಯಿಸಿ, “ಇದು ಪ್ರಕೃತಿ ವಿಕೋಪ ಮಾತ್ರವಲ್ಲ, ಮಾನವ ನಿರ್ಮಿತ ದುರಂತ” ಎಂದು ಹೇಳಿದ್ದಾರೆ.  ಭೂಕುಸಿತದ ಅಪಾಯವಿದ್ದರೂ ಕಾಮಗಾರಿ ಪ್ರದೇಶದಲ್ಲಿ ಮಣ್ಣು ತೆರವುಗೊಳಿಸುವಂತೆ ನೀಡಿದ್ದ ಸೂಚನೆಗಳನ್ನು ಗುತ್ತಿಗೆದಾರರು ಪಾಲಿಸದಿರುವುದು ದುರಂತಕ್ಕೆ ಕಾರಣವಾಗಿದೆ ಎಂದು ಸರ್ಕಾರ ಪ್ರಾಥಮಿಕವಾಗಿ ಅಭಿಪ್ರಾಯಪಟ್ಟಿದೆ.

ಈ ಘಟನೆಯ ಬಳಿಕ ಭಾರತೀಯ ಹವಾಮಾನ ಇಲಾಖೆ (IMD) ವಯನಾಡು ಹಾಗೂ ನೆರೆಯ ಕೋಝಿಕ್ಕೋಡ್ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಗುಡ್ಡ ಪ್ರದೇಶಗಳ ನಿವಾಸಿಗಳು, ಮನಂತವಾಡಿ ಹಾಗೂ ವೈತಿರಿ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗುಡ್ಡ ಪ್ರದೇಶಗಳ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ ಹಾಗೂ ಪ್ರಯಾಣಿಕರು ಅತ್ಯಂತ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ

ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳ ಪ್ರಕಾರ, ನಿರಂತರ ಮಳೆಯಿಂದಾಗಿ ಕಾಮಗಾರಿಯನ್ನು ಈಗಾಗಲೇ ಸ್ಥಗಿತಗೊಳಿಸಲಾಗಿತ್ತು. ಕಾಮಗಾರಿ ನಡೆಯುತ್ತಿದ್ದರೆ ಇನ್ನಷ್ಟು ದೊಡ್ಡ ದುರಂತ ಸಂಭವಿಸುವ ಸಾಧ್ಯತೆ ಇತ್ತು ಎಂದು ಅವರು ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

A landslide at the Kalladi tunnel construction site in Kerala’s Wayanad district has claimed one life, injured seven people, and left seven others missing. Kerala authorities have termed the incident a “man-made disaster” and rescue operations are continuing amid heavy rainfall

ನಿಮ್ಮ ಅಭಿಪ್ರಾಯ, ಪ್ರತಿಕ್ರಿಯೆಗಳನ್ನು ಕಮೆಂಟ್‌ ಮೂಲಕ ತಿಳಿಸಿ…

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…
September 29, 2026
7:28 AM
by: ದ ರೂರಲ್ ಮಿರರ್.ಕಾಂ
‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ
September 28, 2026
10:20 PM
by: ದ ರೂರಲ್ ಮಿರರ್.ಕಾಂ
ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!
September 28, 2026
9:05 PM
by: ದ ರೂರಲ್ ಮಿರರ್.ಕಾಂ
₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ
September 28, 2026
2:31 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror