ತನಗೇ ಸಿಎಂ ಬೇಕೆಂದು ಪಟ್ಟು ಹಿಡಿದಿದ್ದ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರಿಗೆ ಸ್ಥಾನ ಬಿಟ್ಟು ಕೊಟ್ಟು ಡಿಸಿಎಂ ಆಗಲು ಒಪ್ಪಿಗೆ ನೀಡಿದ್ದಾರೆ. ಕೆಲವೊಂದು ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷರ ಹಾಗೂ ಗಾಂಧಿ ಕುಟುಂಬದವರ ಆದೇಶಕ್ಕೆ ತಲೆ ಬಾಗಲೇ ಬೇಕಾಗುತ್ತದೆ ಎಂದು ಡಿಕೆಶಿ ಮಾಧ್ಯಮದವರ ಮುಂದೆ ಹೇಳಿಕೆ ನೀಡಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಡಿಕೆಶಿ, ಕರ್ನಾಟಕದ ಜನತೆಗೆ ಬದ್ಧರಾಗಿರಬೇಕು. ಲೋಕಸಭಾ ಚುನಾವಣೆ ಮುಂದೆ ಬರಲಿದೆ. ಹೀಗಾಗಿ ನಾವು ಬೇರೇನೂ ಮಾಡಲು ಸಾಧ್ಯವಿಲ್ಲ. ನಾನು ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಗಾಂಧಿ ಕುಟುಂಬದವರ ಆದೇಶಕ್ಕೆ ತಲೆ ಬಾಗಲೇ ಬೇಕಾಗಿದೆ. ಪಕ್ಷದಲ್ಲಿ ಹೆಚ್ಚಿನವರು ನಿರ್ಧರಿಸಿದಂತೆ ನಡೆದುಕೊಳ್ಳಲೇ ಬೇಕಾಗಿದೆ ಎಂದು ಹೇಳಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel