ಟೌಕ್ಟೇ ಚಂಡಮಾರುತದ ಬಳಿಕ ಯಾಸ್ ಚಂಡಮಾರುತವು ಬಂಗಾಳಕೊಲ್ಲಿಯಲ್ಲಿ ಬಲಗೊಳ್ಳುತ್ತಿದೆ. ಮೇ.24 ರ ನಂತರ ತಮಿಳುನಾಡು, ಒರಿಸ್ಸಾದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅದಕ್ಕೂ ಮುನ್ನವೇ ಕರ್ನಾಟಕದ ವಿವಿದೆಡೆ ಉತ್ತಮ ಮಳೆಯಾಗಲಿದೆ. 13 ಜಿಲ್ಲೆಗಳಲ್ಲಿ ಎಲ್ಲೋ ಎಲರ್ಟ್ ಘೋಷಣೆ ಮಾಡಲಾಗಿದೆ. ಮೇ.22 ಹಾಗೂ 23 ರಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೆ ಸುಳಿಗಾಳಿ ಹಾಗೂ ಹೆಚ್ಚಿನ ತೇವಾಂಶದ ಕಾರಣದಿಂದ ಈಗ ರಾಜ್ಯದಲ್ಲಿ ಮಳೆಯಾಗುತ್ತಿದೆ.
ಶುಕ್ರವಾರ ರಾತ್ರಿಯೇ ಕರ್ನಾಟಕ, ಗೋವಾ, ತಮಿಳುನಾಡಿನ ವಿವಿದೆಡೆ ಗುಡುಗು ಸಹಿತ ಮಳೆಯಾಗುವ ಸಾದ್ಯತೆ ಇದೆ.ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರಕ್ಕೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಮುಂದಿನ 24 ಗಂಟೆಗಳಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಮುಂದಿನ 48 ಗಂಟೆಗಳ ಕಾಲ ಉತ್ತಮ ಮಳೆಯಾಗಲಿದೆ. ಮೇ.24 ರ ನಂತರ ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದ ಉಂಟಾಗುವ ಚಂಡಮಾರುತ “ಯಾಸ್” ನಿಂದ ರಾಜ್ಯದಲ್ಲಿ ಅಷ್ಟೊಂದು ಪರಿಣಾಮ ಸದ್ಯಕ್ಕೆ ಕಂಡುಬರುತ್ತಿಲ್ಲ.